ETV Bharat / state

ಪ್ರಿಯಾಂಕ್ ಖರ್ಗೆ ಅವರೇ ಉಡಾಫೆ ಬಿಟ್ಟು ಮೊದಲು ಕಿಯೋನಿಕ್ಸ್ ವೆಂಡರ್ಸ್ ಬಿಲ್ ಪಾವತಿಸಿ : ಹೆಚ್.ಡಿ.ಕುಮಾರಸ್ವಾಮಿ ತರಾಟೆ - PENDING BILLS

ಗುತ್ತಿಗೆದಾರರು ಹಾಗೂ ವೆಂಡರ್ಸ್​ಗಳು ಭಿಕ್ಷುಕರಲ್ಲ, ಸಣ್ಣ ಪ್ರಮಾಣದ ಗುತ್ತಿಗೆದಾರರು ತಮ್ಮ ಮನೆ ಹೆಣ್ಣುಮಕ್ಕಳ ಒಡವೆಗಳನ್ನು ಒತ್ತೆ ಇಟ್ಟು ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದಾರೆ. ಅವರ ಬಾಕಿ ಮೊತ್ತವನ್ನು ಬಿಡುಗಡೆ ಮಾಡಬೇಕು ಎಂದು ಕುಮಾರಸ್ವಾಮಿ ಒತ್ತಾಯ ಮಾಡಿದರು.

PENDING BILLS
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (ETV Bharat)
author img

By ETV Bharat Karnataka Team

Published : Jan 15, 2025, 6:52 PM IST

ಬೆಂಗಳೂರು: ಬಾಕಿ ಬಿಲ್ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೆಂಡರ್ಸ್ ಪತ್ರ ಬರೆದಿರುವ ಪ್ರಕರಣ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತನ್ನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

ಜೆಪಿ ನಗರದ ತಮ್ಮ ನಿವಾಸದ ಬಳಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತುಗಳನ್ನಾಡುವುದು ಬಿಟ್ಟು ಮೊದಲು ಕಿಯೋನಿಕ್ಸ್ ವೆಂಡರ್ಸ್​ಗಳ ಬಾಕಿ ಬಿಲ್​ಗಳನ್ನು ಚುಕ್ತಾ ಮಾಡಲಿ ಎಂದು ಒತ್ತಾಯಿಸಿದರು.

ಈ ಸರ್ಕಾರ ಗುತ್ತಿಗೆದಾರರು ಹಾಗೂ ವೆಂಡರ್ಸ್​ಗಳ ಬಿಲ್ ಪಾವತಿಸಲು ಮೀನಮೇಷ ಎಣಿಸುತ್ತಿದೆ. ಸರ್ಕಾರದ ಆಂತರ್ಯ ಏನೆಂಬುದು ಎಲ್ಲರೂ ಬಲ್ಲ ವಿಷಯ. ತಮಗೆ ಬಿಡುಗಡೆ ಆಗಬೇಕಿರುವ ಬಿಲ್​ಗಳನ್ನು ಪಾವತಿಸಿ ಎಂದು ಗುತ್ತಿಗೆದಾರರು ಧೈರ್ಯದಿಂದ ಕೇಳಬೇಕು. ಅವರೇನೂ ಭಿಕ್ಷುಕರಲ್ಲ, ಸಣ್ಣ ಪ್ರಮಾಣದ ಗುತ್ತಿಗೆದಾರರು ತಮ್ಮ ಮನೆ ಹೆಣ್ಣುಮಕ್ಕಳ ಒಡವೆಗಳನ್ನು ಒತ್ತೆ ಇಟ್ಟು ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದಾರೆ. ಮಾಡಿರುವ ಸಾಲಗಳನ್ನು ತೀರಿಸಲಾಗದೆ ಬೀದಿಗೆ ಬಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಬೂಬು ಹೇಳುವುದು ಬಿಡಬೇಕು: ಎಲ್ಲರ ಮೇಲೆ ಬೇಕಾಬಿಟ್ಟಿ ಮಾತನಾಡುವ ಖರ್ಗೆ ಅವರು ಸಬೂಬು ಹೇಳುವುದು ಬಿಡಬೇಕು. ಈವರೆಗೆ ಗುತ್ತಿಗೆದಾರರ ಎಲ್​ಒಸಿಗಳನ್ನು ಬಿಡುಗಡೆ ಮಾಡುವುದಕ್ಕೆ ಈ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಸಚಿವರು ಹಿಂದಿನ ಸರ್ಕಾರದ ಮೇಲೆ ಗೂಬೆ ಕೂರಿಸುವ ಬದಲು ಗುತ್ತಿಗೆದಾರರ ಬಾಕಿ ಮೊತ್ತವನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯ ಮಾಡಿದರು.

