ETV Bharat / state

ಆಸ್ಪತ್ರೆಯಿಂದ ಡಿಸ್ಚಾರ್ಜ್; ನಾನು ಕ್ಷೇಮವಾಗಿದ್ದೇನೆ, ಆತಂಕ ಬೇಡ: ಹೆಚ್.ಡಿ. ಕುಮಾರಸ್ವಾಮಿ - H D Kumaraswamy Discharged - H D KUMARASWAMY DISCHARGED

ನಾನು ಆರೋಗ್ಯವಾಗಿದ್ದೇನೆ, ಯಾರೂ ಕೂಡ ಆತಂಕಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

kumaraswamy
ಹೆಚ್.ಡಿ.ಕುಮಾರಸ್ವಾಮಿ (IANS)
author img

By ETV Bharat Karnataka Team

Published : Jul 28, 2024, 10:26 PM IST

ಬೆಂಗಳೂರು: ಮೂಗಿನಲ್ಲಿ ರಕ್ತಸ್ರಾವ ಉಂಟಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆದ ನಂತರ ಜೆಪಿ ನಗರದ ತಮ್ಮ ನಿವಾಸಕ್ಕೆ ವಾಪಸಾದರು.

ನಗರದ ಖಾಸಗಿ ಹೋಟೆಲ್​ನಲ್ಲಿ ಜೆಡಿಎಸ್ ಮತ್ತು ಜೆಡಿಎಸ್ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಮಾಧ್ಯಮಗಳ ಜೊತೆ ಮಾತನಾಡುವ ಸಂದರ್ಭದಲ್ಲಿ ಸಚಿವರಿಗೆ ಮೂಗಿನಲ್ಲಿ ರಕ್ತಸ್ರಾವ ಉಂಟಾಗಿತ್ತು. ಕೂಡಲೇ ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದ ಸಚಿವರನ್ನು ವೈದ್ಯರು ಕೆಲ ಗಂಟೆಗಳ ಕಾಲ ನಿಗಾದಲ್ಲಿ ಇರಿಸಿ ಅವಲೋಕನ ಮಾಡಿದರು. ಬಳಿಕ ಸೂಕ್ತ ಚಿಕಿತ್ಸೆ ನೀಡಿ ಅವರನ್ನು ಮನೆಗೆ ಕಳಿಸಿಕೊಟ್ಟರು.

ಯಾರಿಗೂ ಆತಂಕ ಬೇಡ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ತಮ್ಮ ನಿವಾಸಕ್ಕೆ ಹೊರಡುವ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ''ಯಾರೂ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ನಮ್ಮ ಕಾರ್ಯಕರ್ತರು ಅಭಿಮಾನಿಗಳಿಗೆ ಮನವಿ ಮಾಡುವುದು ಇಷ್ಟೇ. ನಿಮ್ಮಗಳ ಶುಭ ಹಾರೈಕೆ, ಭಗವಂತನ ಕೃಪೆ ಹಾಗೂ ತಂದೆ - ತಾಯಿ ಆಶೀರ್ವಾದ ಇರುವವರೆಗೆ ಯಾವುದೇ ಅಪಾಯವಿಲ್ಲ'' ಎಂದರು.

''ಮೂರು ಬಾರಿ ನನಗೆ ಹೃದಯ ಕವಾಟನ್ನು ಬದಲಾವಣೆ ಮಾಡಲಾಗಿದೆ. ಬ್ಲಡ್ ತಿನ್ನರ್ ಮಾತ್ರೆ ತೆಗೆದುಕೊಳ್ಳುತ್ತೇನೆ. ರಕ್ತ ಗಟ್ಟಿ ಆಗಬಾರದು ಎನ್ನುವ ಕಾರಣಕ್ಕೆ ಈ ಮಾತ್ರೆ ಸೇವಿಸುತ್ತೇನೆ. ಒತ್ತಡ ಜಾಸ್ತಿಯಾದಾಗ, ವಿಶ್ರಾಂತಿ ಇಲ್ಲದೆ ಇದ್ದಾಗ ನನಗೆ ಮೂಗಿನಿಂದ ರಕ್ತಸ್ರಾವ ಆಗುವುದು ಸಹಜ. ಕೆಲಸದ ಒತ್ತಡ ಕಡಿಮೆ ಮಾಡಿಕೊಳ್ಳಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ನನಗೆ ಸಿಕ್ಕಿರುವ ಸಮಯ ಒಂದೊಂದು ಕ್ಷಣವು ಮುಖ್ಯ. ಜನರಿಗೆ ಎನಾದರೂ ಒಂದು ಸಹಾಯ ಮಾಡಬೇಕು. ಕೇಂದ್ರದಿಂದ ರಾಜ್ಯಕ್ಕೆ ಕೊಡುಗೆ ಕೊಡಬೇಕು'' ಎಂದು ತಿಳಿಸಿದರು.

