ETV Bharat / state

ಗ್ಯಾರಂಟಿ ಹೆಸರಿನಲ್ಲಿ ಬಿಡಿಗಾಸು ಕೊಟ್ಟು ಕೋಟಿ ಕೋಟಿ ಲೂಟಿ: ಹೆಚ್.ಡಿ.ಕುಮಾರಸ್ವಾಮಿ - H D KUMARASWAMY

ಗುತ್ತಿಗೆದಾರರ 32,000 ಕೋಟಿಯಷ್ಟು ಬಿಲ್ ಬಾಕಿ ಬಿದ್ದಿದೆ. ಈ ಬಾಕಿ ಮೇಲೆ ನಿಮ್ಮ ಪರ್ಸಂಟೇಜ್ ಕರಿನೆರಳು ಕೂಡ ಇದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ದೂರಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ (ETV Bharat)
author img

By ETV Bharat Karnataka Team

Published : Jan 7, 2025, 2:31 PM IST

Updated : 24 hours ago

ಬೆಂಗಳೂರು: ದಾಖಲೆ ಕೊಡಿ.. ದಾಖಲೆ ಕೊಡಿ ಎನ್ನುತ್ತಿದ್ದೀರಿ. ಇಲ್ನೋಡಿ ಸನ್ಮಾನ್ಯ ಸಿದ್ದರಾಮಯ್ಯನವರೇ.. ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ. ಪತ್ರಿಕೆಯವರೇ ನಿಮ್ಮ ಸಾಕ್ಷಿಗುಡ್ಡೆಯ ಸಾಕ್ಷಾತ್ಕಾರ ಮಾಡಿಸಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ನಿಮ್ಮ ಸರ್ಕಾರ ಗುತ್ತಿಗೆದಾರರನ್ನು ಎಷ್ಟು ನಿರ್ಲಜ್ಜವಾಗಿ ಸುಲಿಗೆ ಮಾಡುತ್ತಿದೆ ಎನ್ನುವುದಕ್ಕೆ ಈ ಸಾಕ್ಷಿಗುಡ್ಡೆ ಸಾಕ್ಷ್ಯ ಸಾಲದೇ ಮುಖ್ಯಮಂತ್ರಿಗಳೇ?. ಚೆಂಬು ಹಾಕಿ ಹಂಡೆ ಹೊಡೆದರು ಎನ್ನುವಂತೆ ಗ್ಯಾರಂಟಿ ಹೆಸರಿನಲ್ಲಿ ಬಿಡಿಗಾಸು ಕೊಟ್ಟು ಕೋಟಿ ಕೋಟಿ ಲೂಟಿ ಮಾಡುತ್ತಿದ್ದೀರಿ, ಗುತ್ತಿಗೆದಾರರ 32,000 ಕೋಟಿಯಷ್ಟು ಬಿಲ್ ಬಾಕಿ ಬಿದ್ದಿದೆ. ಈ ಬಾಕಿ ಮೇಲೆ ನಿಮ್ಮ ಪರ್ಸಂಟೇಜ್ ಕರಿನೆರಳು ಕೂಡ ಬಿದ್ದಿದೆ. ಸಾಲಸೋಲ ಮಾಡಿ ಕಾಮಗಾರಿ ಮಾಡಿರುವ ಗುತ್ತಿಗೆದಾರರು ದಯಾಮರಣಕ್ಕೆ ಅರ್ಜಿ ಬರೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಪೋಸ್ಟ್
ಹೆಚ್.ಡಿ.ಕುಮಾರಸ್ವಾಮಿ ಪೋಸ್ಟ್ (HDK X Account)

ಗುತ್ತಿಗೆದಾರರ ಬಿಲ್ ಬಾಕಿ ಪಟ್ಟಿ ನೋಡಿ. ಜಲ ಸಂಪನ್ಮೂಲ: 14,600 ಕೋಟಿ ರೂ., ಲೋಕೋಪಯೋಗಿ: 10,000 ಕೋಟಿ ರೂ., ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್: 3,100 ಕೋಟಿ ರೂ., ಸಣ್ಣ ನೀರಾವರಿ: 2,800 ಕೋಟಿ ರೂ., ಇತರೆ ಇಲಾಖೆ: 1,500 ಕೋಟಿ ರೂ., ಒಟ್ಟು: 32,000 ಕೋಟಿ ರೂ. ಎಂದು ವಿವರಿಸಿದ್ದಾರೆ.

ಭಂಡತನ ಏಕೆ?: ಆಗಿರುವ ತಪ್ಪು ಸರಿಪಡಿಸಿಕೊಳ್ಳಿ. ವಿನಾಕಾರಣ ಸಮರ್ಥನೆ ಲಾಯಕ್ಕಲ್ಲ. ಗುತ್ತಿಗೆದಾರರ ಬದುಕು ಉಳಿಸಿ ರಾಜ್ಯದ ಅಭಿವೃದ್ಧಿ ಕಡೆಗೆ ಗಮನ ಹರಿಸಿ. ಇದ್ದಿದ್ದನ್ನು ಇದ್ದಹಾಗೆ ಹೇಳಿದ್ದೇನೆ. ನೀವೂ, ನಿಮ್ಮ ಸಂಪುಟ ನನ್ನ ಮೇಲೆ ವಾಗ್ಯುದ್ಧಕ್ಕಿಳಿದರೆ ಉಪಯೋಗವೇನು? ಗುತ್ತಿಗೆದಾರರ ಬಾಕಿ ಪಾವತಿಗಿಂತ ನನ್ನನ್ನು ಟಾರ್ಗೆಟ್ ಮಾಡುವುದು ಮುಖ್ಯವಲ್ಲ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಹಿಟ್ ಅಂಡ್ ರನ್ ಮುಖ್ಯಮಂತ್ರಿ: ಸಿದ್ದರಾಮಯ್ಯ ವಿರುದ್ಧ ಹೆಚ್​.ಡಿ‌.ಕುಮಾರಸ್ವಾಮಿ ಕಿಡಿ

Last Updated : 24 hours ago
ETV Bharat Logo

Copyright © 2025 Ushodaya Enterprises Pvt. Ltd., All Rights Reserved.