ETV Bharat / state

ಸರ್ಕಾರಿ ಬಸ್ ಚಾಲಕನ ರೀಲ್ಸ್ ಹುಚ್ಚಾಟ; ರೈತರಿಬ್ಬರಿಗೆ ಗಾಯ, ಎರಡು ಎತ್ತುಗಳು ಸಾವು - Hubballi Bus Accident - HUBBALLI BUS ACCIDENT

ಬಸ್ ಚಲಾಯಿಸುತ್ತಲೇ ಚಾಲಕ ರೀಲ್ಸ್ ಮಾಡುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

BULLS DIED  FARMERS INJURED  ACCIDENT OVER REELS MAKING  DHARWAD
ಸರ್ಕಾರಿ ಬಸ್ ಚಾಲಕನ ರೀಲ್ಸ್‌ನಿಂದ ನಡೆದ ಘಟನೆ (ETV Bharat)
author img

By ETV Bharat Karnataka Team

Published : Jul 17, 2024, 12:50 PM IST

ಹುಬ್ಬಳ್ಳಿ: ಸರ್ಕಾರಿ ಬಸ್ ಚಾಲಕನ ರೀಲ್ಸ್ ಹುಚ್ಚಾಟಕ್ಕೆ ಎರಡು ಎತ್ತುಗಳು ಬಲಿಯಾಗಿದ್ದು, ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಕುಸುಗಲ್ ಗ್ರಾಮದ ಸಮೀಪ ಮಂಗಳವಾರ ಸಂಜೆ ಸಂಭವಿಸಿತು.

ಘಟನೆ ನಡೆದಿದ್ದೇಗೆ?: ಹುಬ್ಬಳ್ಳಿಯಿಂದ ಬಾಗಲಕೋಟೆ ಕಡೆ ಬಸ್ ಸಂಚರಿಸುತ್ತಿತ್ತು. ಚಾಲಕ ಬಸ್ ಚಾಲನೆ ಮಾಡುತ್ತಾ ರೀಲ್ಸ್ ಮಾಡುತ್ತಿದ್ದ. ಈ ಸಂದರ್ಭದಲ್ಲಿ ಮುಂದಿದ್ದ ಚಕ್ಕಡಿಯನ್ನು ಗಮನಿಸದೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಎರಡು ಎತ್ತುಗಳು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ರೈತರು ಗಾಯಗೊಂಡರು.

ಗಾಯಗೊಂಡ ರೈತರ ಪರಿಸ್ಥಿತಿ ಗಂಭೀರವಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ, ಚಾಲಕ ರಮೇಶ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ತುಂಗಾ ಅಣೆಕಟ್ಟೆಗೆ 50 ಸಾವಿರ ಕ್ಯೂಸೆಕ್ ಒಳಹರಿವು: ಕಲ್ಲುಹಳ್ಳ ಸೇತುವೆಯ ಪಿಚ್ಚಿಂಗ್ ಕುಸಿತ - Tunga Dam

ETV Bharat Logo

Copyright © 2024 Ushodaya Enterprises Pvt. Ltd., All Rights Reserved.