ETV Bharat / state

ಎಸ್​ಟಿ ಪ್ರವರ್ಗಕ್ಕೆ ವಾಲ್ಮೀಕಿ, ಒಬಿಸಿ ವರ್ಗಕ್ಕೆ ಕುಂಚಿಟಿಗ, ಸಾದರ, ವೀರಶೈವರನ್ನು ಸೇರಿಸಲು ಕೇಂದ್ರದಲ್ಲಿ ಚರ್ಚೆ: ಹೆಚ್‌ಡಿಕೆ - h d kumaraswamy - H D KUMARASWAMY

ವಾಲ್ಮೀಕಿ ಸಮುದಾಯವನ್ನು ಎಸ್​ಟಿ ಪ್ರವರ್ಗಕ್ಕೆ ಹಾಗೂ ಕುಂಚಿಟಿಗ, ಸಾದರ, ವೀರಶೈವ, ಸಮಾಜಗಳನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಬಗ್ಗೆ ಕೇಂದ್ರ ಸರ್ಕಾರದ ಗೃಹ ಸಚಿವರು ಹಾಗೂ ಸಾಮಾಜಿಕ ಸಬಲೀಕರಣ ಸಚಿವರ ಜತೆ ಚರ್ಚೆ ಮಾಡುತ್ತೇನೆ ಎಂದು ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಕುಮಾರಸ್ವಾಮಿ ಅವರನ್ನು ಭೇಟಿಯಾದ ಮುಖಂಡರು
ಕುಮಾರಸ್ವಾಮಿ ಅವರನ್ನು ಭೇಟಿಯಾದ ಮುಖಂಡರು (ETV Bharat)
author img

By ETV Bharat Karnataka Team

Published : Sep 14, 2024, 10:16 PM IST

ಬೆಂಗಳೂರು: ವಾಲ್ಮೀಕಿ ಸಮುದಾಯವನ್ನು ಎಸ್​ಟಿ ಪ್ರವರ್ಗಕ್ಕೆ ಹಾಗೂ ಕುಂಚಿಟಿಗ, ಸಾದರ, ವೀರಶೈವ ಸಮಾಜಗಳನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಪ್ರಯತ್ನಕ್ಕೆ ದನಿಗೂಡಿಸುವುದಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಹೆಚ್​ಡಿಕೆ ಭೇಟಿಯಾದ ವಿವಿಧ ಜಿಲ್ಲೆಗಳ ಮುಖಂಡರು
ಹೆಚ್​ಡಿಕೆ ಭೇಟಿಯಾದ ವಿವಿಧ ಜಿಲ್ಲೆಗಳ ಮುಖಂಡರು (ETV Bharat)

ಪಕ್ಷದ ಕಚೇರಿ ಜೆಪಿ ಭವನದಲ್ಲಿಂದು ಈ ಬಗ್ಗೆ ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಮುಖಂಡರು ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಅವರು, ತಮ್ಮ ಈ ಬೇಡಿಕೆ ಬಗ್ಗೆ ಕೇಂದ್ರ ಸರ್ಕಾರದ ಗೃಹ ಸಚಿವರು ಹಾಗೂ ಸಾಮಾಜಿಕ ಸಬಲೀಕರಣ ಸಚಿವರ ಜತೆ ಚರ್ಚೆ ಮಾಡುತ್ತೇನೆ. ಈಗಾಗಲೇ ಕಾಡುಗೊಲ್ಲ ಸಮುದಾಯವನ್ನು ಎಸ್​ಟಿ ಪ್ರವರ್ಗಕ್ಕೆ ಸೇರಿಸುವ ನಿಟ್ಟಿನಲ್ಲಿ ಮಾಜಿ ಪ್ರಧಾನಿಗಳಾದ ದೇವೇಗೌಡರು ಹಾಗೂ ನಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದೇವೆ. ನಿಮ್ಮ ಬೇಡಿಕೆಯ ಬಗ್ಗೆಯೂ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

ಮಡಕಶಿರಾ ಭಾಗದಲ್ಲಿ ಬೃಹತ್ ಕೈಗಾರಿಕೆ ಸ್ಥಾಪನೆಗೆ ಉದ್ಯಮಿಗಳ ಜತೆ ಚರ್ಚೆ: ಕರ್ನಾಟಕ ಗಡಿಗೆ ಹೊಂದಿಕೊಂಡಿರುವ ಮಡಕಶಿರಾ ಭಾಗದಲ್ಲಿ ಬೃಹತ್ ಕೈಗಾರಿಕಗಳನ್ನು ಸ್ಥಾಪಿಸುವ ಉದ್ದಿಮೆದಾರರ ಜತೆ ಚರ್ಚೆ ನಡೆಸಲಾಗುವುದು ಎಂದು ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

ಕುಮಾರಸ್ವಾಮಿ  ಅವರನ್ನು ಭೇಟಿಯಾದ ಮುಖಂಡರು
ಕುಮಾರಸ್ವಾಮಿ ಅವರನ್ನು ಭೇಟಿಯಾದ ಮುಖಂಡರು (ETV Bharat)

