ETV Bharat / state

ದ್ವಿಚಕ್ರ ವಾಹನ ಕದ್ದು ನಕಲಿ ದಾಖಲೆ ಸೃಷ್ಟಿಸಿ ಮಾರಾಟ; ಇಬ್ಬರ ಬಂಧನ - Two Wheelers Theft Case - TWO WHEELERS THEFT CASE

ದ್ವಿಚಕ್ರ ವಾಹನ ಕದ್ದು ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

THEFT OF VEHICLES
ವಶಪಡಿಸಿಕೊಳ್ಳಲಾದ ಸ್ವತ್ತುಗಳು ಮತ್ತು ಆರೋಪಿಗಳು. (ETV Bharat)
author img

By ETV Bharat Karnataka Team

Published : Aug 20, 2024, 5:33 PM IST

ಬೆಂಗಳೂರು: ದ್ವಿಚಕ್ರ ವಾಹನಗಳನ್ನು ಕದ್ದು ಅವುಗಳ ಎಂಜಿನ್ ಹಾಗೂ ಚಾಸಿ ನಂಬರ್‌ ಟ್ಯಾಂಪರಿಂಗ್ ಮಾಡಿ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಆನ್‌ಲೈನ್‌ನಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿದ್ಯಾರಣ್ಯಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ಹಾಗೂ ಸಾಯಿತೇಜ ಬಂಧಿತರು. ಇವರಿಂದ 25 ದ್ವಿಚಕ್ರ ವಾಹನಗಳು, 6 ಮೊಬೈಲ್ ಫೋನ್‌ಗಳು, 2 ಲ್ಯಾಪ್‌ಟಾಪ್‌ಗಳು ಹಾಗೂ ಒಂದು ಕಲರ್ ಪ್ರಿಂಟರ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Two people were arrested for stealing and selling two-wheelers
ಪೊಲೀಸರು ವಶಕ್ಕೆ ಪಡೆದ ಸ್ವತ್ತುಗಳು (ETV Bharat)

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಆಂಧ್ರ ಪ್ರದೇಶದ ಕಡಪ ಜಿಲ್ಲೆಗಳಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಗಳು, ಅವುಗಳನ್ನು ಹುಣಸಮಾರನಹಳ್ಳಿಯಲ್ಲಿರುವ ತಮ್ಮ ಮನೆಗೆ ತಂದು ಅಸಲಿ ಇಂಜಿನ್ ಹಾಗೂ ಚಾಸಿ ನಂಬರ್‌ಗಳನ್ನು ಟ್ಯಾಂಪರ್ ಮಾಡುತ್ತಿದ್ದರು. ನಂತರ ಸರಿಹೊಂದುವ ನಕಲಿ ಆರ್‌ಸಿ ಕಾರ್ಡ್, ಇನ್ಸೂರೆನ್ಸ್, ನಂಬರ್ ಪ್ಲೇಟ್‌ಗಳನ್ನು ಸೃಷ್ಟಿಸುತ್ತಿದ್ದರು. ಆನ್‌ಲೈನ್‌ನಲ್ಲಿ ಹಾಗೂ ಕೆಲವೊಮ್ಮೆ ನೇರವಾಗಿ ಮಾರಾಟ ಮಾಡುತ್ತಿದ್ದರು. ಇತ್ತೀಚಿಗೆ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳ ಕಳವು ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದರಿಂದ ಆರೋಪಿಗಳ ಪತ್ತೆಗಾಗಿ ವಿಶೇಷ ಪೊಲೀಸ್ ತಂಡ ರಚಿಸಲಾಗಿತ್ತು.

ಇದನ್ನೂ ಓದಿ: ಬೆಂಗಳೂರಲ್ಲಿ ಯುವಕರಿಂದ ವ್ಹೀಲಿಂಗ್ ಹುಚ್ಚಾಟ: ಫ್ಲೈಓವರ್​ನಿಂದ​ ಸ್ಕೂಟರ್​ ಕೆಳಗೆಸೆದು ವಾಹನ ಸವಾರರ ಆಕ್ರೋಶ - scooters Wheeling

ETV Bharat Logo

Copyright © 2025 Ushodaya Enterprises Pvt. Ltd., All Rights Reserved.