ETV Bharat / state

ಗೋವಾದಿಂದ ಕೊಕೇನ್ ತಂದು ಮಾರಾಟ: ಮಂಗಳೂರಲ್ಲಿ ಇಬ್ಬರ ಬಂಧನ - Cocaine

ಮಾದಕ ವಸ್ತು ಕೊಕೇನ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಉಳ್ಳಾಲದಲ್ಲಿ ಬಂಧಿಸಿದ್ದಾರೆ.

cocaine
ಗೋವಾದಿಂದ ಕೊಕೇನ್ ತಂದು ಮಾರಾಟ
author img

By ETV Bharat Karnataka Team

Published : Mar 18, 2024, 9:23 PM IST

ಮಂಗಳೂರು: ಗೋವಾದಿಂದ ನಿಷೇಧಿತ ಮಾದಕ ವಸ್ತು ಕೊಕೇನ್ ಖರೀದಿಸಿಕೊಂಡು ಮಂಗಳೂರು ನಗರ ಹಾಗೂ ಕೇರಳದಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಅಂಬ್ಲಮೊಗರಿನ ಸದಕತ್ (31) ಹಾಗೂ ಮಹಮ್ಮದ್ ಅಶ್ಫಕ್ (25) ಬಂಧಿತ ಆರೋಪಿಗಳಾಗಿದ್ದಾರೆ.

ಬಂಧಿತರಿಂದ 35 ಗ್ರಾಂ ಕೊಕೇನ್ ವಶಪಡಿಸಿಕೊಳ್ಳಲಾಗಿದೆ. ಇವರು ಮಂಗಳೂರು ನಗರಕ್ಕೆ ಗೋವಾದಿಂದ ನಿಷೇಧಿತ ಮಾದಕ ವಸ್ತುವಾದ ಕೊಕೇನ್ ಖರೀದಿಸಿಕೊಂಡು ಬಂದು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಇನ್ಸ್​ಪೆಕ್ಟರ್ ಶ್ಯಾಮ್ ಸುಂದರ್ ಹೆಚ್.ಎಂ. ನೇತೃತ್ವದ ಪೊಲೀಸರ ತಂಡ ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿ ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವೇಳೆ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ ರೂ. 2,72,000 ರೂ. ಮೌಲ್ಯದ 35 ಗ್ರಾಂ ಕೋಕೆನ್, 3 ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕ, 5,560 ರೂ. ನಗದು ಸೇರಿ ಒಟ್ಟು ಮೌಲ್ಯ 4,00,000 ರೂ. ಮೌಲ್ಯದ ಸ್ವತ್ತನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಸಿಇಎನ್​ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳು ಗೋವಾದಿಂದ ಕೋಕೆನ್ ಖರೀದಿಸಿ ಕರ್ನಾಟಕ, ಕೇರಳ ರಾಜ್ಯದ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಅಕ್ರಮ ವ್ಯವಹಾರ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ. ಆರೋಪಿಗಳ ಪೈಕಿ ಸದಕತ್ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸಾಗಾಟ ಹಾಗೂ ಹಲ್ಲೆ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ವಿಚಾರಣೆ ವೇಳೆ ಠಾಣೆಯಲ್ಲಿ ಥಳಿತಕ್ಕೊಳಗಾಗಿದ್ದ ಆರೋಪಿ ಸಾವು : 9 ಮಂದಿ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.