ETV Bharat / state

ನಿರ್ಮಾಣ ಹಂತದ ಬ್ಯಾಂಕ್ ಕಟ್ಟಡದ ಸೆಂಟ್ರಿಂಗ್ ಕುಸಿತ: ತಪ್ಪಿದ ಭಾರಿ ದುರಂತ, ಇಬ್ಬರಿಗೆ ಗಾಯ - CENTERING COLLAPSED IN SHIVAMOGGA

author img

By ETV Bharat Karnataka Team

Published : Jun 21, 2024, 8:09 AM IST

ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಸೆಂಟ್ರಿಂಗ್ ಕುಸಿತವಾಗಿದ್ದು, ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ.

Shivamogga building Centering collapsed
ಶಿವಮೊಗ್ಗ ಕಟ್ಟಡದ ಸೆಂಟ್ರಿಂಗ್ ಕುಸಿತ (ETV Bharat)
ನಿರ್ಮಾಣ ಹಂತದ ಬ್ಯಾಂಕ್ ಕಟ್ಟಡದ ಸೆಂಟ್ರಿಂಗ್ ಕುಸಿತ: ತಪ್ಪಿದ ಭಾರಿ ದುರಂತ, ಇಬ್ಬರಿಗೆ ಗಾಯ (ETV Bharat)

ಶಿವಮೊಗ್ಗ: ನಿರ್ಮಾಣ ಹಂತದ ಕಟ್ಟಡದ ಸೆಂಟ್ರಿಂಗ್ ಕುಸಿದು ಇಬ್ಬರು ಗಾಯಗೊಂಡಿರುವ ಘಟನೆ ಹೊಸನಗರ ಪಟ್ಟಣದಲ್ಲಿ ನಡೆದಿದೆ. ಅದೃಷ್ಟವಶಾತ್ ಸಂಭಾವ್ಯ ದುರಂತ ತಪ್ಪಿದೆ.

ಚೌಡಮ್ಮ ದೇವಾಲಯ ರಸ್ತೆಯಲ್ಲಿ ಕಳೂರು ಸೇವಾ ಸಹಕಾರ ಬ್ಯಾಂಕ್​ಗಾಗಿ ಹೊಸ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಕಟ್ಟಡಕ್ಕೆ ಸೆಂಟ್ರಿಂಗ್ ಹಾಕಲಾಗಿತ್ತು. ನಿನ್ನೆ ರಾತ್ರಿ ಸೆಂಟ್ರಿಂಗ್ ಏಕಾಏಕಿ ಕುಸಿದಿದೆ. ಇದರಿಂದ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರಿಗೆ ಗಾಯವಾಗಿದೆ. ಗಾಯಾಳುಗಳು ಹೊಸನಗರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್ ಸಂಭವನೀಯ ದುರಂತ ತಪ್ಪಿದೆ. ಅಪಾಯದಿಂದ ಉಳಿದ ಕಾರ್ಮಿಕರು ಪಾರಾಗಿದ್ದಾರೆ.

ಇದನ್ನೂ ಓದಿ: ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ; ಪತ್ನಿಗೆ ಜಾಮೀನು - High Court

ಆ ವೇಳೆ ಸುಮಾರು 30ಕ್ಕೂ ಹೆಚ್ಚು ಕಾರ್ಮಿಕರು ಸ್ಲ್ಯಾಬ್ ಕಾಂಕ್ರೀಟ್ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ದುರಂತದ ಸುದ್ದಿ ತಿಳಿದ ಅಗ್ನಿಶಾಮಕ ದಳದವರು ಕೂಡಲೇ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.