ETV Bharat / state

ಉಡುಪಿ: ಬಾವಿಗೆ ಬಿದ್ದು ಮಕ್ಕಳಿಬ್ಬರು ಸಾವು, ತಾಯಿ ಸ್ಥಿತಿ ಗಂಭೀರ - Two children died - TWO CHILDREN DIED

ಮನೆಯ ಸಮೀಪದ ಗದೆಯಲ್ಲಿನ ಬಾವಿಗೆ ಬಿದ್ದ ಪರಿಣಾಮ ಎರಡು ಮಕ್ಕಳು ಮೃತಪಟ್ಟು, ತಾಯಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಕೊಲ್ಲೂರಿನಲ್ಲಿ ನಡೆದಿದೆ. ಕೊಲ್ಲೂರು ಪೊಲೀಸ್​ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಬಾವಿಗೆ ಬಿದ್ದು ಮಕ್ಕಳಿಬ್ಬರು ಸಾವು, ತಾಯಿ ಗಂಭೀರ
ಬಾವಿಗೆ ಬಿದ್ದು ಮಕ್ಕಳಿಬ್ಬರು ಸಾವು, ತಾಯಿ ಗಂಭೀರ (ETV Bharat)
author img

By ETV Bharat Karnataka Team

Published : Jun 30, 2024, 4:53 PM IST

ಉಡುಪಿ: ಮನೆಯ ಸಮೀಪದ ಗದೆಯಲ್ಲಿನ ಬಾವಿಗೆ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟು, ತಾಯಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ದಾರುಣ ಘಟನೆ ಕೊಲ್ಲೂರು ಸಮೀಪ ಬೆಳ್ಳಾಲ ಗ್ರಾಮದ ಹೊಟ್ನಬೈಲು ಎಂಬಲ್ಲಿ ಶನಿವಾರ ನಡೆದಿದೆ. ಬಾವಿಗೆ ಬಿದ್ದು ಮೃತಪಟ್ಟ ಮಕ್ಕಳನ್ನು ಸ್ಥಳೀಯ ನಿವಾಸಿ ಶೀಲಾ (34) ಎನ್ನುವವರ 13 ವರ್ಷದ ಪುತ್ರ ಹಾಗೂ 8 ವರ್ಷದ ಪುತ್ರಿ ಎಂದು ಗುರುತಿಸಲಾಗಿದೆ.

ಶನಿವಾರ (ಜೂ. 29) ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ದುರಂತ ನಡೆದಿದೆ ಎನ್ನಲಾಗುತ್ತಿದ್ದು, ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಬಿದ್ದಿರುವುದನ್ನು ನೋಡಿದ ಸ್ಥಳೀಯರು ಮೂವರನ್ನು ರಕ್ಷಣೆ ಮಾಡಲು ಯತ್ನಿಸಿದರಾದರೂ ಮಕ್ಕಳಿಬ್ಬರನ್ನು ಉಳಿಸಿಕೊಳ್ಳಲಾಗಲಿಲ್ಲ. ತಾಯಿ ಶೀಲಾ ಅವರನ್ನು ಚಿಕಿತ್ಸೆಗಾಗಿ ಕುಂದಾಪುರ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ.

ದುರಂತಕ್ಕೆ ನಿರ್ದಿಷ್ಟ ಕಾರಣಗಳೇನು ಎನ್ನುವುದರ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಆಕಸ್ಮಿಕವಾಗಿ ಮೂವರು ಆವರಣವಿಲ್ಲದ ಬಾವಿಗೆ ಬಿದ್ದರೆ ಅಥವಾ ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಯ ಪ್ರಯತ್ನಕ್ಕೆ ಮುಂದಾಗಿದ್ದರೆ ಎನ್ನುವುದು ಪೊಲೀಸರ ತನಿಖೆಯಿಂದ ತಿಳಿಯಬೇಕಾಗಿದೆ. ಪ್ರಕರಣದ ಕುರಿತಂತೆ ಹೆಚ್ಚಿನ ಮಾಹಿತಿಗಳು ತಿಳಿದುಬಂದಿಲ್ಲ. ಕೊಲ್ಲೂರು ಠಾಣಾಧಿಕಾರಿ ಜಯಶ್ರೀ ಸ್ಥಳಕ್ಕೆ ಭೇಟಿ ನೀಡಿದ್ದು, ಠಾಣೆಯಲ್ಲಿ ಯುಡಿಆರ್(ಅಸಹಜ ಸಾವು) ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ವಿಲಾಸಿ ಜೀವನ ನಡೆಸುತ್ತಿದ್ದ ಯುವಕನ ಅಪಹರಣ, ಆರೋಪಿಗಳ ಬಂಧನ - Kidnap Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.