ಬೆಂಗಳೂರು : ನಿರ್ಮಾಣ ಹಂತದ ಕಟ್ಟಡ ಕುಸಿದು ಅವಷೇಷಗಳಡಿ ಸಿಲುಕಿದ್ದವರ ಪೈಕಿ ಮೃತರ ಸಂಖ್ಯೆ ಆರಕ್ಕೇರಿದೆ. ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದ ಅಮಾನ್, ಕೃಪಾಲ್, ಮೊಹಮ್ಮದ್ ಸಾಹಿಲ್, ಸತ್ಯರಾಜ್ ಮತ್ತು ಶಂಕರ್ ಸೇರಿದಂತೆ ಐದು ಮೃತದೇಹಗಳನ್ನು ರಕ್ಷಣಾ ಸಿಬ್ಬಂದಿ ಹೊರತೆಗೆದಿದ್ದಾರೆ. ಮತ್ತೊಂದೆಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಓರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಇನ್ನು ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಅಯಾಜ್ ಎಂಬಾತನನ್ನ ರಕ್ಷಣಾ ಸಿಬ್ಬಂದಿ ಜೀವಂತವಾಗಿ ರಕ್ಷಿಸಿದ್ದಾರೆ. ಗ್ರಿಲ್‌ಗಳಡಿ ಸಿಲುಕಿಕೊಂಡಿದ್ದ ಅಯಾಜ್ ನನ್ನ ಪತ್ತೆಹಚ್ಚಿದ ರಕ್ಷಣಾ ಸಿಬ್ಬಂದಿ ಗ್ಯಾಸ್ ಕಟ್ಟರ್ ಬಳಸಿ ಗ್ರಿಲ್ ಕತ್ತರಿಸಿ ಹೊರಗೆ ಕರೆತಂದಿದ್ದಾರೆ. ತಕ್ಷಣ ಆತನನ್ನ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ.
ಆರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು, ಕಾರ್ಮಿಕರು ಅವಶೇಷಗಳಡಿ ಸಿಲುಕಿದ ಘಟನೆ ಮಂಗಳವಾರ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಬುಸಾಪಾಳ್ಯದಲ್ಲಿ ನಡೆದಿತ್ತು. NDRF, SDRF ಹಾಗೂ ಪೊಲೀಸರಿಂದ ಅವಶೇಷಗಳಡಿ ಸಿಲುಕಿದ್ದವರ ರಕ್ಷಣಾ ಕಾರ್ಯಾಚರಣೆ ಮುಂದುವರೆಸಲಾಗಿದೆ. ಈ ಘಟನೆ ಕುರಿತು ಮತ್ತಷ್ಟು ಮಾಹಿತಿ ಬರಬೇಕಿದೆ.
ಓದಿ: ಬೆಂಗಳೂರಿನಲ್ಲಿ ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್