ಚಾಮರಾಜನಗರ: ಜಮೀನಿಗೆ ತೆರಳುವಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ರೈತರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬುಧವಾರ ರಾತ್ರಿ ನಡೆದಿದೆ. ಚಾಮರಾಜನಗರ ತಾಲೂಕಿನ ಅಯ್ಯನಪುರ ಗ್ರಾಮದ ನಾಗೇಂದ್ರ (45), ಮಲ್ಲೇಶ (48) ಮೃತ ರೈತರು.
ಬುಧವಾರ ರಾತ್ರಿ ತಮ್ಮ ಜಮೀನಿಗೆ ಅಯ್ಯನಪುರ ಗ್ರಾಮದ ಅಯ್ಯನಪುರ - ಇತ್ತಲಗುಡ್ಡೆ ಮಾರ್ಗದ ರಸ್ತೆಯಲ್ಲಿ ಇಬ್ಬರು ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಜೋತುಬಿದ್ದಿದ್ದ ವಿದ್ಯುತ್ ತಂತಿ ಕುತ್ತಿಗೆಗೆ ಬಿಗಿದು ವಿದ್ಯುತ್ ಪ್ರವಹಿಸಿ ಇಬ್ಬರೂ ಸ್ಥಳದಲ್ಲೇ ಅಸುನೀಗಿದ್ದಾರೆ. ಬೆಳಗ್ಗೆ ಆದರೂ ಮನೆಗೆ ರೈತರು ವಾಪಸ್ ಬರದ ಕಾರಣ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಗ್ರಾಮಸ್ಥರು ಹಾಗೂ ಸ್ಥಳೀಯ ರೈತರು ಸೆಸ್ಕ್ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಸುದ್ದಿ ತಿಳಿದು ಚಾಮರಾಜನಗರ ಪೂರ್ವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಬನ್ನೇರುಘಟ್ಟ ಉದ್ಯಾನವನದ ಆನೆ ಕಾವಾಡಿಗ ಕೆರೆಯಲ್ಲಿ ಮುಳುಗಿ ಸಾವು