ರಾಯಚೂರು/ವಿಜಯಪುರ: ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಐದನಾಳ ಗ್ರಾಮದ ಹೊರವಲಯದ ಬಾವಿಯಲ್ಲಿ ಯುವಕನ ಶವ ದೊರೆತಿದೆ. ಗಣೇಶ ಮಾನಪ್ಪ ಸೋಮಲಾಪುರ (21) ಮೃತಪಟ್ಟ ಯುವಕನೆಂದು ಗುರುತಿಸಲಾಗಿದೆ.
ಲಿಂಗಸೂಗೂರು ಪೊಲೀಸರು ಸ್ಥಳಕ್ಕೆ ಆಗಮಿಸಿ, ಮೃತದೇಹವನ್ನು ಬಾವಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಲಿಂಗಸೂಗೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮಗ ಮೃತಪಟ್ಟ ವಿಷಯ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸಾವಿನ ಕುರಿತು ಸಂಶಯ ವ್ಯಕ್ತಪಡಿಸಲಾಗಿದೆ.
ಲಿಂಗಸೂಗೂರು ಪೊಲೀಸರು ಸ್ಥಳಕ್ಕೆ ಆಗಮಿಸಿ, ಮೃತದೇಹವನ್ನು ಬಾವಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಲಿಂಗಸೂಗೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮಗ ಮೃತಪಟ್ಟ ವಿಷಯ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸಾವಿನ ಕುರಿತು ಸಂಶಯ ವ್ಯಕ್ತಪಡಿಸಲಾಗಿದೆ.
ಈ ಕುರಿತು ದೂರವಾಣಿ ಮೂಲಕ ಲಿಂಗಸೂಗೂರು ಪೊಲೀಸರನ್ನು ಸಂಪರ್ಕಿಸಿದಾಗ, ಬಾವಿಯಲ್ಲಿ ಯುವಕ ಮೃತಪಟ್ಟಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕುಟುಂಬಸ್ಥರು ನೀಡುವ ದೂರಿನ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ದುರುದ್ದೇಶ ಪೂರಕವಾಗಿ ರಾತ್ರಿ 9 ಗಂಟೆಯ ಸುಮಾರಿಗೆ ಯುವಕನನ್ನು ಮನೆಯಿಂದ ಹೊರಗಡೆ ಕರೆದುಕೊಂಡು ಬಂದು ಪಾರ್ಟಿ ಮಾಡಿ ಬಳಿಕ ಬಾವಿಗೆ ತಳ್ಳಿ ಕೊಲೆ ಮಾಡಿದ್ದಾರೆ ಎಂದು ಮೃತನ ಕುಟುಂಬಸ್ಥರು ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.
ವಿಜಯಪುರದಲ್ಲಿ ಈಜಲು ಹೋದ ವಿದ್ಯಾರ್ಥಿ ನೀರುಪಾಲು: ವಿಜಯಪುರ ನಗರದ ಬೇಗಂ ತಲಾಬ್‌ನಲ್ಲಿ ಗೆಳೆಯರೊಂದಿಗೆ ಈಜಲು ಹೋಗಿದ್ದ ಯುವಕ ನೀರುಪಾಲಾಗಿದ್ದಾನೆ. ಹವೇಲಿ ನಿವಾಸಿ ಅನಿರುದ್ದ ಕಲ್ಯಾಣಕುಮಾರ ಸಾಮ್ರಾಣಿ (20) ನೀರುಪಾಲಾದ ಯುವಕ.
ರಜೆ ಹಿನ್ನೆಲೆಯಲ್ಲಿ ತನ್ನ ಇಬ್ಬರು ಗೆಳೆಯರು ಹಾಗೂ ತನ್ನ ಸಹೋದರ ಅನಿಕೇತ ಜೊತೆ ಸೇರಿ ಬೇಗಂ ತಲಾಬ್ಗೆ ಅನಿರುದ್ಧ ಹೋಗಿದ್ದರು. ಈ ವೇಳೆ ಬೇಗಂ ತಲಾಬ್‌ನಲ್ಲಿ ಈಜಲು ಇಳಿದಾದ ನೀರುಪಾಲಾಗಿದ್ದಾರೆ. ಸ್ನೇಹಿತರು ಮತ್ತು ಸಹೋದರ ಬೇಡ ಅಂದರೂ ಈಜಲು ತೆರಳಿದ್ದರು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಅಗ್ನಿಶಾಮಕ ಅಧಿಕಾರಿಗಳು ಭೇಟಿ ನೀಡಿ, ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ. ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರೈಲ್ವೆ ಗೇಟ್ ಬಳಿ ಶವ ಪತ್ತೆ: ವಿಜಯಪುರ ನಗರದ ಇಬ್ರಾಹಿಂಪುರ ರೈಲ್ವೆ ಗೇಟ್ ಬಳಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಶವ ಸಿಕ್ಕಿದೆ. ಪುಲಿಕೇಶಿ ನಗರ ಬಡಾವಣೆಯ ನಿವಾಸಿ ಮಂಜೂರಲಿ (35) ಮೃತರೆಂದು ಗುರುತಿಸಲಾಗಿದೆ. ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಹುಬ್ಬಳ್ಳಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು; ಸಾವಿನ ಸಂಖ್ಯೆ 4ಕ್ಕೇರಿಕೆ
ಇದನ್ನೂ ಓದಿ: ತಮ್ಮದಲ್ಲದ ತಪ್ಪಿಗೆ ಒಂದೇ ಕುಟುಂಬದ ನಾಲ್ವರು ಸಾವು; ರಸ್ತೆ ಅಪಘಾತಕ್ಕೆ ಕಾರಣ ತಿಳಿಸಿದ ಹಾವೇರಿ ಎಸ್ಪಿ