ETV Bharat / state

20 ಗುಂಟೆ ಜಾಗಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ: ಓರ್ವ ವ್ಯಕ್ತಿಯ ಕೊಲೆ - man murder for land

ಕೇವಲ 20 ಗುಂಟೆ ಜಾಗಕ್ಕಾಗಿ ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿಯಲ್ಲಿ ಓರ್ವನ ಕೊಲೆಯಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ.

20 ಗುಂಟೆ ಜಾಗಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ
20 ಗುಂಟೆ ಜಾಗಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ (ETV Bharat)
author img

By ETV Bharat Karnataka Team

Published : Sep 24, 2024, 10:31 PM IST

ಹೊಸಕೋಟೆ: 20 ಗುಂಟೆ ಜಾಗಕ್ಕಾಗಿ ಎರಡು ಗುಂಪುಗಳ ನಡುವೆ ನಡೆದ ಜಗಳ ವ್ಯಕ್ತಿಯ ಕೊಲೆಯೊಂದಿಗೆ ಅಂತ್ಯವಾಗಿದೆ. ಕೊಲೆ ಮಾಡಿದ ಆರೋಪಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಹೊಸಕೋಟೆ ತಾಲೂಕಿನ ದಬ್ಬಕುಂಟೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಇದೇ ಗ್ರಾಮದ ಗೋವಿಂದಪ್ಪ (50) ಕೊಲೆಯಾದ ದುರ್ದೈವಿ. ಕೊಲೆ ಮಾಡಿದ ಆರೋಪಿ ಸಹ ಇದೇ ಗ್ರಾಮದ ಮಂಜುನಾಥ್ (43) ಎಂದು ಗುರುತಿಸಲಾಗಿದೆ.

20 ಗುಂಟೆ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ಕಲಹ ನಡೆಯುತ್ತಿತ್ತು. ಮಂಗಳವಾರ ಜಮೀನು ವಿಚಾರಕ್ಕೆ ಜಗಳ ಶುರುವಾಗಿದೆ. ಎರಡು ಗುಂಪುಗಳ ನಡುವೆ ಜಗಳ ಪ್ರಾರಂಭವಾಗಿ, ಆರೋಪಿ ಮಂಜುನಾಥ್ ಗೋವಿಂದಪ್ಪನವರ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ. ಇದರಿಂದ ತೀವ್ರ ಗಾಯಕ್ಕೀಡಾದ ಗೋವಿಂದಪ್ಪ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ.

ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ, ಆರೋಪಿಯನ್ನು ಬಂಧಿಸಿದ್ದಾರೆ. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್​​​ಪಿ ಸಿ.ಕೆ.ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ತಾಯಿ ಆಶಾ‌ ಕಾರ್ಯಕರ್ತೆ, ತಂದೆ ಸಿಪಾಯಿ.. 9 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡ ಹಳ್ಳಿ ಹುಡುಗಿ ಜಯಶ್ರೀ - KUD Convocation

ETV Bharat Logo

Copyright © 2024 Ushodaya Enterprises Pvt. Ltd., All Rights Reserved.