ETV Bharat / state

ನನ್ನ ಮೇಲೆ ದ್ವೇಷ ಸಾಧಿಸಿ ರಾಜ್ಯ ಹಾಳು ಮಾಡಿಕೊಳ್ಳಬೇಡಿ: ಹೆಚ್​.ಡಿ.ಕುಮಾರಸ್ವಾಮಿ - HMT Land

author img

By ETV Bharat Karnataka Team

Published : Aug 13, 2024, 3:48 PM IST

Updated : Aug 13, 2024, 5:37 PM IST

ಈಶ್ವರ್​ ಖಂಡ್ರೆ ಅವರೇ ನನ್ನ ಮೇಲಿನ ದ್ವೇಷಕ್ಕೆ ರಾಜ್ಯವನ್ನು ಹಾಳು ಮಾಡಿಕೊಳ್ಳಬೇಡಿ. ನೀವು ಲೂಟಿ ಮಾಡಿದ್ದು ಸಾಕು. ನಾನು ಮಾಡ್ತಿರುವ ಕೆಲಸಕ್ಕೆ ಸಹಕಾರ ಕೊಡಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ಧಾರೆ.

ಹೆಚ್​.ಡಿ. ಕುಮಾರಸ್ವಾಮಿ
ಹೆಚ್​.ಡಿ.ಕುಮಾರಸ್ವಾಮಿ (ETV Bharat)
ಹೆಚ್​.ಡಿ.ಕುಮಾರಸ್ವಾಮಿ (ETV Bharat)

ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಹೆಚ್​ಎಂಟಿ ಕಾರ್ಖಾನೆಯ ಅಧೀನದಲ್ಲಿರುವ ಭೂಮಿಯನ್ನು ರಾಜ್ಯ ಸರ್ಕಾರಕ್ಕೆ ವಾಪಸ್ಸು ನೀಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ಧಾರೆ. ನಗರದ ಹೆಚ್‌ಎಂಟಿ ಭವನದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಂದು ವೇಳೆ ರಾಜ್ಯ ಸರ್ಕಾರ ದುರುದ್ದೇಶಪೂರಿತವಾಗಿ ಭೂಮಿ ವಿಷಯದಲ್ಲಿ ಕಿರುಕುಳ ನೀಡಿದರೆ ನಾವು ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಹೆಚ್‌ಎಂಟಿಗೆ ಜಮೀನನ್ನು ಪುಕ್ಕಟೆ ಕೊಟ್ಟಿಲ್ಲ: ಅರಣ್ಯ ಇಲಾಖೆ ಭೂಮಿಯನ್ನು ಅಕ್ರಮವಾಗಿ ವಿವಿಧ ಸರ್ಕಾರಿ ಸಂಸ್ಥೆ, ಇಲಾಖೆಗಳಿಗೆ ಮತ್ತು ಖಾಸಗಿಯವರಿಗೆ ಸಂಸ್ಥೆ ಮಾರಾಟ ಮಾಡಿದೆ ಎಂದು ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ನೀಡಿರುವ ಹೇಳಿಕೆಯನ್ನು ಸಚಿವರು ಸಾರಾಸಗಟಾಗಿ ತಳ್ಳಿಹಾಕಿದರು.

ಮೈಸೂರು ಮಹಾರಾಜರ ಕಾಲದಲ್ಲಿ ಜಗತ್ಪ್ರಸಿದ್ಧ ಇಂಜಿನಿಯರ್ ಸರ್ ಎಂ. ವಿಶ್ವೇಶ್ವರಯ್ಯ ಅವರ ಮಾರ್ಗದರ್ಶನದಲ್ಲಿ ಸ್ಥಾಪನೆಯಾದ ಹೆಚ್‌ಎಂಟಿ ಕಾರ್ಖಾನೆಗೆ ಯಾವುದೇ ಜಮೀನನ್ನು ಉಚಿತವಾಗಿ, ಪುಕ್ಕಟೆಯಾಗಿ ನೀಡಿಲ್ಲ. ಬೇಕಿದ್ದರೆ ರಾಜ್ಯ ಅರಣ್ಯ ಸಚಿವರು ದಾಖಲೆಗಳನ್ನು ತೆಗೆದು ನೋಡಲಿ ಎಂದು ಎಂದರು.

