ETV Bharat / state

'ನಿಮ್ಮದನ್ನು ಬಿಚ್ಚಲು ಹೋದರೆ ಪುಟಗಟ್ಟಲೆ ಇದೆ': ಡಿಕೆಶಿಗೆ ಹೆಚ್‌ಡಿಕೆ ತಿರುಗೇಟು - h d kumaraswamy - H D KUMARASWAMY

ಬಿಜೆಪಿ - ಜೆಡಿಎಸ್ ಪಾದಯಾತ್ರೆಯಲ್ಲಿ ಹೆಚ್‌ಡಿ ಕುಮಾರಸ್ವಾಮಿ ಅವರು ಡಿ.ಕೆ. ಶಿವಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಿಂದಿನ ಹಲವು ಪ್ರಕರಣಗಳನ್ನು ಪ್ರಸ್ತಾಪಿಸಿ ನಿಮ್ಮ ತಪ್ಪುಗಳನ್ನು ಬಿಚ್ಚಲು ಹೋದರೆ ಪುಟಗಟ್ಟಲೆ ಇದೆ ಎಂದು ಹೇಳಿದ್ದಾರೆ.

ಬಿಜೆಪಿ - ಜೆಡಿಎಸ್ ಪಾದಯಾತ್ರೆ
ಬಿಜೆಪಿ - ಜೆಡಿಎಸ್ ಪಾದಯಾತ್ರೆ (ETV Bharat)
author img

By ETV Bharat Karnataka Team

Published : Aug 4, 2024, 10:50 PM IST

ರಾಮನಗರ: ನಾನು ನಿಮ್ಮದನ್ನು ಬಿಚ್ಚಲು ಹೋದರೆ ಪುಟಗಟ್ಟಲೆ ಇದೆ. ಆ ಹೆಣ್ಣುಮಗಳನ್ನು ಕಿಡ್ನಾಪ್ ಮಾಡಿ ಬೆದರಿಸಿ ಅವರಪ್ಪನಿಂದ ಸದಾಶಿವನಗರದಲ್ಲಿ ನಿವೇಶನ ಬರೆಸಿಕೊಂಡಿದ್ದೀರಿ. ಆ ಹೆಣ್ಣುಮಗಳನ್ನು ಕಿಡ್ನ್ಯಾಪ್ ಮಾಡಿ ಬೆದರಿಕೆ ಹಾಕಿದ್ದು ನೀವೇ ಅಲ್ಲವೇ ಎಂದು ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.​

ಬಿಡದಿಯಲ್ಲಿಂದು ಮೈಸೂರು ಚಲೋ ಎರಡನೇ ದಿನದ ಪಾದಯಾತ್ರೆಗೆ ಚಾಲನೆ ಕೊಟ್ಟು ಬಳಿಕ ಬಹಿರಂಗ ಸಭೆಯಲ್ಲಿ ಭಾಷಣ ಮಾಡಿದ ಅವರು, ಅದೇನೋ ಬಿಚ್ತೀನಿ ಅಂದ್ಯಲ್ಲಪ್ಪ, ಬಿಚ್ಚು ನೋಡೋಣ, ನಂದು ವಿಜಯೇಂದ್ರದ್ದು. ಆಮೇಲೆ ನಿನ್ನದನ್ನು ಹೇಗೆ ಬಿಚ್ಚುತೀನಿ ಎಂದು ನೋಡುವಿಯಂತೆ. ಏನಿದೆ ನಿಮ್ಮ ಬಳಿ ಬಿಚ್ಚಿ, ನಾನಿರೋದು ಬೀದಿಯಲ್ಲಿ, ನೀನಿರೋದು ಗಾಜಿನ ಮನೆಯಲ್ಲಿ ಎಂದು ಹರಿಹಾಯ್ದರು.

