ETV Bharat / state

ಚಂದ್ರಶೇಖರನ್​ ಆತ್ಮಹತ್ಯೆ ಕೇಸ್: ಇಬ್ಬರು ಆರೋಪಿಗಳು ಜು.3ರವರೆಗೆ ಸಿಐಡಿ ಕಸ್ಟಡಿಗೆ - VALMIKI NIGAM SCAM - VALMIKI NIGAM SCAM

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ ಸಂಬಂಧ ಶಿವಮೊಗ್ಗ ನ್ಯಾಯಾಲಯವು, ಎ1 ಮತ್ತು ಎ2 ಆರೋಪಿಗಳನ್ನು ಜುಲೈ 3ರವರೆಗೆ ಸಿಐಡಿ ಕಸ್ಟಡಿಗೆ ನೀಡಿದೆ ಎಂದು ಆರೋಪಿಗಳ ಪರ ವಕೀಲ ಮಂಜುನಾಥ್ ತಿಳಿಸಿದರು. ಚಂದ್ರಶೇಖರನ್ ಮೇ 26ರಂದು ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು.

ಶಿವಮೊಗ್ಗ ನ್ಯಾಯಾಲಯ
ಶಿವಮೊಗ್ಗ ನ್ಯಾಯಾಲಯ (ETV Bharat)
author img

By ETV Bharat Karnataka Team

Published : Jun 24, 2024, 9:49 PM IST

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದಲ್ಲಿ ಮೊದಲ ಆರೋಪಿ ಪದ್ಮನಾಭ್ ಹಾಗೂ ಎ2 ಪರಶುರಾಮ್ ಗುರಣ್ಣನವರ್ ಅವರನ್ನು ಜುಲೈ 3ರ ತನಕ ಸಿಐಡಿ ಕಸ್ಟಡಿಗೆ ಒಪ್ಪಿಸಿ, ಶಿವಮೊಗ್ಗ ನ್ಯಾಯಾಲಯ ಆದೇಶಿಸಿದೆ.

ಸಿಐಡಿ ಡಿವೈಎಸ್ಪಿ ಮೊಹಮ್ಮದ್​ ರಫಿ ನೇತೃತ್ವದಲ್ಲಿ ಇಂದು ಶಿವಮೊಗ್ಗದ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಲಾಯಿತು. ಸಿಐಡಿ ತಂಡ ಹೆಚ್ಚುವರಿ ವಿಚಾರಣೆಗೆ ಆರೋಪಿಗಳನ್ನು ತಮ್ಮ ವಶಕ್ಕೆ ನೀಡಬೇಕೆಂದು ನ್ಯಾಯಾಧೀಶರಿಗೆ ವಿನಂತಿಸಿದರು. ಇದಕ್ಕೆ ಒಪ್ಪಿದ ನ್ಯಾಯಾಧೀಶೆ ಪಲ್ಲವಿ, ಇಬ್ಬರನ್ನು ಜುಲೈ 3ರ ವರೆಗೆ ಸಿಐಡಿ ವಶಕ್ಕೆ ನೀಡಿ ಆದೇಶ ಹೊರಡಿಸಿದರು.

ಆರೋಪಿಗಳ ಪರ ವಕೀಲ ಮಂಜುನಾಥ್ ಮಾತನಾಡಿ, "ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದ ವಿಚಾರಣೆ ನಡೆಸಿದ ಶಿವಮೊಗ್ಗದ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ, ಎ1 ಆರೋಪಿ ಪದ್ಮನಾಭ್ ಹಾಗೂ ಎ2 ಆರೋಪಿ ಪರಶುರಾಮ್ ಅವರನ್ನು ಜುಲೈ 3ರ ತನಕ ಸಿಐಡಿ ಕಸ್ಟಡಿಗೆ ಒಪ್ಪಿಸಿದೆ ಎಂದು ತಿಳಿಸಿದರು.

ಪ್ರಕರಣದ ಹಿನ್ನೆಲೆ: ನಿಗಮದಲ್ಲಿ 85 ಕೋಟಿ ರೂ. ಹಣ ಬೇರೆ ಬೇರೆ ಖಾತೆಗೆ ವರ್ಗಾವಣೆ ಆಗಿದೆ.‌ ನಿಗಮದ ಎಂಡಿ ಪದ್ಮನಾಭ್, ಲೆಕ್ಕಾಧಿಕಾರಿ ಪರಶುರಾಮ್ ದುರುಗಣ್ಣನವರ್ ಹಾಗೂ ಯುಎನ್​ಐ ಬ್ಯಾಂಕ್​ನ ಮುಖ್ಯ ವ್ಯವಸ್ಥಾಪಕ ರುಚಿಸ್ಮಿತಾ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ನಾನು ಪ್ರಾಮಾಣಿಕ. ಯಾವುದೇ ತಪ್ಪು ಮಾಡಿಲ್ಲ ಎಂದು ಡೆತ್​ನೋಟ್ ಬರೆದಿಟ್ಟು ಅಧೀಕ್ಷಕ ಚಂದ್ರಶೇಖರನ್ ಮೇ 26ರಂದು ಶಿವಮೊಗ್ಗದ ವಿನೋಬನಗರದ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.

ಇದನ್ನೂ ಓದಿ: ಅಸಹಜ ಲೈಂಗಿಕ ಕಿರುಕುಳ ಪ್ರಕರಣ: ಸೂರಜ್ ರೇವಣ್ಣ ಜು.1ರ ವರೆಗೆ ಸಿಐಡಿ ವಶಕ್ಕೆ - MLC Suraj Revanna Case

ETV Bharat Logo

Copyright © 2025 Ushodaya Enterprises Pvt. Ltd., All Rights Reserved.