ಜಮೀನು ವಾಪಸ್ ಪಡೆದು ಯಾವ ಬಿಲ್ಡರ್​ಗೆ ಧಾರೆ ಎರೆಯುತ್ತೀರಿ?: ಕಾರ್ಖಾನೆಯ ವಶದಲ್ಲಿರುವ ಜಮೀನು ತೆಗೆದುಕೊಂಡು ಏನು ಮಾಡುತ್ತೀರಿ ಸಚಿವರೇ? ಯಾವ ಬಿಲ್ಡರ್​ಗೆ ದಾನ ಮಾಡುತ್ತೀರಿ?. ಹಿಂದೆ ಬೆಂಗಳೂರು ನಗರವನ್ನು ಸಿಂಗಾಪುರ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದ ನಿಮ್ಮ ಪಕ್ಷದ ನಾಯಕರು ಮಾಡಿದ್ದೇನು ಎಂಬುದನ್ನು ಸ್ವಲ್ಪ ತಿಳಿದುಕೊಂಡು ಮಾತನಾಡಿ ಎಂದು ಟಾಂಗ್ ಕೊಟ್ಟರು.

ಒಂದು ಕಡೆ ರಾಜ್ಯಕ್ಕೆ ಕೇಂದ್ರ ಸರ್ಕಾರ ಸಹಕಾರ ನೀಡುತ್ತಿಲ್ಲ ಎಂದು ಆರೋಪ ಮಾಡುತ್ತೀರಿ. ಇನ್ನೊಂದು ಕಡೆ ರಾಜ್ಯಕ್ಕೆ ಒಳ್ಳೆಯದು ಮಾಡಲು ಬರುವ ಕೇಂದ್ರ ಸಚಿವರಿಗೆ ಅಡ್ಡಿ ಮಾಡುತ್ತೀರಿ. ಜನತೆಯ ಆಶೀರ್ವಾದ ಹಾಗೂ ಭಗವಂತನ ಕೃಪೆಯಿಂದ ನಾನು ಕೇಂದ್ರದ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಚಿವನಾಗಿದ್ದೇನೆ. ಸಿಕ್ಕಿರುವ ಕಾಲಾವಕಾಶದಲ್ಲಿ ರಾಜ್ಯಕ್ಕೆ ಏನಾದರೂ ಒಳ್ಳೆಯದು ಮಾಡಬೇಕು ಎನ್ನುವುದು ನನ್ನ ಕಳಕಳಿ ಎಂದು ಹೇಳಿದರು.

ಕೇಂದ್ರ ಸರ್ಕಾರಕ್ಕೆ ಸಹಕಾರ ಕೊಡಿ: ನನಗೆ ಅಸಹಕಾರ ಕೊಟ್ಟರೆ ನಿಮಗೆ ಸಿಗುವ ಲಾಭ ಏನು? ಇಲ್ಲಿ ಕುಮಾರಸ್ವಾಮಿ ಮುಖ್ಯವಲ್ಲ. ರಾಜ್ಯಕ್ಕೆ ಒಳ್ಳೆಯದು ಆಗಬೇಕು. ಅದಕ್ಕಾಗಿ ನನಗೆ, ಕೇಂದ್ರ ಸರ್ಕಾರಕ್ಕೆ ಸಹಕಾರ ಕೊಡಿ. ಇನ್ನಾದರೂ ಲೂಟಿ ಹೊಡೆಯುವುದು ನಿಲ್ಲಿಸಿ ರಾಜ್ಯದ ಅಭಿವೃದ್ಧಿಗಾಗಿ ಕೆಲಸ ಮಾಡಿ. ಸಚಿವ ಈಶ್ವರ ಖಂಡ್ರೆ ಅವರ ಹೇಳಿಕೆಯನ್ನು ಪತ್ರಿಕೆಯಲ್ಲಿ ಓದಿ ನನ್ನ ಕಣ್ಣಲ್ಲಿ ನೀರು ಬಂತು. ಹೆಚ್‌ಎಂಟಿ ಯಂತಹ ಕಾರ್ಖಾನೆಗಳನ್ನು ಕಳೆದುಕೊಂಡು ಏನು ಸಾಧನೆ ಮಾಡುತ್ತೀರಿ? ಎಂದು ಕೇಂದ್ರ ಸಚಿವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ಅರಣ್ಯ ಭೂಮಿಯನ್ನು ವಾಪಸ್ಸು ಪಡೆಯುವ ರಾಜ್ಯ ಅರಣ್ಯ ಸಚಿವರ ಹೇಳಿಕೆಯ ಬಗ್ಗೆ ಅತೀವ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವರು, ಯಾವ ಆಧಾರದ ಮೇಲೆ ಮರಳಿ ಅರಣ್ಯ ಇಲಾಖೆ ವಶಕ್ಕೆ ಭೂಮಿಯನ್ನು ಪಡೆಯುತ್ತೀರಿ?. ಇದರ ಒಳ ಉದ್ದೇಶ ಏನು?. ನಿಮಗೆ ಈ ಭೂಮಿಗಳ ದಾಖಲೆಗಳು, ಈ ಕಾರ್ಖಾನೆಯ ಸ್ಥಾಪನೆಯ ಇತಿಹಾಸ ಗೊತ್ತಿದೆಯೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಾವ ಕಾರಣಕ್ಕೂ ಹೆಚ್‍ಎಂಟಿಗೆ ಸೇರಿದ ಜಮೀನನ್ನು ವಾಪಸ್​ ಕೊಡುವ ಪ್ರಶ್ನೆಯೇ ಇಲ್ಲ. ಅದು ಖರೀದಿ ಮಾಡಿರುವ ಜಮೀನಾಗಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಜನರನ್ನು ದಾರಿ ತಪ್ಪಿಸುತ್ತಿದೆ. ಅಂತಹ ನಡೆಯನ್ನು ಕೂಡಲೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಹೆಚ್‍ಎಂಟಿಗೆ 599 ಎಕರೆ ಜಮೀನನ್ನು ಉಚಿತವಾಗಿ ಕೊಟ್ಟಿಲ್ಲ. ಜಮೀನು ಹಸ್ತಾಂತರಕ್ಕೆ ಸಂಬಂಧಿಸಿದ ಕಡತವನ್ನು ಅರಣ್ಯ ಸಚಿವರು ಪರಿಶೀಲಿಸುವುದು ಒಳ್ಳೆಯದು ಎಂದ ಕೇಂದ್ರ ಸಚಿವರು, ರಾಜ್ಯ ಸರ್ಕಾರ ಇದೇ ರೀತಿ ಕಂಪನಿಗೆ ಕಿರುಕುಳ ನೀಡಿದರೆ, ನಾವು ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದು ನೇರ ಎಚ್ಚರಿಕೆ ಕೊಟ್ಟರು.

