ETV Bharat / state

ದೇವದುರ್ಗ ಬಳಿ ಕಾರು - ಬೈಕ್ ಮಧ್ಯೆ ಡಿಕ್ಕಿ: ಇಬ್ಬರು ಸಾವು - Car bike collision - CAR BIKE COLLISION

ಕಾರು ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

Etv Bharat
Etv Bharat
author img

By ETV Bharat Karnataka Team

Published : Apr 25, 2024, 8:32 AM IST

ರಾಯಚೂರು: ಕಾರು ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಬೈಕ್ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದು, ಮತ್ತೊಬ್ಬ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣ ಹೊರವಲಯದಲ್ಲಿನ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಗ್ರಾಮದ ಗುತ್ತಪ್ಪ (45) ಸ್ಥಳದಲ್ಲಿ ಮೃತಪಟ್ಟಿದ್ದು, ಮೊರಾರ್ಜಿ ವಸತಿ ನಿಲಯದಲ್ಲಿ ಡಿ ದರ್ಜೆ ನೌಕರರಾಗಿರುವ ಜಾಲಹಳ್ಳಿ ನಿವಾಸಿ ಜಗದೀಶ್ (50) ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ. ಮೃತರಿಬ್ಬರೂ ಬೈಕ್​ನಲ್ಲಿ ದೇವದುರ್ಗ ಪಟ್ಟಣದಿಂದ ಜಾಲಹಳ್ಳಿ ಕಡೆ ತೆರಳುತ್ತಿದ್ದರು.

ಹೊರವಲಯದಲ್ಲಿ ಬರುವ ಪೆಟ್ರೋಲ್ ಬಂಕ್ ಬಳಿ ಜಾಲಹಳ್ಳಿ ಕಡೆಯಿಂದ ಬರುತ್ತಿದ್ದ ಕಾರು ಮತ್ತು ಜಾಲಹಳ್ಳಿ ಕರೆ ತೆರಳುತ್ತಿದ್ದ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದೆ. ಇದರಿಂದ ಬೈಕ್‌ನಲ್ಲಿದ್ದ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದರು. ಇದರಿಂದಾಗಿ ಗುತ್ತಪ್ಪ ಸ್ಥಳದಲ್ಲಿಯೇ ಸ್ವಾನ್ನಪಿದ್ದರೆ, ಗಾಯಗೊಂಡ ಜಗದೀಶ್​​ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ವಿಜಯಪುರ: ಕಾರು - ಲಾರಿ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ದುರ್ಮರಣ - VIJAYAPURA ACCIDENT

ಕಾರ್ ಟೈರ್ ಬ್ಲಾಸ್ಟ್‌ ಆದ ಪರಿಣಾಮ ನಡೆದಿದೆ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಪೊಲೀಸರು ಭೇಟಿ ನೀಡಿದ್ದು, ತನಿಖೆ ಮುಂದುವರೆಸಿದ್ದಾರೆ. ಮೃತರ ಸಂಬಂಧಿಕರ ದೂರಿನ ಮೇಲೆ ಕಾರು ಚಾಲಕನ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಭೀಕರ ಅಪಘಾತ: ಮಹಾರಾಷ್ಟ್ರಕ್ಕೆ ಮದುವೆಗೆಂದು ತೆರಳುತ್ತಿದ್ದ ಬಾಗಲಕೋಟೆಯ ಐವರು ದುರ್ಮರಣ - Road Accident

ETV Bharat Logo

Copyright © 2024 Ushodaya Enterprises Pvt. Ltd., All Rights Reserved.