ಚಿಕ್ಕಮಗಳೂರು: ನಿಂತಿದ್ದ ಆಟೋಗೆ ಹಿಂದಿನಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ತೇಗೂರು ಸರ್ಕಲ್ ಬಳಿ ಶನಿವಾರ ರಾತ್ರಿ ಸಂಭವಿಸಿದೆ.
ನಲ್ಲೂರು ಗ್ರಾಮದ ರಘು, ಮಲ್ಲೆ ದೇವರಹಳ್ಳಿ ಗ್ರಾಮದ ಮತ್ತೋರ್ವ ಯುವಕ ಸಾವನ್ನಪ್ಪಿದವರು. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆ ಬದಿಯ ಹೂವಿನ ಅಂಗಡಿ ಸಂಪೂರ್ಣ ಜಖಂ ಆಗಿದೆ. ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು, ತನಿಖೆಯನ್ನು ಮುಂದುವರೆಸಿದ್ದಾರೆ.
ಇದನ್ನೂ ಓದಿ: ಕಾರುಗಳ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು, ಇಬ್ಬರಿಗೆ ಗಂಭೀರ ಗಾಯ - AURANGABAD CAR ACCIDENT