ETV Bharat / state

ಉಡುಪಿ: ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ ಆರೋಪ - ಪತ್ನಿ ಸೇರಿ ಇಬ್ಬರು ಸೆರೆ - HUSBAND MURDER CASE

ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ತನ್ನ ಪತಿಯನ್ನು ಕೊಲೆಗೈದ ಆರೋಪ ಪ್ರಕರಣ ಕಾರ್ಕಳ ಸಮೀಪ ಅಜೆಕಾರಿನ ಮರ್ಣೆ ಗ್ರಾಮದಲ್ಲಿ ನಡೆದಿದೆ.

ಬಂಧಿತ ಆರೋಪಿ
ಪ್ರತಿಮಾ ಹಾಗೂ ದಿಲೀಪ್‌ (ETV Bharat)
author img

By ETV Bharat Karnataka Team

Published : Oct 25, 2024, 8:15 PM IST

ಉಡುಪಿ: ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ತನ್ನ ಪತಿಗೆ ವಿಷವುಣಿಸಿ ಬಳಿಕ ಉಸಿರುಗಟ್ಟಿಸಿ ಕೊಲೆಗೈದ ಆರೋಪ ಪ್ರಕರಣ ಕಾರ್ಕಳ ಸಮೀಪ ಅಜೆಕಾರಿನ ಮರ್ಣೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಬಾಲಕೃಷ್ಣ (44) ಹತ್ಯೆಯಾದ ಪತಿಯಾಗಿದ್ದು, ಪ್ರಕರಣ ಸಂಬಂಧ ಆರೋಪಿ ಪತ್ನಿ ಪ್ರತಿಮಾ ಹಾಗೂ ಪ್ರಿಯಕರ ಹಿರ್ಗಾನದ ದಿಲೀಪ್‌ ಎಂಬಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕೃಷ್ಣ ಅವರ ಸಹೋದರ ರಾಮಕೃಷ್ಣ ನೀಡಿದ ದೂರಿನ ಅನ್ವಯ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಜ್ವರದಿಂದ ಬಳಲುತ್ತಿದ್ದ ಬಾಲಕೃಷ್ಣ ಅವರನ್ನು ಕಾರ್ಕಳದ ರೋಟರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷಿಸಿದ ವೈದ್ಯರು ಕಾಮಾಲೆ ರೋಗವಿದೆ ಎಂದು ತಿಳಿಸಿದ್ದರು. ಹಾಗಾಗಿ, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ, ಮಂಗಳೂರು, ಬೆಂಗಳೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಹೀಗಿದ್ದರೂ ಚಿಕಿತ್ಸೆ ಫಲಿಸದ ಕಾರಣ ಅ.19ರಂದು ಶನಿವಾರ ರಾತ್ರಿ ಅವರನ್ನು ಮನೆಗೆ ಕರೆತರಲಾಗಿತ್ತು. ಆದರೆ, ಮರುದಿನ ಅ.20ರಂದು ಬೆಳಗ್ಗಿನ ಜಾವ 3.30ರ ಹೊತ್ತಿಗೆ ಬಾಲಕೃಷ್ಣ ಮೃತಪಟ್ಟಿದ್ದರು. ದಿಢೀರ್ ಕಾಣಿಸಿಕೊಂಡ ಅನಾರೋಗ್ಯದಿಂದ ಮೃತಪಟ್ಟ ಬಗ್ಗೆ ಪ್ರತಿಮಾಳ ಅಣ್ಣ ಪದೇ ಪದೇ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಪ್ರತಿಮಾ ಮತ್ತು ದಿಲೀಪ್ ತಮ್ಮ ಗೆಳೆತನಕ್ಕೆ ಅಡ್ಡ ಬರುತ್ತಿದ್ದ ಬಾಲಕೃಷ್ಣ ಅವರನ್ನು ಕೊಲೆ ಮಾಡಲು ಯೋಚಿಸಿದ್ದರು. ಯೋಜನೆಯಂತೆ ದಿಲೀಪ್​ ಯಾವುದೋ ವಿಷ ಪದಾರ್ಥ ತಂದು, ಅದನ್ನು ಊಟದಲ್ಲಿ ಬೆರೆಸಿಕೊಟ್ಟರೆ ನಿಧಾನವಾಗಿ ಸಾಯುತ್ತಾರೆ ಎಂದು ಹೇಳಿದ್ದಾನೆ. ಅದರಂತೆ ಪ್ರತಿಮಾ ಊಟದಲ್ಲಿ ವಿಷ ಹಾಕಿ ಬಾಲಕೃಷ್ಣ ಅವರಿಗೆ ಕೊಟ್ಟಿದ್ದಾಳೆ. ನಂತರ ಅವರಿಗೆ ಅನಾರೋಗ್ಯ ಉಂಟಾಗಿದೆ ಎಂದು ದೂರಿನಲ್ಲಿ ರಾಮಕೃಷ್ಣ ತಿಳಿಸಿದ್ದರು.

ಆಸ್ಪತ್ರೆಯಿಂದ ಅ.20ರಂದು ಬೆಳಗಿನ ಜಾವ 01:30 ಗಂಟೆಗೆ ದಿಲೀಪ್​ ಮನೆಗೆ ಬಂದಿದ್ದು, ಪ್ರತಿಮಾ ಮತ್ತು ದಿಲೀಪ್​ ಸೇರಿ ಬೆಡ್​ಶೀಟ್​ನಿಂದ ಬಾಲಕೃಷ್ಣ ಮುಖಕ್ಕೆ ಒತ್ತಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದೇವೆ ಎಂದು ಪ್ರತಿಮಾ ಒಪ್ಪಿಕೊಂಡಿರುವುದಾಗಿ ಬಾಲಕೃಷ್ಣ ಅವರ ಸಹೋದರ ರಾಮಕೃಷ್ಣ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ದಾವಣಗೆರೆ: ತಿಂಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಕೊಳೆತ ಸ್ಥಿತಿಯಲ್ಲಿ ಪತ್ತೆ; ಕೊಲೆ ಆರೋಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.