ETV Bharat / state

ಹಾವೇರಿ: ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು - TWO BOYS DIED

ಇಬ್ಬರು ಬಾಲಕರು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : Feb 23, 2025, 9:21 PM IST

ಹಾವೇರಿ : ಬಹಿಲು ಬಹಿರ್ದೆಸೆ ಮುಗಿಸಿ ಕೈಕಾಲು ತೊಳೆಯಲು ಕೆರೆಗೆ ಹೋಗಿದ್ದ ಇಬ್ಬರು ಬಾಲಕರು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಜಗದೀಶ್ ನಾಗೋಜಿ ಎಂಬವರ ಪುತ್ರ ನಿಖಿಲ್ ನಾಗೋಜಿ (11) ಮತ್ತು ಪ್ರಕಾಶ್ ಚೋಳಪ್ಪನವರ್ ಎಂಬವರ ಪುತ್ರ ಧನುಷ್ ಚೊಳಪ್ಪನವರ್ (13) ಮೃತ ಬಾಲಕರು ಎಂದು ಗುರುತಿಸಲಾಗಿದೆ.

ಬಾಲಕರು ಗ್ರಾಮದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಬಳಿಕ ಬಹಿಲು ಬಹಿರ್ದೆಸೆ ಮುಗಿಸಿ ಕೈಕಾಲು ತೊಳೆಯಲು ದೊಡ್ಡಕೆರೆಗೆ ಹೋಗಿದ್ದರು. ಈ ಸಂದರ್ಭದಲ್ಲಿ ಬಾಲಕರು ಕಾಲುಜಾರಿ ಕೆರೆಗೆ ಬಿದ್ದಿದ್ದು, ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಬಾಲಕರು ಕೆರೆಯಲ್ಲಿ ಮುಳುಗಿರುವ ಬಗ್ಗೆ ವಿಷಯ ತಿಳಿದ ಸ್ಥಳೀಯರು ಅವರನ್ನು ಕೆರೆಯಿಂದ ಮೇಲೆತ್ತಿದ್ದಾರೆ. ಆನಂತರ ಬಾಲಕರನ್ನು ಹಾನಗಲ್ ತಾಲೂಕು ಆಸ್ಪತ್ರೆಗೆ ತೆಗೆದುಕೊಂಡು ಬಂದಿದ್ದು, ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಇನ್ನು, ಬಾಲಕರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧ ಹಾನಗಲ್ ಪೊಲೀಸ್ ಠಾಣೆಯಲ್ಲಿ ನಿಖಿಲ್ ತಂದೆ ಜಗದೀಶ್ ನಾಗೋಜಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ತುಂಗಭದ್ರಾ ನದಿಯಲ್ಲಿ ಕೊಚ್ಚಿಹೋದ ತೆಲಂಗಾಣದ ವೈದ್ಯೆ; ಶವಕ್ಕಾಗಿ ಸತತ 10 ಗಂಟೆ ಕಾರ್ಯಾಚರಣೆ

ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋಗಿದ್ದ ವೈದ್ಯೆಯ ಮೃತದೇಹ ಪತ್ತೆ(ಕೊಪ್ಪಳ) : ರಜೆ ಕಳೆಯಲು ಸ್ನೇಹಿತರೊಂದಿಗೆ ಬಂದು, ಈಜಾಡಲು ಹೋಗಿದ್ದ ಸಂದರ್ಭದಲ್ಲಿ ತುಂಗಭದ್ರಾ ನದಿಯಲ್ಲಿ ಕೊಚ್ಚಿಹೋಗಿದ್ದ ಹೈದರಾಬಾದ್​​ನ ಖಾಸಗಿ ಆಸ್ಪತ್ರೆಯ ವೈದ್ಯೆ ಅನನ್ಯ ಮೋಹನ್​ರಾವ್ ಅವರ ಮೃತದೇಹ ಗುರುವಾರ ಪತ್ತೆಯಾಗಿತ್ತು. ಅನನ್ಯ ಮೋಹನ್​ರಾವ್ ಅವರು ತಾಲೂಕಿನ ಸಣಾಪುರದ ಸಮೀಪ ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋಗಿದ್ದರು. ಸುಮಾರು 16 ಗಂಟೆಗಳ ಶೋಧ ಕಾರ್ಯಾಚರಣೆ ಬಳಿಕ ಮೃತದೇಹವನ್ನು ನದಿಯಿಂದ ಮೇಲೆತ್ತಲಾಗಿತ್ತು.

ನದಿಯಲ್ಲಿನ ಕಲ್ಲು ಬಂಡೆಗಳ ಕೊರಕಲು ಸಂದಿಯಲ್ಲಿ ಮೃತದೇಹ ಸಿಲುಕಿಕೊಂಡಿತ್ತು. ಇದನ್ನು ಸ್ಥಳೀಯ ಈಜುಗಾರರು ಗಮನಿಸಿದ್ದರು. ಅಲ್ಲಿಗೆ ತೆರಳಿ ಪ್ರಯಾಸಪಟ್ಟು ಕೊರಕಲುಗಳ ಮಧ್ಯೆ ಸಿಲುಕಿದ್ದ ಶವವನ್ನು ಹರಸಾಹಸಪಟ್ಟು ಹೊರತಂದಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.