ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಮಳೆಯಿಂದ ಅಂಕೋಲಾ ತಾಲೂಕಿನ ಶಿರೂರು ಗ್ರಾಮದಲ್ಲಿ ಭೂಕುಸಿತ ಸಂಭವಿಸಿದೆ. ಪರಿಣಾಮ ಎರಡು ಗ್ಯಾಸ್ ಟ್ಯಾಂಕರ್ ಗಂಗಾವಳಿ ನದಿಯಲ್ಲಿ ಮುಳುಗಿದ್ದು, ಸೋರಿಕೆಯ ಭಯ ಕಾಡುತ್ತಿದೆ. ಹೀಗಾಗಿ ಸುತ್ತಮುತ್ತಲಿನ ಗ್ರಾಮಸ್ಥರ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಭೂಕುಸಿತದಲ್ಲಿ ಎರಡು ಗ್ಯಾಸ್ ಟ್ಯಾಂಕರ್ ಗಂಗಾವಳಿ ನದಿಯಲ್ಲಿ ಉರುಳಿ ಬಿದ್ದಿದ್ದು, ಗ್ಯಾಸ್ ಟ್ಯಾಂಕರ್ಗಳು ಸೋರಿಕೆಯಾಗುವ ಸಾಧ್ಯತೆಯಿದೆ. ಹೀಗಾಗಿ ನದಿ ದಡದಲ್ಲಿರುವ ಮನೆಗಳಲ್ಲಿ ವಾಸ ಇರುವ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವುದು ಅತ್ಯವಶ್ಯಕವಾಗಿದೆ.
ಆದ್ದರಿಂದ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಅಡಳಿತಾಧಿಕಾರಿಗಳು, ಕಂದಾಯ ನಿರೀಕ್ಷಕರು ಹಾಗೂ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರರು, ಸಹಾಯಕ ಆಯುಕ್ತರಿಗೆ ಕೂಡಲೇ ಮುನ್ನೆಚರಿಕೆ ಕ್ರಮವಾಗಿ ನದಿ ದಡದಲ್ಲಿರುವ ಎಲ್ಲ ಮನೆಗಳಲ್ಲಿರುವ ಕುಟುಂಬದ ಸದಸ್ಯರನ್ನು ಸುರಕ್ಷಿತ ಸ್ಥಳಗಳಾದ ಕಾಳಜಿ ಕೇಂದ್ರದಲ್ಲಿ ಸ್ಥಳಾಂತರಿಸಿ, ಎಲ್ಲ ರೀತಿಯ ವ್ಯವಸ್ಥೆ ಮಾಡಲು ಮತ್ತು ಕಟ್ಟುನಿಟ್ಟಿನ ಮುನ್ನೆಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯ ಆದೇಶಿಸಿದ್ದಾರೆ.