ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಕಾಲ ನಡೆ ಇ.ಡಿ ( ಜಾರಿ ನಿರ್ದೇಶನಾಲಯದ) ದಾಳಿ ಮುಗಿದಿದೆ. ಇ.ಡಿ ಭಾನುವಾರ ಬೆಳಗಿನ ಜಾವ 2:40 ಗಂಟೆವರೆಗೂ ಪರಿಶೀಲನೆ ನಡೆಸಿ, ಕೆಲ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದೆ.
ಇ.ಡಿ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಪತ್ನಿ ವಾಪಸ್ ನೀಡಿದ 14 ನಿವೇಶನ ಹಾಗೂ ಮುಡಾದಲ್ಲಿ 50:50 ಅನುಪಾತದಡಿಯಲ್ಲಿ ನಡೆದಿರುವ ಅಕ್ರಮದ ದಾಖಲೆಗಳು ಹಾಗೂ ಹಾರ್ಡ್ ಡಿಸ್ಕ್ ಜೊತೆಗೆ ಜೆರಾಕ್ಸ್, ಮೂಲ ಪ್ರತಿಗಳನ್ನು ಸಂಗ್ರಹಿಸಿಕೊಂಡು ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ತೆಗೆದುಕೊಂಡು ಹೋಗಿದ್ದಾರೆ.
ಇ.ಡಿ. ಅಧಿಕಾರಿಗಳು ದಾಖಲೆಗಳನ್ನು ಸಂಗ್ರಹಿಸಲು ಮುಡಾದ ಆಯುಕ್ತ ರಘುನಂದನ್, ಕಾರ್ಯದರ್ಶಿ ಪ್ರಸನ್ನ ಕುಮಾರ್ ಸೇರಿದಂತೆ ಸಿಬ್ಬಂದಿಗಳು ಸಹಕಾರ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಸಿಎಂ ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ ಮಾಡಿದ ಆರ್ಟಿಐ ಕಾರ್ಯಕರ್ತ