ಬಂಟ್ವಾಳ (ದಕ್ಷಿಣ ಕನ್ನಡ): ಬಂಟ್ವಾಳ ಹೊರವಲಯದ ನಾವೂರು ಎಂಬಲ್ಲಿ ಭಾನುವಾರ ಸಂಜೆ ನೇತ್ರಾವತಿ ನದಿಗೆ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲಾಗಿದ್ದಾರೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಹಾಗೂ ಇಲಿಯಾಸ್ ಅವರ ಪುತ್ರಿ ಮರಿಯಮ್ ನಾಶೀಯಾ (14 ) ನೀರುಪಾಲಾಗಿರುವ ಬಾಲಕಿಯರು.
ಉರಿಬಿಸಿಲು, ಸೆಕೆ ಹಿನ್ನೆಲೆಯಲ್ಲಿ ಜನರು ನದಿ ದಂಡೆಯಲ್ಲಿ ಕುಳಿತುಕೊಳ್ಳುವುದು, ಸಮುದ್ರದಂಡೆಯಲ್ಲಿ ವಿಹರಿಸುವುದು ಸಾಮಾನ್ಯವಾಗಿದೆ. ಅದರಂತೆ ಉಳ್ಳಾಲದಿಂದ ನಾವೂರಿಗೆ ಕಾರ್ಯಕ್ರಮವೊಂದಕ್ಕೆ ಆಗಮಿಸಿದ ಕುಟುಂಬದ ಸದಸ್ಯರು ನೇತ್ರಾವತಿ ನದಿ ದಂಡೆಯಲ್ಲಿ ಕುಳಿತು ಮಾತನಾಡುತ್ತಿದ್ದರು. ಈ ಸಂದರ್ಭ ನದಿಯ ಪಕ್ಕದಲ್ಲೇ ಆಟವಾಡುತ್ತಿದ್ದ ಮಕ್ಕಳು ನದಿಗೆ ಇಳಿದು, ಆಳ ತಿಳಿಯಲಾರದಾಗಿದ್ದಾರೆ. ನೋಡನೋಡುತ್ತಿದ್ದಂತೆ ನದಿಯಲ್ಲಿ ಮುಳುಗಿ ಅವರು ನೀರುಪಾಲಾಗಿದ್ದಾರೆ.
ಮೂಲತಃ ನಾವೂರ ನಿವಾಸಿಯಾದ ಇಲಿಯಾಸ್ ಅವರು ಇತ್ತೀಚಿಗೆ ಉಳ್ಳಾಲದಲ್ಲಿ ಮನೆ ಕಟ್ಟಿದ್ದರು. ಭಾನುವಾರ ನಾವೂರ ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಸಂಜೆ ವೇಳೆ ಮನೆಯವರ ಜೊತೆಗೆ ನಾವೂರದ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿ ಬಳಿ ತೆರಳಿದ್ದರು.
ಈ ವೇಳೆ ಮನೆಯವರ ಮುಂದೆ ಮಕ್ಕಳು ನೀರಿನ ಸಮೀಪ ಆಟ ಆಡುತ್ತಾ ಇದ್ದು, ಮನೆಯವರ ಮುಂದೆಯೇ ಈ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : ಹುಬ್ಬಳ್ಳಿ: ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಸಾವು - Two Youths Drowned