ಉಡುಪಿ: ನಗರದಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಪ್ರಕರಣ ಮೇ 18ರಂದು ನಡೆದಿದ್ದು, ಸದ್ಯ ವಿಡಿಯೋ ವೈರಲ್ ಆಗಿದೆ.
ಮೇ 18ರ ರಾತ್ರಿ ಎರಡು ತಂಡಗಳ ನಡುವೆ ನಡು ರಸ್ತೆಯಲ್ಲೇ ಹೊಡೆದಾಟ ನಡೆದಿದೆ. ಅಡ್ಡಾದಿಡ್ಡಿ ಕಾರು ಚಲಾಯಿಸಿ ಎರಡೂ ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಬಳಿಕ, ಉಭಯ ತಂಡದವರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ನಡುರಸ್ತೆಯಲ್ಲೇ ತಂಡವೊಂದು ತಲ್ವಾರ್ ಹಿಡಿದು ಹಲ್ಲೆ ನಡೆಸಲು ಮುಂದಾಗಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳು ಕಾರಿನಲ್ಲಿ ಅಕ್ರಮವಾಗಿ ತಲ್ವಾರ್ ಇರಿಸಿ, ಉಡುಪಿಯಲ್ಲಿ ಕಳ್ಳತನ ಮಾಡಲು ಪ್ರಯತ್ನಿಸಿರುವುದಾಗಿಯೂ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಉಡುಪಿ ಎಸ್ಪಿ ಅರುಣ್ ಕೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ. ಆಶಿಕ್ ಮತ್ತು ರಕೀಬ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಎರಡು ಸ್ವಿಪ್ಟ್ ಕಾರು, ಎರಡು ಬೈಕ್, ಒಂದು ತಲ್ವಾರ್ ಮತ್ತು ಒಂದು ಡ್ರ್ಯಾಗರ್ ವಶಪಡಿಸಿಕೊಳ್ಳಲಾಗಿದೆ. ಬಂಧಿತರು ಗರುಡ ಗ್ಯಾಂಗ್ನವರು ಎಂದು ತಿಳಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ತನಿಖೆ ಮುಂದುವರಿದಿದೆ.
ಇದನ್ನೂ ಓದಿ: ಚನ್ನಪಟ್ಟಣದ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥತೆಗೆ ಕಾರಣ ಐಸ್ ಕ್ರೀಂ; ವರದಿ - Ice Cream