ETV Bharat / state

ಬೆಂಗಳೂರು ವರ್ತುಲ ರಸ್ತೆ ಯೋಜನೆಯ ತ್ವರಿತ ಅನುಷ್ಠಾನ- ಗಡ್ಕರಿ; ಬೆಂಗಳೂರು, ತುಮಕೂರು, ರಾಮನಗರಕ್ಕೆ ಅನುಕೂಲ - BENGALURU RING ROAD PROJECT

ಬೆಂಗಳೂರು ಉಪನಗರ ವರ್ತುಲ ರಸ್ತೆ ಯೋಜನೆ ಅನುಷ್ಠಾನದ ಕುರಿತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

union-minister-h-d-kumaraswamy
ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಅವರೊಂದಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (ETV Bharat)
author img

By ETV Bharat Karnataka Team

Published : 12 hours ago

ಬೆಂಗಳೂರು/ನವದೆಹಲಿ: ರಾಜಧಾನಿ ಬೆಂಗಳೂರು ನಗರದ ವಾಹನ ದಟ್ಟಣೆ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆ (ಎಸ್‌ಟಿಆರ್‌ಆರ್) ಕುರಿತು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಗುರುವಾರ ಮಹತ್ವದ ಮಾತುಕತೆ ನಡೆಸಿದರು.

ನವದೆಹಲಿಯಲ್ಲಿ ಸಚಿವ ಗಡ್ಕರಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದ ಕುಮಾರಸ್ವಾಮಿ, ನೆನೆಗುದಿಗೆ ಬಿದ್ದಿದ್ದ ಈ ಯೋಜನೆಗೆ ವೇಗ ನೀಡುವಂತೆ ಮನವಿ ಮಾಡಿದರು.

ಕುಮಾರಸ್ವಾಮಿ ಮನವಿಗೆ ಕೂಡಲೇ ಸ್ಪಂದಿಸಿದ ಗಡ್ಕರಿ, ಆದಷ್ಟು ಬೇಗ ಯೋಜನೆಯ ಪ್ರಸ್ತಾವನೆಯನ್ನು 'ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮೌಲ್ಯಮಾಪನ ಸಮಿತಿ' (Public-Private Partnership Appraisal Committee - PPPAC) ಮುಂದೆ ಮಂಡಿಸಿ ತ್ವರಿತ ಅನುಷ್ಠಾನಕ್ಕೆ ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ.

"ಎಂಟು ವರ್ಷಗಳಿಂದ ಬಾಕಿ ಇದ್ದ ಭೂಸ್ವಾಧೀನ ಪರಿಹಾರದ ಹಣವನ್ನು ಕೂಡಲೇ ರೈತರಿಗೆ ಪಾವತಿ ಮಾಡಲು ಸಚಿವ ಗಡ್ಕರಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಮನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಭೂಮಿ ಕಳೆದುಕೊಂಡಿರುವ ರೈತರಿಗೆ ಇದರಿಂದ ಅನುಕೂಲವಾಗಲಿದೆ" ಎಂದು ಬಳಿಕ ಹೆಚ್‌ಡಿಕೆ ಹೇಳಿದರು.

"ಈ ಯೋಜನೆ ಕರ್ನಾಟಕದಲ್ಲಿ ಸುಮಾರು 135 ಕಿ.ಮೀ ದೂರ ಹಾದು ಹೋಗಲಿದೆ. ಸುಮಾರು ₹4,750 ಕೋಟಿ ವೆಚ್ಚದಲ್ಲಿ ಕಾರ್ಯಗತವಾಗುತ್ತಿದೆ. 4 ರಿಂದ 6 ಪಥ ಹೊಂದಿರುವ ಸಂಪೂರ್ಣ ನಿಯಂತ್ರಿತ ಪ್ರವೇಶ ವ್ಯವಸ್ಥೆ ಹೊಂದಿರುವ ಹೆದ್ದಾರಿ ಯಾವುದೇ ಅಡೆತಡೆಗಳಿಲ್ಲದೆ ಸಂಚಾರ ಸೌಲಭ್ಯ ಕಲ್ಪಿಸಲಿದೆ. ಬೆಂಗಳೂರು ಸುತ್ತಲಿನ ಉಪ ನಗರಗಳ ಮೂಲಕ ರಸ್ತೆ ಹಾದು ಹೋಗುತ್ತದೆ. ಇದು ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲಿದೆ" ಎಂದು ತಿಳಿಸಿದರು.

"ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು, ಕೈಗಾರಿಕಾಭಿವೃದ್ಧಿಗೆ ಬಹುದೊಡ್ಡ ಕೊಡುಗೆ ನೀಡಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಇದೆಲ್ಲಾ ಸಾಧ್ಯವಾಗುತ್ತಿದೆ ಹಾಗೂ ರಾಜ್ಯದ ಅಭಿವೃದ್ಧಿ ಬಗ್ಗೆ ನಿತಿನ್ ಗಡ್ಕರಿ ಅವರು ತೋರಿದ ಬದ್ಧತೆ ಅಭಿನಂದನಾರ್ಹ" ಎಂದು ಹೆಚ್​ಡಿಕೆ ಹೇಳಿದ್ದಾರೆ.

ಉಪನಗರ ವರ್ತುಲ ರಸ್ತೆಯ ಕುರಿತು:

  • ಉಪನಗರ ವರ್ತುಲ ರಸ್ತೆ ಯೋಜನೆ (Satellite Town Ring Road-STRR) 2013ರಲ್ಲಿಯೇ ಚಾಲನೆ ಪಡೆದಿತ್ತು. ಆದರೆ, ನಾನಾ ಕಾರಣಗಳಿಂದ ನೆನೆಗುದಿಗೆ ಬಿದ್ದಿತ್ತು.
  • ಬೆಂಗಳೂರು ಸುತ್ತಮುತ್ತ ಇರುವ ಎಂಟು ಕೈಗಾರಿಕಾ ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದೆ.
  • ನಾಲ್ಕರಿಂದ ಆರು ಪಥಗಳ ಈ ಯೋಜನೆ ದಾಬಸ್‌ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಸೂಲಿಬೆಲೆ, ಹೊಸಕೋಟೆ, ಆನೇಕಲ್, ಕನಕಪುರ, ರಾಮನಗರ ಮತ್ತು ಮಾಗಡಿ ಸೇರಿದಂತೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಉಪನಗರ ಪ್ರದೇಶಗಳನ್ನು ಸಂಪರ್ಕಿಸುತ್ತದೆ. ಹಾಗೂ ಬೆಂಗಳೂರು-ಚೆನ್ನೈ ಎಕ್ಸ್​ಪ್ರೆಸ್ ಹೈವೇಯನ್ನು ಕೂಡುತ್ತದೆ. ಜೊತೆಗೆ ತಮಿಳುನಾಡಿನ ಹೊಸೂರನ್ನೂ ಸಂಪರ್ಕಿಸುತ್ತದೆ.
  • ಉಪನಗರ ವರ್ತುಲ ರಸ್ತೆಯನ್ನು ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ಹೆದ್ದಾರಿಗೆ ಸಂಪರ್ಕಗೊಳಿಸಲಾಗುವುದು.
  • ಕೈಗಾರಿಕೆಗಳಿಗೆ ಸರಕು ಸರಂಜಾಮು ಸಾಗಿಸುವ ಯಾವುದೇ ಬೃಹತ್ ವಾಹನ ಬೆಂಗಳೂರು ನಗರದೊಳಕ್ಕೆ ಪ್ರವೇಶ ಮಾಡದಂತೆ ತಡೆಯುವುದೇ ಈ ಯೋಜನೆಯ ಉದ್ದೇಶ.
  • ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳಿಗೆ ಈ ಯೋಜನೆಯಿಂದ ಹೆಚ್ಚು ಲಾಭವಾಗಲಿದೆ. ಮುಖ್ಯವಾಗಿ ಬೆಂಗಳೂರು ನಗರದ ಮೇಲೆ ಸಂಚಾರದ ಒತ್ತಡ ಕಡಿಮೆ ಆಗಲಿದೆ.

ಇದನ್ನೂ ಓದಿ: ಸಾರಿಗೆ ಸಚಿವ ನಿತಿನ್​ ಗಡ್ಕರಿ - ಕುಮಾರಸ್ವಾಮಿ ಭೇಟಿ ; ಮಂಡ್ಯ ಹೊರವರ್ತುಲ ರಸ್ತೆ ಸೇರಿ ರಾಜ್ಯ ಹೆದ್ದಾರಿ ಯೋಜನೆಗಳ ಕುರಿತು ಚರ್ಚೆ - HDK MET NITIN GADKARI

ETV Bharat Logo

Copyright © 2025 Ushodaya Enterprises Pvt. Ltd., All Rights Reserved.