ETV Bharat / state

BPL ಕಾರ್ಡ್​: ರಾಜ್ಯ ಸರ್ಕಾರ ಭಿನ್ನ ರಾಗ ಹಾಡುತ್ತಿದೆ ಎಂದು ಕುಮಾರಸ್ವಾಮಿ ಆಕ್ರೋಶ - H D KUMARASWAMY

ಕೇಂದ್ರ ಸಚಿವ ಹೆಚ್​. ಡಿ ಕುಮಾರಸ್ವಾಮಿ ಅವರು ಬಿಪಿಎಲ್​ ಕಾರ್ಡ್​ ರದ್ದತಿ ಕುರಿತು ಮಾತನಾಡಿದ್ದಾರೆ. ಕೇಂದ್ರದ ಮಾನದಂಡದ ಪ್ರಕಾರ ಬಿಪಿಎಲ್ ಕಾರ್ಡ್​ಗಳನ್ನ ರದ್ದು ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ ಎಂದಿದ್ದಾರೆ. ​

union-minister-h-d-kumaraswamy
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ (ETV Bharat)
author img

By ETV Bharat Karnataka Team

Published : Nov 21, 2024, 6:54 PM IST

ಬೆಂಗಳೂರು : ಕೇಂದ್ರದ ಮಾನದಂಡದ ಪ್ರಕಾರ ಬಿಪಿಎಲ್ ಕಾರ್ಡ್​ಗಳನ್ನು ರದ್ದು ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಈಗ ಹೇಳುತ್ತಿದೆ. ಆದರೆ, ಇಷ್ಟು ದಿನ ಇದನ್ನು ಏಕೆ ಹೇಳಲಿಲ್ಲ? ಎಂದು ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇವತ್ತು ಬೆಳಗ್ಗೆ ಮಾಧ್ಯಮಗಳಲ್ಲಿ ಕೇಂದ್ರದ ಮಾನದಂಡ ಎಂದು ವರದಿ ಬಂದ ಮೇಲೆ ರಾಜ್ಯ ಸರ್ಕಾರ ಭಿನ್ನರಾಗ ಹಾಡುತ್ತಿದೆ. ಆದರೆ, ಕಳೆದ ಒಂದು ವಾರ ಏಕೆ ಹೇಳಲಿಲ್ಲ? ಆಗೆಲ್ಲಾ ಹೇಳಿದ್ದು ಏನು ಹಾಗಾದರೆ? ಎಂದು ಆಕ್ಷೇಪ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ವಿಚಾರದಲ್ಲಿ ರಾಜ್ಯ ಸರ್ಕಾರ ಗೊಂದಲ ಉಂಟು ಮಾಡುತ್ತಿದೆ. ಅದಕ್ಕೆ ಜನತೆಗೆ ಉತ್ತರ ಕೊಡಲು ಸಾಧ್ಯ ಆಗುತ್ತಿಲ್ಲ ಎಂದು ಅವರು ಹೇಳಿದರು.

ಖಜಾನೆ ತುಂಬಿಸಿಕೊಂಡಿದ್ದಾರೆ : ಸಿಎಂ ಒಂದು ಹೇಳಿಕೆ ‌ಕೊಡುತ್ತಾರೆ. ಸಚಿವರು ಇನ್ನೊಂದು ಹೇಳಿಕೆ ಕೊಡುತ್ತಾರೆ. ಇವರಲ್ಲೇ ಕ್ಲ್ಯಾರಿಟಿ ಇಲ್ಲ. ಗ್ಯಾರಂಟಿ ಸ್ಕೀಮ್​ಗಳ ಬಗ್ಗೆ ನಾನು ಲಘುವಾಗಿ ಮಾತಾಡಿಲ್ಲ. ಗ್ಯಾರಂಟಿ ಕೊಡಲು ಆರ್ಥಿಕವಾಗಿ ಸಮಸ್ಯೆ ಇಲ್ಲ ಎಂದು ಹೇಳಿದ್ದೇನೆ. ನಿರಂತರವಾಗಿ ತೆರಿಗೆ ಹೆಚ್ಚಳ ಮಾಡಿಕೊಂಡು ಖಜಾನೆ ತುಂಬಿಸಿಕೊಂಡಿದ್ದಾರೆ. ಆ ದುಡ್ಡು ಎಲ್ಲಿ ಹೋಗುತ್ತಿದೆ ಎಂದಷ್ಟೇ ಕೇಳಿದ್ದೇನೆ. ಹಣಕಾಸು ನಿರ್ವಹಣೆಯಲ್ಲಿ ಸಮಸ್ಯೆಯಿದೆ. ಅದನ್ನು ಸರಿಪಡಿಸಿಕೊಳ್ಳಿ ಎಂದು ಹೇಳಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿ ಗೆಲ್ಲುತ್ತಾರೆ : ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಹೇಳಿದ ಹೆಚ್​ಡಿಕೆ, ನಾನೇ ಅಲ್ಲಿ 15 ದಿನ ಪ್ರಚಾರದಲ್ಲಿ ಭಾಗವಹಿಸಿದ್ದೇನೆ. ಜನತೆ ಭಾವನೆ ಏನು ಅಂತ ಗೊತ್ತಿದೆ. ಗೆಲುವಿನಲ್ಲಿ ಯಾವುದೇ ಅನುಮಾನ ಇಲ್ಲ. ಎನ್​ಡಿಎ ಅಭ್ಯರ್ಥಿ ಗೆದ್ದೇ ಗೆಲ್ಲುತ್ತಾರೆ. ಹಾಗೆಯೇ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ : ಸದನ ಆರಂಭವಾಗುವ ಮುನ್ನವೇ ರಾಜ್ಯ ಸರ್ಕಾರ ಜನರಿಗೆ ರೇಷನ್‌ ಕಾರ್ಡ್‌ ವಾಪಸ್‌ ನೀಡಬೇಕು : ಆರ್‌ ಅಶೋಕ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.