ನನ್ನ ಮೇಲಿನ ದ್ವೇಷಕ್ಕೆ ರಾಜ್ಯವನ್ನು ಹಾಳು ಮಾಡಿಕೊಳ್ಳಬೇಡಿ: ಕಾಡುಗೋಡಿ ಪ್ಲಾಂಟೇಷನ್ 711 ಎಕರೆ ಇದೆ. ಅದನ್ನು ಕಾನ್ ಕಾರ್ಡ್ ಪ್ರೈ ಲಿ. ಖರೀದಿ ಮಾಡಿದೆ. ಈಗ ಆ ಭೂಮಿಯಲ್ಲಿ ರಾಜ್ಯ ಸರಕಾರ ನಿವೇಶನಗಳನ್ನು ಮಾಡಿ ಹಂಚಲು ಹೊರಟಿದೆ. ಆಗ ಅದು ಅರಣ್ಯ ಭೂಮಿ, ಅದನ್ನು ವಶಪಡಿಸಿಕೊಳ್ಳಬೇಕು ಅನಿಸಲಿಲ್ಲವಾ‌? ಖಂಡ್ರೆ ಅವರೇ ಕುಮಾರಸ್ವಾಮಿ ಮೇಲಿನ ದ್ವೇಷಕ್ಕೆ ರಾಜ್ಯವನ್ನು ಹಾಳು ಮಾಡಿಕೊಳ್ಳಬೇಡಿ. ನೀವು ಲೂಟಿ ಮಾಡಿದ್ದು ಸಾಕು. ಕುಮಾರಸ್ವಾಮಿ ಮಾಡ್ತಿರುವ ಕೆಲಸಕ್ಕೆ ಸಹಕಾರ ಕೊಡಿ ಎಂದು ಅವರು ಒತ್ತಾಯ ಮಾಡಿದರು.

ಶಿವಮೊಗ್ಗದ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಕಾಯಕಲ್ಪ ನೀಡಿ ಅದಕ್ಕೆ ಮರುಜೀವ ಕೊಡುವ ಪ್ರಯತ್ನ ಮಾಡುತ್ತಿದ್ದೇನೆ. ಇದಕ್ಕೆ ಪ್ರಧಾನಿಗಳು, ಹಣಕಾಸು ಸಚಿವರ ಒಪ್ಪಿಗೆ ಬೇಕಿದೆ. ಈ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಹತ್ತು ಸಾವಿರ ಕೋಟಿ ಹಣ ಬೇಕು. ಈಗಾಗಲೇ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ನಾನೇನು ಸುಮ್ಮನೆ ಕೂತಿಲ್ಲ. ಉದ್ಯೋಗ ಸೃಷ್ಟಿ ಆಗಬೇಕು ಎನ್ನುವುದು ನನ್ನ ಉದ್ದೇಶ ಎಂದರು.

ಇದನ್ನೂ ಓದಿ: ಪೂರ್ವಾನುಮತಿ ಬಗ್ಗೆ ರಾಜ್ಯಪಾಲರ ಹಾಗೆ ನಾವೂ ಕಾದು ನೋಡುತ್ತೇವೆ: ಗೃಹ ಸಚಿವ ಪರಮೇಶ್ವರ್ - Dr G Parameshwar

Last Updated : Aug 13, 2024, 5:37 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.