ಕಡಬ (ದಕ್ಷಿಣ ಕನ್ನಡ): ಕಡಬದ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಇನ್ನಿಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಬಿನ್ನನ್ನು ಮಾರ್ಚ್ 5 ರಂದು ಬಂಧಿಸಲಾಗಿತ್ತು. ಉಪ್ಪಿನಂಗಡಿ ವೃತ್ತ ನಿರೀಕ್ಷಕರ ನೇತೃತ್ವದ ತಂಡವು ಆರೋಪಿ ಜೊತೆ ಕೇರಳದ ಎರ್ನಾಕುಲಂ ಮತ್ತು ತಮಿಳುನಾಡಿನ ಕೊಯಂಮುತ್ತೂರಿನ ಪ್ರದೇಶಕ್ಕೆ ತೆರಳಿ ತನಿಖೆ ನಡೆಸಿತ್ತು. ಇದೀಗ ಕೇರಳದಲ್ಲಿ ಮತ್ತಿಬ್ಬರನ್ನು ವಶಕ್ಕೆ ಪಡೆದು, ಕಡಬಕ್ಕೆ ಕರೆತರಲಾಗಿದೆ ಎಂದು ತಿಳಿದುಬಂದಿದೆ.
ಆರೋಪಿ ಅಬಿನ್ ಆ್ಯಸಿಡ್ ದಾಳಿ ನಡೆಸಿದ ದಿನ ಕಾಲೇಜಿನ ಸಮವಸ್ತ್ರ ಹೋಲುವ ಡ್ರೆಸ್ ಧರಿಸಿ ಬಂದಿದ್ದ. ಇದನ್ನು ಹೊಲಿದು ಕೊಟ್ಟ ವ್ಯಕ್ತಿ ಹಾಗೂ ಆನ್ಲೈನ್ ಮೂಲಕ ಆ್ಯಸಿಡ್ ಖರೀದಿಸಿ ಕೊಟ್ಟಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗುತ್ತಿದ್ದ ಆರೋಪಿ ಹಿಡಿದ ವಿದ್ಯಾರ್ಥಿಗಳು; ಸಿಸಿಟಿವಿ ವಿಡಿಯೋ