ETV Bharat / state

ಉಡುಪಿ: ಯುವ ಕಬಡ್ಡಿ ಆಟಗಾರ ಮುಟ್ಲುಪಾಡಿ ಪ್ರೀತಂ ಶೆಟ್ಟಿ ಹೃದಯಾಘಾತದಿಂದ ನಿಧನ - KABADDI PLAYER DEATH

ಕಬಡ್ಡಿ ಆಡಿದ ನಂತರ ಎದೆನೋವು ಕಾಣಿಸಿಕೊಂಡ ಪ್ರೀತಂ ಶೆಟ್ಟಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ, ಅದಾಗಲೇ ಅವರು ಕೊನೆಯುಸಿರೆಳೆದಿದ್ದರು.

Mutlupady Pritam Shetty
ಮುಟ್ಲುಪಾಡಿ ಪ್ರೀತಂ ಶೆಟ್ಟಿ (ETV Bharat)
author img

By ETV Bharat Karnataka Team

Published : 3 hours ago

ಉಡುಪಿ: ಯುವ ಕಬಡ್ಡಿ ಆಟಗಾರ ಮುಟ್ಲುಪಾಡಿ ನಡುಮನೆ ಪ್ರೀತಂ ಶೆಟ್ಟಿ (26) ಅವರು ಹೃದಯಘಾತದಿಂದ ನಿಧನ ಹೊಂದಿದ್ದಾರೆ.

ಅವರು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕಬಡ್ಡಿ ಪಂದ್ಯಾಟಕ್ಕೆ ತೆರಳಿದ್ದರು. ಶುಕ್ರವಾರ ಕಬಡಿ ಆಡಿದ ಕೆಲವೇ ಕ್ಷಣಗಳ ಬಳಿಕ ಪ್ರೀತಂ ಅವರು ಎದೆ ನೋವಿನಿಂದ ಕುಸಿದು ಬಿದ್ದಿದ್ದರು. ತಕ್ಷಣ ತಂಡದ ಸಹ ಆಟಗಾರರು ಆಸ್ಪತ್ರೆಗೆ ದಾಖಲಿಸಿದರೂ, ಅಷ್ಟೊತ್ತಿಗಾಗಲೇ ಪ್ರೀತಂ ಕೊನೆಯುಸಿರೆಳೆದಿದ್ದಾರೆ.

ಪ್ರೀತಂ ಅವರು ಇನ್ನು ಕೆಲವೇ ದಿನಗಳಲ್ಲಿ ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗಬೇಕೆಂದು ಎಲ್ಲಾ ತಯಾರಿ ನಡೆಸಿದ್ದರು. ಮೃತರು ತಾಯಿ ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ.

ಇದನ್ನೂ ಓದಿ: ಅಂತಾರಾಷ್ಟ್ರೀಯ ಡೆಫ್ ಚೆಸ್​: ಹುಬ್ಬಳ್ಳಿ-ಧಾರವಾಡ ಪ್ರತಿಭೆಗಳಿಗೆ ಬೆಳ್ಳಿ, ಕಂಚು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.