ETV Bharat / state

ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ: ಸಚಿವ ಶಿವಾನಂದ ಪಾಟೀಲ್ - MINIMUM SUPPORT PRIZE

ಪ್ರತಿ ಕ್ವಿಂಟಾಲ್‌ ತೊಗರಿಗೆ 7,550 ರೂ ಹಾಗೂ ಕಡಲೆಗೆ 5,650 ರೂ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಬೆಂಬಲ ಬೆಲೆ ನೀಡಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಸಚಿವ ಶಿವಾನಂದ ಪಾಟೀಲ್
ಸಚಿವ ಶಿವಾನಂದ ಪಾಟೀಲ್ (ETV Bharat)
author img

By ETV Bharat Karnataka Team

Published : 12 hours ago

ಬೆಂಗಳೂರು: ರಾಜ್ಯ ಸರ್ಕಾರದ ಮನವಿ ಮೇರೆಗೆ ತೊಗರಿ ಮತ್ತು ಕಡಲೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ಪ್ರತಿ ಕ್ವಿಂಟಲ್‌ ತೊಗರಿಗೆ 7,550 ರೂ ಹಾಗೂ ಕಡಲೆಗೆ 5,650 ರೂ ನಿಗದಿಪಡಿಸಲಾಗಿದೆ. ರಾಜ್ಯದಲ್ಲಿ ತೊಗರಿ ಬೆಳೆಯನ್ನು 15.02 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು, ಅಂದಾಜು 11.96 ಲಕ್ಷ ಮೆಟ್ರಿಕ್‌ ಟನ್‌ ಉತ್ಪಾದನೆಯನ್ನು ನಿರೀಕ್ಷಿಸಲಾಗಿದೆ. ಕಲಬುರಗಿ, ಯಾದಗಿರಿ, ಬೀದರ್‌, ರಾಯಚೂರು, ವಿಜಯಪುರ, ಕೊಪ್ಪಳ, ಬೆಳಗಾವಿ, ಬಳ್ಳಾರಿ, ವಿಜಯನಗರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಖರೀದಿ ಕೇಂದ್ರ ಆರಂಭಿಸಲಾಗುವುದು. ರಾಜ್ಯ ಸರ್ಕಾರದ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರವು 3,06,150 ಮೆಟ್ರಿಕ್‌ ಟನ್‌ ಖರೀದಿಗೆ ಅನುಮತಿ ನೀಡಿದೆ ಎಂದು ಸಚಿವರು ಹೇಳಿದ್ದಾರೆ.

ಪ್ರಸ್ತುತ ಕಡಲೆಯನ್ನು 10.03 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು, ಅಂದಾಜು 6.63 ಲಕ್ಷ ಮೆಟ್ರಿಕ್‌ ಟನ್‌ ಉತ್ಪಾದನೆ ನಿರೀಕ್ಷಿಸಲಾಗಿದೆ. ಧಾರವಾಡ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್‌, ಬಾಗಲಕೋಟೆ, ದಾವಣಗೆರೆ, ಚಿಕ್ಕಮಗಳೂರು ಮತ್ತು ರಾಯಚೂರು ಜಿಲ್ಲೆಗಳಲ್ಲಿ ಖರೀದಿ ಕೇಂದ್ರ ಆರಂಭಿಸಲಾಗುವುದು. ಬೆಂಬಲ ಬೆಲೆಯಲ್ಲಿ 96,498 ಮೆಟ್ರಿಕ್‌ ಟನ್‌ ಕಡಲೆ ಖರೀದಿ ಮಾಡಲಾಗುವುದು. ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಖರೀದಿಗೆ ಅನುಮತಿ ನೀಡುತ್ತಿದ್ದಂತೆ ನೋಂದಣಿ ಮತ್ತು ಖರೀದಿ ಕೇಂದ್ರ ಆರಂಭಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ: ತೂಕದಲ್ಲಿ ಮೋಸದ ಬಗ್ಗೆ ದೂರು ನೀಡುವ ರೈತರಿಗೆ ಒಂದು ಲಕ್ಷ ರೂ. ನಗದು ಬಹುಮಾನ : ಸಚಿವ ಶಿವಾನಂದ ಪಾಟೀಲ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.