ತಮ್ಮನ್ನು ಭೇಟಿಯಾದ ಮಡಕಶಿರಾ ಶಾಸಕ ಎಂ.ಎಸ್. ರಾಜು ಅವರ ಜತೆ ಮಾತನಾಡಿದ ಕೇಂದ್ರ ಸಚಿವರು, ಮಡಕಶಿರಾದಲ್ಲಿ ಕೈಗಾರಿಕೆಗಳು ಸ್ಥಾಪನೆಯಾದರೆ ಪಾವಗಡ, ಶಿರಾ, ಮಧುಗಿರಿ, ಹಿರಿಯೂರು ಭಾಗದ ಜನರಿಗೆ ಕೂಡ ಅನುಕೂಲ ಆಗುತ್ತದೆ. ಎಲ್ಲರಿಗೂ ಉದ್ಯೋಗ ಸಿಗುತ್ತದೆ, ಕೆಲಸಕ್ಕೆ ವಲಸೆ ಹೋಗುವುದು ತಪ್ಪುತ್ತದೆ. ಅಲ್ಲಿಗೆ ಸೂಕ್ತವಾಗುವ ಕೈಗಾರಿಕೆ ತರುವುದಕ್ಕೆ ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

ಉದ್ಯಮಿಗಳ ಜತೆ ಸಮಾಲೋಚನೆ ನಡೆಸುತ್ತೇನೆ. ಹಾಗೆಯೇ ನಮ್ಮ ಇಲಾಖೆ ಹಂತದಲ್ಲಿಯೂ ಚರ್ಚೆ ಮಾಡುತ್ತೇನೆ. ಗಡಿ ಭಾಗದಲ್ಲಿ ಕೈಗಾರಿಕೆಗಳು ಬಂದರೆ ಎಲ್ಲರಿಗೂ ಅನುಕೂಲ ಆಗುತ್ತದೆ. ಮೊದಲಿನಿಂದಲೂ ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರು ಅಭಿವೃದ್ಧಿ ಪರವಾದ ಕೊಡುಗೆ ನೀಡಿದ್ದಾರೆ. ವೈಜಾಗ್ ಉಕ್ಕು ಘಟಕದ ಪುನರುದ್ಧಾರಕ್ಕೆ ನಾನು ಪ್ರಯತ್ನ ಮಾಡುತ್ತಿವುದು ನಿಮಗೆ ಗೊತ್ತೇ ಇದೆ. ಹನ್ನೆರಡು ವರ್ಷ ನಿರಂತರವಾಗಿ ಲಾಭದಲ್ಲಿದ್ದ ಈ ಕಾರ್ಖಾನೆ ಈಗ ನಷ್ಟದಲ್ಲಿದೆ. ಅದಕ್ಕೆ ಮರುಜೀವ ಕೊಡುವುದಕ್ಕೆ ನಾನು ಪ್ರಯತ್ನ ಮಾಡುತ್ತಿದ್ದೇನೆ. ಅದೇ ರೀತಿ ಮಡಕಶಿರಾ ಭಾಗದಲ್ಲಿ ಕೈಗಾರಿಕೆ ಸ್ಥಾಪನೆಗೆ ಪ್ರಯತ್ನ ನಡೆಸುವೆ ಎಂದು ಹೇಳಿದರು.

ಇಲ್ಲಿ ಬೃಹತ್​ ಕೈಗಾರಿಕೆಗಳನ್ನು ಆರಂಭಿಸಿ: ಮಡಕಶಿರಾ ಶಾಸಕ ಎಂ.ಎಸ್. ರಾಜು ಮಾತನಾಡಿ, ಮಡಕಶಿರಾ ಮತ್ತು ಸುತ್ತಮುತ್ತಲ ಪ್ರದೇಶದ ಸುಮಾರು 40,000ಕ್ಕೂ ಹೆಚ್ಚು ನಮ್ಮ ಭಾಗದ ಬಡ ಯುವಕರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. 3000 ಎಕರೆ ಜಾಗ ಇದೆ, ಪೆನುಗೊಂಡ ಹೆದ್ದಾರಿ ಬಳಿಯೂ ಜಾಗ ಇದೆ. ಬೃಹತ್ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಅನುಕೂಲವಾದ ಜಾಗ ಇದೆ. ಕೈಗಾರಿಕೆ ಕ್ಲಸ್ಟರ್ ಮಾಡಿದರೆ ಮಡಕಶಿರಾ ಸೇರಿ ಅಲ್ಲಿ ನಮ್ಮ ಗಡಿಗೆ ಹೊಂದಿಕೊಂಡಿರುವ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಬಡ ಯುವಕರಿಗೆ ಅನುಕೂಲ ಆಗುತ್ತದೆ ಎಂದರು.

ಮಾಜಿ ಶಾಸಕ ತಿಮ್ಮರಾಯಪ್ಪ ಮಾತನಾಡಿ, ಪಾವಗಡ ಹತ್ತಿರವೇ 1,600 ಎಕರೆ ಭೂಮಿ ಇದೆ. ಕೈಗಾರಿಕೆ ಸ್ಥಾಪನೆ ಮಾಡಿದರೆ ಅಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆ ಆಗುತ್ತದೆ ಎಂದು ಮನವಿ ಮಾಡಿದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ವಿಧಾನ ಪರಿಷತ್ ಸದಸ್ಯ ಕೆ ಎನ್ ತಿಪ್ಪೇಸ್ವಾಮಿ, ಮಾಜಿ ಶಾಸಕ ತಿಮ್ಮರಾಯಪ್ಪ, ತುಮಕೂರು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಅಂಜಿನಪ್ಪ ಸೇರಿದಂತೆ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

ಇದನ್ನೂ ಓದಿ: ಸಿಎಂ, ಸರ್ಕಾರದ ಹಗರಣ ಮುಚ್ಚಿಕೊಳ್ಳಲು ನಾಗಮಂಗಲ ಗಲಭೆ ಸೃಷ್ಟಿ: ಹೆಚ್​ಡಿಕೆ ಆರೋಪ - H D Kumaraswamy

ETV Bharat Logo

Copyright © 2024 Ushodaya Enterprises Pvt. Ltd., All Rights Reserved.