ETV Bharat / state

ಯುಜಿಸಿಇಟಿ-2024: ಜೂ. 25ರಿಂದ ಆಫ್ ಲೈನ್​ನಲ್ಲಿ ದಾಖಲೆಗಳ ಪರಿಶೀಲನೆ - UGCET 2024

ಯುಜಿಸಿಇಟಿ-2024 ಅರ್ಹತಾ ಕಂಡಿಕೆ ಕ್ಲೇಮ್​ ಮಾಡಿರುವ ಮತ್ತು ರ‍್ಯಾಂಕ್ ಪಡೆದಿರುವ ಅಭ್ಯರ್ಥಿಗಳಿಗೆ ಜೂನ್ 25ರಿಂದ ದಾಖಲೆಗಳ ಪರಿಶೀಲನೆ ನಡೆಯಲಿದೆ. ಈ ಪ್ರಕ್ರಿಯೆ ಆಫ್ ಲೈನ್​ನಲ್ಲಿ ನಡೆಯಲಿದೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್ ಪ್ರಸನ್ನ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

OFFLINE VERIFICATION  DOCUMENTS VERIFICATION  BENGALURU
ಯುಜಿಸಿಇಟಿ-2024: ಜೂನ್ 25ರಿಂದ ದಾಖಲೆಗಳ ಆಫ್ ಲೈನ್ ಪರಿಶೀಲನೆ (ETV Bharat)
author img

By ETV Bharat Karnataka Team

Published : Jun 23, 2024, 3:04 PM IST

ಬೆಂಗಳೂರು: ಯುಜಿಸಿಇಟಿ-2024ರ ಆನ್‌ಲೈನ್ ಅರ್ಜಿಯಲ್ಲಿ ಅರ್ಹತಾ ಕಂಡಿಕೆಗಳಾದ ಬಿ. ಸಿ. ಡಿ. ಐ. ಜೆ. ಕೆ. ಎಲ್. ಎಂ. ಎನ್. ಜೆಡ್. ಈ ಕ್ಲಾಸ್​ಗಳನ್ನು ಕ್ಷೇಮ್ ಮಾಡಿರುವ ಹಾಗೂ ರ‍್ಯಾಂಕ್ ಪಡೆದಿರುವ ಅಭ್ಯರ್ಥಿಗಳಿಗೆ ಆಫ್ ಲೈನ್ ದಾಖಲಾತಿ ಪರಿಶೀಲನೆಯು ಜೂನ್ 25 ರಿಂದ 29ರ ವರೆಗೆ ಮಲ್ಲೇಶ್ವರದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ನಡೆಯಲಿದೆ.

ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್ ಪ್ರಸನ್ನ ಅವರು ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿದ್ದು, ಸಂಬಂಧಿಸಿದ ಅಭ್ಯರ್ಥಿಗಳಿಗೆ ಖುದ್ದು ಹಾಜರಾಗಲು ಸೂಚಿಸಿದ್ದಾರೆ. "ವೈ" ಅರ್ಹತಾ ಕಂಡಿಕೆಯನ್ನು ಕ್ಲೇಮ್ ಮಾಡಿರುವ ಅಭ್ಯರ್ಥಿಗಳು ದಾಖಲೆಗಳ ಪರಿಶೀಲನೆಗೆ ಹಾಜರಾಗುವ ಅಗತ್ಯವಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಯೋಗ & ನ್ಯಾಚುರೋಪತಿ, ಪಶು ವೈದ್ಯಕೀಯ ಮತ್ತು ಪಶುಸಂಗೋಪನೆ, ಕೃಷಿ ವಿಜ್ಞಾನ ಕೋರ್ಸುಗಳು, [ಬಿ.ಎಸ್ಸಿ (ಆನರ್ಸ್) ಕೃಷಿ, ಬಿ.ಎಸ್ಸಿ (ಆನರ್ಸ್) (ರೇಷ್ಮೆ ಕೃಷಿ) ಮುಂತಾದವು], ಬಿ.ಎಸ್ಸಿ (ನರ್ಸಿಂಗ್), ಬಿ.ಫಾರ್ಮಾ, 2ನೇ ವರ್ಷದ ಬಿ-ಫಾರ್ಮಾ ಮತ್ತು ಫಾರ್ಮಾ-ಡಿ ಕೋರ್ಸುಗಳ ಪ್ರವೇಶಕ್ಕೆ ಇದು ಅನ್ವಯವಾಗುತ್ತದೆ.

ವಿದ್ಯಾರ್ಥಿಗಳ ರ‍್ಯಾಂಕ್ ಆಧರಿಸಿ ಅವರು ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕಾದ ವೇಳಾಪಟ್ಟಿಯನ್ನು ಕೆಇಎ ವೆಬ್ ಸೈಟ್​ನಲ್ಲಿ ಪ್ರಕಟಿಸಲಾಗಿದೆ. ಪರಿಶೀಲನೆಗೆ ಸಲ್ಲಿಸಬೇಕಾದ ಮೂಲ ದಾಖಲೆಗಳ ವಿವರಗಳನ್ನು ಪ್ರಾಧಿಕಾರದ ವೆಬ್‌ಸೈಟ್​​ನಲ್ಲಿರುವ ಇ-ಮಾಹಿತಿ ಪುಸ್ತಕದಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ತಮ್ಮ ಅರ್ಹತಾ ಕಂಡಿಕೆಗೆ ಅನುಸಾರವಾಗಿ ಅವಶ್ಯವಿರುವ ಎಲ್ಲಾ ಮೂಲ ದಾಖಲೆಗಳೊಂದಿಗೆ ಹಾಗೂ ಒಂದು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಬೇಕೆಂದು ತಿಳಿಸಲಾಗಿದೆ.

ಅರ್ಹತಾ ಕಂಡಿಕೆ "ಎ", "ಇ", "ಎಫ್", "ಜಿ”, “ಹೆಚ್”, “ಓ” ಕ್ಲೇಮ್ ಮಾಡಿರುವ ಅಭ್ಯರ್ಥಿಗಳಿಗೆ ಯುಜಿಸಿಇಟಿ-2024ರ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ದಾಖಲಾತಿ ಪರಿಶೀಲನೆಯನ್ನು ಆನ್‌ಲೈನ್ ಮೂಲಕ ನಡೆಸಲಾಗುತ್ತಿದೆ. ಈ ಬಗ್ಗೆ ವಿವರ ಮಾಹಿತಿ ಮತ್ತು ಅಭ್ಯರ್ಥಿಗಳು ಅನುಸರಿಸಬೇಕಾದ ಸೂಚನೆಗಳನ್ನು ಸದ್ಯದಲ್ಲಿಯೇ ಪ್ರಕಟಿಸಲಾಗುವುದು ಎಂದು ಪ್ರಸನ್ನ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಓದಿ: ನೀಟ್‌-ಯುಜಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಿಬಿಐಗೆ ಹಸ್ತಾಂತರ - NEET UG Question Paper Leak

ETV Bharat Logo

Copyright © 2024 Ushodaya Enterprises Pvt. Ltd., All Rights Reserved.