ETV Bharat / state

ಹೆಣ್ಣು ಭ್ರೂಣ ಲಿಂಗ ಪತ್ತೆ ಪ್ರಕರಣ: ಸ್ಕ್ಯಾನಿಂಗ್ ಮಷಿನ್‌ ಸರಬರಾಜು ಮಾಡುತ್ತಿದ್ದ ಆರೋಪಿಸಹಿತ ಇಬ್ಬರ ಬಂಧನ - ಬೆಂಗಳೂರು

ಹೆಣ್ಣು ಭ್ರೂಣ ಲಿಂಗ ಪತ್ತೆಗೆ ಬಳಸುವ ಯಂತ್ರಗಳನ್ನು ಸರಬರಾಜು ಮಾಡುತ್ತಿದ್ದ ಆರೋಪಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಹೆಣ್ಣು ಭ್ರೂಣ ಲಿಂಗ ಪತ್ತೆ ಪ್ರಕರಣ
ಹೆಣ್ಣು ಭ್ರೂಣ ಲಿಂಗ ಪತ್ತೆ ಪ್ರಕರಣ
author img

By ETV Bharat Karnataka Team

Published : Feb 22, 2024, 9:22 PM IST

ಬೆಂಗಳೂರು: ಹೆಣ್ಣು ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಿಂಗ ಪತ್ತೆಗೆ ಬಳಸುವ ಸ್ಕ್ಯಾನಿಂಗ್ ಮಷಿನ್‌ಗಳನ್ನು ಸರಬರಾಜು ಮಾಡಿದ್ದ ಮಂಗಳೂರಿನ ಖಾಸಗಿ ಕಂಪನಿಯೊಂದರ ಮಾಲೀಕ ಲಕ್ಷ್ಮಣ್‌ ಗೌಡ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಸ್ಕ್ಯಾನಿಂಗ್ ಯಂತ್ರ ಪಡೆದಿದ್ದ ಸಿದ್ದೇಶ್ ಎಂಬಾತನನ್ನು ಸಹ ಬಂಧಿಸಲಾಗಿದೆ.

ಆರೋಪಿಯು PCPNDT (Pre-Conception and Pre-Natal Diagnostic Techniques Act)ರ ಅಡಿ ಅಗತ್ಯ ಸಾಮಗ್ರಿಗಳ ಖರೀದಿ ಮತ್ತು ರಿಪೇರಿ ಮಾಡುವ ಪರವಾನಗಿಯನ್ನ ಹೊಂದಿದ್ದ. 3 ಸ್ಕ್ಯಾನಿಂಗ್ ಮಷಿನ್‌ಗಳನ್ನು ಅಕ್ರಮವಾಗಿ ಪ್ರಕರಣದ ಇನ್ನೊಬ್ಬ ಆರೋಪಿಯಾಗಿರುವ ಆಯುರ್ವೇದಿಕ್ ವೈದ್ಯ ಮಲ್ಲಿಕಾರ್ಜುನನಿಗೆ ನೀಡಿದ್ದ. ಆರೋಪಿ ಮಲ್ಲಿಕಾರ್ಜುನ ಆ 3 ಮಷಿನ್‌ಗಳನ್ನು ಅಕ್ರಮವಾಗಿ ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡುವ ಜಾಲದ ಆರೋಪಿತರಿಗೆ ಸರಬರಾಜು ಮಾಡಿದ್ದ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಸ್ಕ್ಯಾನಿಂಗ್ ಯಂತ್ರಗಳನ್ನು ಜಪ್ತಿ ಮಾಡಲಾಗಿದೆ.

ಹೆಣ್ಣು ಭ್ರೂಣ ಪತ್ತೆ, ಹಾಗೂ ಗರ್ಭಪಾತ ಮಾಡಿಸುತ್ತಿದ್ದ ಆರೋಪದಡಿ ಶಿವನಂಜೇಗೌಡ, ವೀರೇಶ್, ನವೀನ್ ಕುಮಾರ್ ಮತ್ತು ನಯನ್ ಕುಮಾರ್ ಎಂಬುವರನ್ನು ಕಳೆದ ಅಕ್ಟೋಬರ್‌ನಲ್ಲಿ ಬೈಯಪ್ಪನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಗಳು ಗರ್ಭಿಣಿಯರನ್ನು ಗುರುತಿಸಿಕೊಂಡು ಮಂಡ್ಯದ ಆಲೆಮನೆಯೊಂದರಲ್ಲಿ ಸ್ಕ್ಯಾನ್ ಮಾಡಿಸುತ್ತಿದ್ದರು.

ಬಳಿಕ ಹೆಣ್ಣು ಭ್ರೂಣವಾದರೆ ಗರ್ಭಪಾತ ಮಾಡಿಸುತ್ತಿದ್ದರು ಎಂಬುದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿತ್ತು. ಮತ್ತಷ್ಟು ತನಿಖೆ ಮುಂದುವರೆಸಿ ಚೆನ್ನೈ ಮೂಲದ ವೈದ್ಯ ತುಳಸಿರಾಮ್, ಮೈಸೂರಿನ ಖಾಸಗಿ ಆಸ್ಪತ್ರೆಯೊಂದರ ವೈದ್ಯ ಡಾ. ಚಂದನ್ ಬಲ್ಲಾಳ್, ಆತನ ಪತ್ನಿ ಮೀನಾ, ಮೈಸೂರಿನ ಖಾಸಗಿ ಆಸ್ಪತ್ರೆಯ ರಿಸೆಪ್ಶನಿಸ್ಟ್ ರಿಜ್ಮಾ, ಲ್ಯಾಬ್ ಟೆಕ್ನಿಶಿಯನ್ ನಿಸ್ಸಾರ್ ಎಂಬಾತನನ್ನು ಸಹ ಬಂಧಿಸಲಾಗಿತ್ತು. ಬಳಿಕ ಪ್ರಕರಣದ ತನಿಖೆಯನ್ನ ಸಿಐಡಿಗೆ ವಹಿಸಲಾಗಿತ್ತು.

ಇದನ್ನೂ ಓದಿ: ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಿದ ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.