ಮೈಸೂರು ಚಲೋ ಪಾದಯಾತ್ರೆ
ಮೈಸೂರು ಚಲೋ ಪಾದಯಾತ್ರೆ (ETV Bharat)

ಅಜ್ಜಯ್ಯನ ಮೇಲೆ ಪ್ರಮಾಣ ಮಾಡಿ: ನಾನು ಬಿಚ್ಚೋಕ್ಕೆ ಹೋದ್ರೆ ನಿಮ್ಮದು ಪುಟಗಟ್ಟಲೆ ಇದೆ. ಅಜ್ಜಯ್ಯನ ಬಗ್ಗೆ ಈ ಡಿ.ಕೆ.ಶಿವಕುಮಾರ್​ಗೆ ಭಕ್ತಿ ಗೌರವ ಇದ್ದರೆ ಪ್ರಮಾಣ ಮಾಡಲಿ. ಅಜ್ಜಯ್ಯನ ಬಗ್ಗೆ ನನಗೆ ಗೌರವ, ಭಕ್ತಿ ಎರಡೂ ಇದೆ. ನಾನು ಪ್ರಾಮಾಣಿಕವಾಗಿ ಬೆಳೆದು ಬಂದಿದ್ದೇನೆ ಎಂದು ಅವರ ಮೇಲೆ ಪ್ರಮಾಣ ಮಾಡಿ. ನಾನೂ ಪ್ರಮಾಣ ಮಾಡುತ್ತೇನೆ ಎಂದು ಡಿಕೆಶಿಗೆ ಕುಮಾರಸ್ವಾಮಿ ನೇರ ಸವಾಲು ಹಾಕಿದರು.

ಈ ಡಿಕೆಶಿಗೆ ಅಜ್ಜಯ್ಯನ ಶಾಪವೂ ಆರಂಭವಾಗಿದೆ. ಎಷ್ಟು ಮನೆಗಳನ್ನು ಒಡೆದು ನೀವು ಬೆಳೆದಿದ್ದೀರಿ ಎಂದು ನನಗೆ ಗೊತ್ತಿದೆ. ನಾನು ಏನೂ ಮಾಡಿಯೇ ಇಲ್ಲ, ಸ್ವಚ್ಛವಾಗಿದ್ದೇನೆ ಎಂದು ಅಜ್ಜಯನ ಮುಂದೆ ನಿಂತು ಪ್ರಮಾಣ ಮಾಡಲಿ ಎಂದರು.

ನಾನು ಯಾರಿಗೂ ದ್ರೋಹ ಮಾಡಲಿಲ್ಲ. ಮಾಡುವುದೂ ಇಲ್ಲ. ಜನರ ಆಶೀರ್ವಾದವೇ ನನ್ನ ಬಲ, ಅದೇ ನನ್ನ ಬೆಳೆಸಿದೆ. ನಾನು ಯಡಿಯೂರಪ್ಪ ಅವರಿಗೂ ದ್ರೋಹ ಮಾಡಲಿಲ್ಲ. ಆ ಸಂದರ್ಭದಲ್ಲಿ ಅನಿವಾರ್ಯ ಕಾರಣಗಳಿಂದ ಅಧಿಕಾರ ಹಂಚಿಕೆ ಆಗಲಿಲ್ಲ. ನಾನು ಯಡಿಯೂರಪ್ಪ ಅವರಿಗೆ ಯಾವತ್ತೂ ದ್ರೋಹ ಮಾಡಿಲ್ಲ. ಬಿಜೆಪಿ‌-ಜೆಡಿಎಸ್ ಮೈತ್ರಿ ಕಾಂಗ್ರೆಸ್ ನಿದ್ದೆಗೆಡಿಸಿದೆ. ಅದಕ್ಕೆ ಶಿವಕುಮಾರ್ ನಮ್ಮ ಮೈತ್ರಿ ಬಗ್ಗೆ ಹೊಟ್ಟೆ ಉರಿ ಅನುಭವಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರು ಚಲೋ ಪಾದಯಾತ್ರೆ
ಮೈಸೂರು ಚಲೋ ಪಾದಯಾತ್ರೆ (ETV Bharat)

ನೀವೇ ಗೋಗರೆದು ಸಿಎಂ ಮಾಡಿದಿರಿ: ನನಗೆ ಮತ್ತೆ ಅಧಿಕಾರಕ್ಕೆ ಬರುವ ಆಸೆ ಇಲ್ಲ. ಈಗಾಗಲೇ ನಾನು ಎರಡು ಸಲ ಸಿಎಂ ಆಗಿದ್ದೇನೆ. ಆದರೆ ರಾಜ್ಯಕ್ಕೆ ಒಳ್ಳೆಯದಾಗಬೇಕು. ನಾನು ಅಧಿಕಾರ ಕೇಳಿ ನಿಮ್ಮ ಬಳಿ ಬಂದಿರಲಿಲ್ಲ. ನೀವೇ ಗೋಗರೆದು ಸಿಎಂ ಮಾಡಿದಿರಿ ಶಿವಕುಮಾರ್. ನೀವು ಮರೆತು ಹೋಗಿದ್ದೀರಿ, ಒಮ್ಮೆ ನೆನಪುವಾಡಿಕೊಳ್ಳಿ ಎಂದು ಕುಮಾರಸ್ವಾಮಿ ಅವರು ಡಿಕೆಶಿಗೆ ಟಾಂಗ್ ಕೊಟ್ಟರು.

