ಉಡುಪಿ: ಆನ್ಲೈನ್ ಟ್ರೇಡಿಂಗ್ನಲ್ಲಿ ಹೆಚ್ಚಿನ ಲಾಭಾಂಶದ ಆಸೆ ತೋರಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಉಡುಪಿ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಕುರಿಯ ಗ್ರಾಮದ ನಿವಾಸಿ ಮಹಮ್ಮದ್ ಮುಸ್ತಫಾ ಪಿ (36), ಕಾಸರಗೋಡು ಮಂಜೇಶ್ವರ ತಾಲೂಕಿನ ಕುಂಬ್ಳೆಯ ನಿವಾಸಿ ಖಾಲಿದ್ದ್ ಬಿ. (39), ಕಾಸರಗೋಡು ನೀರ್ಚಾಲ್ ಗ್ರಾಮದ ನಿವಾಸಿ ಮೊಹಮ್ಮದ್ ಸಫಾನ್ ಕೆ.ಎ, (22) ಹಾಗೂ ಮಂಗಳೂರು ಪ್ರಗತಿ ಬಿಜೈ ನಿವಾಸಿ ಸತೀಶ್ ಶೇಟ್ (52) ಬಂಧಿತ ಆರೋಪಿಗಳು.
ಬಂಧಿತ ಆರೋಪಿಗಳು ಉಪೇಂದ್ರ ಭಟ್ ಎಂಬವರಿಗೆ ಆನ್ಲೈನ್ ಟ್ರೇಡಿಂಗ್ನಲ್ಲಿ ಹೆಚ್ಚಿನ ಲಾಭಾಂಶದ ಆಸೆ ತೋರಿಸಿ ಒಟ್ಟು 33,10,000 ರೂ. ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿದ್ದರು. ಈ ಬಗ್ಗೆ ಉಪೇಂದ್ರ ಭಟ್ ಅವರು ಉಡುಪಿ ಸೆನ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆಗೆ ಇಳಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ, 5 ಮೊಬೈಲ್ ಪೋನ್ ಹಾಗೂ 13 ಲಕ್ಷ ರೂ. ನಗದನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ. ಪ್ರಕರಣದ ಪ್ರಮುಖ ಸೂತ್ರಧಾರಿಗಳು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಆನ್ಲೈನ್ ಷೇರು ವ್ಯಾಪಾರ ವಂಚನೆ: ಮಂಗಳೂರಿನ ವ್ಯಕ್ತಿ ಕಳೆದುಕೊಂಡಿದ್ದು 34.80 ಲಕ್ಷ! - ONLINE FRAUD