''ಜನರು ನಂಬಿಕೆ ಇಟ್ಟು ದೆಹಲಿಗೆ ಕಳಿಸಿದ್ದಾರೆ. ಜನತೆ ವಿಶ್ವಾಸಕ್ಕೆ ಧಕ್ಕೆ ತರುವುದಿಲ್ಲ. ಇದೊಂದು ತಾತ್ಕಾಲಿಕ ಸಮಸ್ಯೆ ಅಷ್ಟೇ. ಯಾರು ಆತಂಕಪಡುವುದು ಬೇಡ. ವಿಶ್ರಾಂತಿ ತೆಗೆದುಕೊಳ್ಳಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ. 92 ವರ್ಷದ ದೇವೇಗೌಡರು ಸೋಮವಾರ ದಿನ ಸಂಸತ್ತಿನಲ್ಲಿ ಕಾವೇರಿ ವಿಚಾರ ಪ್ರಸ್ತಾಪ ಮಾಡಲಿದ್ದಾರೆ. ಡಿಎಂಕೆ ಮತ್ತು ಇತರೆ ಸದಸ್ಯರು ಅಡ್ಡಿಪಡಿಸುವ ಕೆಲಸ ಮಾಡುತ್ತಾರೆ. ಆ ಸಂದರ್ಭದಲ್ಲಿ ನಾನು ಅವರ ಜೊತೆಗೆ‌ ಇರಬೇಕು'' ಎಂದು ಕೇಂದ್ರ ಸಚಿವರು ಹೇಳಿದರು.

''ರಾತ್ರಿ ನನ್ನ ದೇಹದಲ್ಲಿನ ಏರುಪೇರು ನೋಡಿಕೊಂಡು ದೆಹಲಿ ಪ್ರವಾಸ ನಿರ್ಧಾರ ಮಾಡುತ್ತೇನೆ. ವೈದ್ಯರಿಗೂ ಈ ಬಗ್ಗೆ ಮಾಹಿತಿ ನೀಡುತ್ತೇನೆ. ಪಾದಯಾತ್ರೆ ಮಾಡದೇ ಇರುವುದಕ್ಕೆ ನನ್ನ ಆರೋಗ್ಯ ಸಂಪೂರ್ಣ ಕೆಟ್ಟಿಲ್ಲ. ಅದಕ್ಕೆ ಇನ್ನೂ ಒಂದು ವಾರ ಸಮಯ ಇದೆ. ನಾನು ಇಲ್ಲದಿದ್ದರೆ ನಿಖಿಲ್ ಕುಮಾರಸ್ವಾಮಿ ನಮ್ಮ ಶಾಸಕರ ಜೊತೆ ಪಾದಯಾತ್ರೆ ಮಾಡುತ್ತಾರೆ. ಈ ಬಗ್ಗೆ ಕಾರ್ಯಕರ್ತರಿಗೆ ಆತಂಕ ಬೇಡ'' ಎಂದು ಕುಮಾರಸ್ವಾಮಿ ಮನವಿ ಮಾಡಿದರು.

ಸಿಎಂ ಹಾರೈಕೆ: ಕುಮಾರಸ್ವಾಮಿ ಅವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಸಿಎಂ ಸಿದ್ದರಾಮಯ್ಯ ಹಾರೈಸಿದ್ದಾರೆ. ''ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾದ ಸುದ್ದಿ ಮಾಧ್ಯಮಗಳಲ್ಲಿ ನೋಡಿದೆ. ಚಿಕಿತ್ಸೆ ಪಡೆಯುತ್ತಿರುವ ಕುಮಾರಸ್ವಾಮಿ ಅವರು ಶೀಘ್ರ ಚೇತರಿಸಿಕೊಂಡು ಮತ್ತೆ ತಮ್ಮ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಹಾರೈಸುತ್ತೇನೆ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್​ ಪೋಸ್ಟ್​ ಹಾಕಿದ್ದಾರೆ.

ಇದನ್ನೂ ಓದಿ: ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ: ಅಪೋಲೋ ಆಸ್ಪತ್ರೆಗೆ ದಾಖಲು - HD KUMARASWAMY HOSPITALISED

ETV Bharat Logo

Copyright © 2025 Ushodaya Enterprises Pvt. Ltd., All Rights Reserved.