ರಾಜಕೀಯ ನಿವೃತ್ತಿಯ ಸವಾಲು ಹಾಕಿದ ಹೆಚ್​ಡಿಕೆ: ದಲಿತರಿಗೆ ಸೇರಬೇಕಾದ 68 ಎಕರೆ ಜಮೀನು ಡಿಸಿಎಂ ಲಪಟಾಯಿಸಿದ್ದಾರೆ. ದಲಿತರಿಗೆ ಸಿಗಬೇಕಾದ ನಿವೇಶನಗಳನ್ನು ಡಿಕೆಶಿ ಹೊಡೆದುಕೊಂಡಿದ್ದಾರೆ. ಅಸಲಿ ಸೊಸೈಟಿಯನ್ನು ನಕಲಿ ಮಾಡಿ ದಲಿತರ ಭೂಮಿ ಲಪಟಾಯಿಸಿದ್ದಾರೆ. ಇವರ ಬಳಿ ‌ನಾನು ಹೇಳಿಸಿಕೊಳ್ಳುವ ಅಗತ್ಯ ಇಲ್ಲ ಎಂದರು.

ನಾನು ಸಿನಿಮಾ ವಿತರಕನಾಗಿದ್ದಾಗ ಭೂಮಿ‌ ಖರೀದಿಸಿದೆ. ಕೇತಗಾನಹಳ್ಳಿಯಲ್ಲಿ ನಾನು ಚಲನಚಿತ್ರ ಪ್ರದರ್ಶಕನಾಗಿದ್ದಾಗ ಚುನಾವಣೆಗೆ ನಿಲ್ಲುವ 15 ವರ್ಷಗಳ ಹಿಂದೆ 45 ಎಕರೆ ಜಮೀನು ತಗೊಂಡಿದ್ದೇನೆ. ಇದನ್ನು ನಾನು ಎಲ್ಲೂ ಮುಚ್ಚಿಟ್ಟಿಲ್ಲ. ನಾನು ಯಾರಿಗೂ ಮೋಸ ಮಾಡಲಿಲ್ಲ. ನಾನು ವಂಚನೆ ಮಾಡಿ ಭೂಮಿ ಖರೀದಿಸಿದ್ರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಹೆಚ್​ಡಿಕೆ ಹೇಳಿದರು.

ಮುಡಾ ಬಗ್ಗೆ ದಾಖಲೆ ಸಮೇತ ಮಾತನಾಡಿದ್ದೇವೆ: ಮುಡಾ ಬಗ್ಗೆ ನಾನು, ನಮ್ಮ ಶಾಸಕರು ಇವರ ಅಕ್ರಮದ ಬಗ್ಗೆ ದಾಖಲೆಗಳ ಸಮೇತ ಮಾತನಾಡಿದ್ದೇವೆ. ಮೈಸೂರು ನಗರದ ಉಸ್ತುವಾರಿಯನ್ನು ಸಿಎಂ ಅವರೇ ವಹಿಸಿಕೊಂಡಿದ್ದಾರೆ. ಸಿಎಂ ತಮ್ಮ ಪತ್ನಿ ಹೆಸರಲ್ಲಿ 15 ಸೈಟು ಪಡೆಯಲು ನಮ್ಮ ವಿರೋಧ ಇಲ್ಲ. ಆದರೆ ಅಧಿಕಾರ ದುರುಪಯೋಗ ಪಡಿಸಿಕೊಂಡು ಸೈಟು ಪಡೆದಿದ್ದಾರೆ ದೂರಿದರು.

ಇದನ್ನೂ ಓದಿ: ಕುಮಾರಸ್ವಾಮಿ ಹಿಟ್ ಅಂಡ್ ರನ್, ಬ್ಲಾಕ್ ಮೇಲರ್ : ಡಿಸಿಎಂ ಡಿ. ಕೆ ಶಿವಕುಮಾರ್ - D K SHIVAKUMAR OUTRAGE AGAINST HDK

ETV Bharat Logo

Copyright © 2025 Ushodaya Enterprises Pvt. Ltd., All Rights Reserved.