ಹಾಸನ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಹಿನ್ನೆಲೆ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಭುವನ್ (25) ಮತ್ತು ಅನುಷ್ (26) ಸಾವಿಗೀಡಾದ ಯುವಕರು.
ವೀಕೆಂಡ್ ಟ್ರಿಪ್ಗಾಗಿ ಐವರು ಯುವಕರು ಧರ್ಮಸ್ಥಳ ಸೇರಿದಂತೆ ವಿವಿಧೆಡೆಗೆ ಪ್ರಯಾಣ ಬೆಳೆಸಿದ್ದರು. ಬೆಂಗಳೂರಿನಿಂದ ಹೊರಟು ಕೇವಲ ಒಂದೂವರೆ ಗಂಟೆಯಲ್ಲಿ ಚನ್ನರಾಯಪಟ್ಟಣಕ್ಕೆ ತಲುಪಿದ್ದಾರೆ. ಅಲ್ಲಿನ ಗೌಡಗೆರೆ ಗೇಟ್ ಸಮೀಪಕ್ಕೆ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.
ಘಟನೆ ನಡೆದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಶಾಸಕ ಸಿ.ಎನ್.ಬಾಲಕೃಷ್ಣ ಮತ್ತು ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿ ಮೃತ ಯುವಕರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಯುವಕರ ಆರೋಗ್ಯ ವಿಚಾರಿಸಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ಕೊಡಿಸಿದ್ದಾರೆ.
ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಈ ತಿಂಗಳಲ್ಲಿ ನಡೆದ ಮೂರನೇ ದೊಡ್ಡ ಅಪಘಾತ ಇದಾಗಿದೆ.
ಇದನ್ನೂ ಓದಿ : ಡಿವೈಡರ್ ಏರಿ ಪಲ್ಟಿಯಾದ ಕಾರು: ಅದೃಷ್ಟವಶಾತ್ ಕಾರಲ್ಲಿದ್ದವರು ಪಾರು - ಸಿಸಿಟಿವಿ ವೀಡಿಯೊ