ETV Bharat / state

ಸಿಎಂ ಪ್ರಾಸಿಕ್ಯೂಷನ್ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ: ಕುಮಾರಸ್ವಾಮಿ - Union Minister HD Kumaraswamy

author img

By ETV Bharat Karnataka Team

Published : 2 hours ago

ಕೇಂದ್ರ ಸಚಿವ ಹೆಚ್​. ಡಿ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಕುರಿತು ಮಾತನಾಡಿದ್ದಾರೆ. ಸಿಎಂ ಪ್ರಾಸಿಕ್ಯೂಷನ್ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದಿರುವ ಅವರು, ಮೈಸೂರು ಪಾದಯಾತ್ರೆಗೆ ನಾನು ಹೋಗಿದ್ದೆ. ಅಲ್ಲಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡಿಲ್ಲ ಎಂದು ಹೇಳಿದ್ದಾರೆ.

union-minister-h-d-kumaraswamy
ಕೇಂದ್ರ ಸಚಿವ ಹೆಚ್​ ಡಿ ಕುಮಾರಸ್ವಾಮಿ (ETV Bharat)

ಮಂಡ್ಯ : ಸಿಎಂ ಪ್ರಾಸಿಕ್ಯೂಷನ್ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ. ನನ್ನಿಂದ ಯಾವುದೇ ತೀರ್ಮಾನ ಆಗದೇ ಇದ್ರು, ನನ್ನ ಆರೋಪಿ ಮಾಡ್ತಾ ಇದ್ದಾರೆ. ನನ್ನ ಮೇಲಿನ ಆರೋಪ ಎಲ್ಲ ಮುಗಿಲಿ. ಅದೆಲ್ಲ ಮುಗಿದ ಮೇಲೆ ಮಾತನಾಡುತ್ತೇನೆ ಎಂದು ಕೇಂದ್ರ ಸಚಿವ ಹೆಚ್.​ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ನಾಗಮಂಗಲದ ಆದಿಚುಂಚನಗಿರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಪಾದಯಾತ್ರೆಗೆ ನಾನು‌ ಹೋಗಿದ್ದೆ. ಪಾದಯಾತ್ರೆಯಲ್ಲಿ ನಾನು ಜನರನ್ನು ಜಾಗರೂಕರನ್ನಾಗಿ ಮಾಡುವ ಕೆಲಸ ಮಾಡಿದ್ದೇನೆ. ಇವರ ಬಗ್ಗೆ ನಾನೇನು ಮಾತಾಡಿಲ್ಲ. ನಾನು ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡಿಲ್ಲ. ಇರುವ ಪರಿಸ್ಥಿತಿಯನ್ನು ಜನರಿಗೆ ಹೇಳಿದ್ದೇನೆ ಎಂದಿದ್ದಾರೆ.

ದೇಶದ ಕಾನೂನಿನಲ್ಲಿ ರಕ್ಷಣೆ ಕೊಡಲು ಸಂವಿಧಾನದಲ್ಲಿ ಅವಕಾಶ ಇದೆ. ಕಾನೂನು ಬಾಹಿರ ಚಟುವಟಿಕೆ ಮಾಡಿದರೆ, ಏನು ತೀರ್ಪು ಬೇಕು ಅದು ಕೊಡ್ತಾರೆ. ಕಾನೂನಿನ ಒಳಗೆ ಇದ್ದರೆ ಏನು ಬೇಕಾದರೂ ಆಗಬಹುದು. ನಾನು ಸಿದ್ದರಾಮಯ್ಯ ಅವರಿಗೆ ಏನು ಹೇಳಲ್ಲ. ನನ್ನ ಅಭಿಪ್ರಾಯ ನಾನು ಹೇಳಲ್ಲ. ಕುಮಾರಸ್ವಾಮಿ ಏನೋ ಮಾಡಿದ್ದಾನೆ ಎಂದು ಹೇಳಿದ್ದಾರೆ. ನನ್ನ ನೈತಿಕತೆ ಏನು ಎನ್ನುವುದು ಕ್ಲಿಯರ್ ಆಗಬೇಕು ಎಂದು ಹೇಳಿದ್ದಾರೆ.

ಕಾನೂನಿನ ವ್ಯಾಪ್ತಿಯಲ್ಲಿ ಹೋರಾಟ ಮಾಡೋನು ನಾನು : ಗ್ರೇಟ್ ಪಾಲಿಟಿಷಿಯನ್ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ. ಅದೆಲ್ಲ ಕ್ಲಿಯರ್ ಆದ ಬಳಿಕ ಮಾತನಾಡುತ್ತೇನೆ. ಸಿಎಂ ನೈತಿಕ ಹೊಣೆ ಹೊರಲಿಲ್ಲ ಅಂದ್ರೆ ನಾನು‌ ಹೇಳೋಕೆ ಆಗುತ್ತಾ. ನನ್ನ ಇಕ್ಕಟ್ಟಿಗೆ ಸಿಲುಕಿಸಲು ಹೋಗಿದ್ದಾರೆ. ನಾನು ಹೆದರುವವನಲ್ಲ. ಕಾನೂನಿನ ವ್ಯಾಪ್ತಿಯಲ್ಲಿ ಹೋರಾಟ ಮಾಡೋನು ನಾನು. ನಾಲ್ಕೈದು ಮಂದಿ ಮಂತ್ರಿಗಳು ನನ್ನ ಮೇಲೆ ಆರೋಪ ಮಾಡಿದ್ದಾರೆ ಎಂದರು.

ಕುಮಾರಸ್ವಾಮಿ ಕೇಂದ್ರ ಸಚಿವನಾಗಿರೋದನ್ನು‌ ಸಹಿಸುತ್ತಿಲ್ಲ : ನನ್ನ ಮೇಲೆ ಷಡ್ಯಂತ್ರ ನಡೆಯುತ್ತಿರೋ ಬಗ್ಗೆ ಇನ್ನೂ ಅನುಮಾನ ಇದ್ಯಾ. ನಾನು ಇದನ್ನು ಷಡ್ಯಂತ್ರ ಅನ್ನಲ್ಲಾ. ಕುಮಾರಸ್ವಾಮಿ ಕೇಂದ್ರ ಸಚಿವನಾಗಿರೋದನ್ನು‌ ಸಹಿಸುತ್ತಿಲ್ಲ. ಜನರ ಮಧ್ಯ ಕಂದಕ ಸೃಷ್ಟಿ ಮಾಡಲು ಹೀಗೆ ಮಾಡ್ತಾ ಇದ್ದಾರೆ. ಯಾವ ಮಂತ್ರಿನು ಏನೂ ಮಾಡೋಕೆ ಆಗಲ್ಲ. ಕಾಲಭೈರವೇಶ್ವರನ ಸನ್ನಿಧಿಯಲ್ಲಿ ಹೇಳುತ್ತೇನೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ : ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ : ಸಿಎಂ ಸಿದ್ದರಾಮಯ್ಯ - CM Siddaramaiah

ETV Bharat Logo

Copyright © 2024 Ushodaya Enterprises Pvt. Ltd., All Rights Reserved.