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೆ. ಯಾವತ್ತೂ ಯಾರಿಗೂ ತೊಂದರೆ ಕೊಡುವ ಕೆಲಸ ಮಾಡಿಲ್ಲ. ಗುತ್ತಿಗೆದಾರರಿಗೆ ಒಂದು ಮನವಿ ಮಾಡುತ್ತೇನೆ. ಮೊದಲು ಒಗ್ಗಟ್ಟಾಗಿ, ನಿಮ್ಮ ನಿಮ್ಮಲ್ಲಿಯೇ ಗುಂಪುಗಳನ್ನು ಮಾಡಿಕೊಂಡರೆ ಅದನ್ನು ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತದೆ. ನಿಮ್ಮಲ್ಲಿ ಒಡಕು ಬರಬೇಕೆಂದು ಸರ್ಕಾರ ಬಯಸುತ್ತದೆ. ಇದನ್ನು ನೀವು ಅರ್ಥ ಮಾಡಿಕೊಳ್ಳಿ. ಒಂದು ವರ್ಷ ಯಾರು ಕೆಲಸ ಮಾಡಬೇಡಿ. ಅಕ್ಕಪಕ್ಕದ ರಾಜ್ಯಗಳವರನ್ನು ಕರೆದುಕೊಂಡು ಬಂದು ಕೆಲಸ ಮಾಡಿಸಲಿ. ಯಾರು ಬಂದು ಕೆಲಸ ಮಾಡುತ್ತಾರೋ ನೋಡೋಣ. ಹೇಗೂ ಇವರು ಕೆಲಸವನ್ನು ಕೊಡುತ್ತಿಲ್ಲ. ನೀವು ಹಿಂದಿನ ದುಡ್ಡು ಕೇಳುತ್ತಿದ್ದೀರಿ ಎಂದು ಕುಮಾರಸ್ವಾಮಿ ಅವರು ಕಿವಿಮಾತು ಹೇಳಿದರು.

ಆತ್ಮಹತ್ಯೆಗೆ ಶರಣಾಗಬೇಡಿ ಎಂದು ಮನವಿ: ಯಾರೇ ಆಗಲಿ ಧೃತಿಗೆಡುವ ಅಗತ್ಯವಿಲ್ಲ. ಸರ್ಕಾರ ನಿಮ್ಮ ಹಣ ನಿಮಗೆ ಕೊಡಲೇಬೇಕು. ಆತ್ಮಹತ್ಯೆಗೆ ಶರಣಾಗಬೇಡಿ. ದಯಾಮರಣಕ್ಕೆ ಯಾಕೆ ಅರ್ಜಿ ಹಾಕಿಕೊಳ್ಳುತ್ತೀರಾ? ನೀವು ತಪ್ಪು ಮಾಡಿಲ್ಲ, ತಪ್ಪು ಮಾಡಿರುವುದು ಸರ್ಕಾರ. ಸರ್ಕಾರದ ವಿರುದ್ಧ ಹೋರಾಟ ಮಾಡುವ ಧೈರ್ಯ ಮಾಡಿ. ನೀವು ಭಿಕ್ಷುಕರಲ್ಲ ಎಂದು ಗುತ್ತಿಗೆದಾರರಿಗೆ ಧೈರ್ಯ ಹೇಳಿದರು.

ನಿಮಗೆ ಸಿಕ್ಕಿರುವ ಕಾಮಗಾರಿಯನ್ನು ಪ್ರಾಮಾಣಿಕವಾಗಿ ಮಾಡಿ. ದಯಾಮರಣಕ್ಕೆ ಯಾಕೆ ಅರ್ಜಿ ಹಾಕುತ್ತೀರಿ. ಅಂತಹ ಮನಸ್ಥಿತಿಯಿಂದ ಹೊರಬನ್ನಿ. ಕೆಲಸವನ್ನೇ ಮಾಡದೆ ಬಿಲ್ ತೆಗೆದುಕೊಂಡು ಹಣ ಹೊಡೆದ ಎಷ್ಟೋ ಅಧಿಕಾರಿಗಳು, ದೊಡ್ಡ ದೊಡ್ಡ ಗುತ್ತಿಗೆದಾರರು ಇದ್ದಾರೆ. ಸರಿಯಾದ ಕೆಲಸ ಮಾಡಿದ್ದರೆ ನೀವು ಯಾಕೆ ಹೆದರಬೇಕು ಎಂದರು.

ಇನ್ನೂ ಸಾಕ್ಷ್ಯ ಬೇಕೆ? ಸಿಎಂಗೆ ಟಾಂಗ್: ಶೇ60ರಷ್ಟು ಕಮಿಷನ್ ಬಗ್ಗೆ ಮುಖ್ಯಮಂತ್ರಿಗಳು ದಾಖಲೆ ಕೊಡಿ ಎಂದು ನನ್ನನ್ನು ಹೇಳಿದ್ದರು. ಗುತ್ತಿಗೆದಾರರ ಸಂಘದ ಹಂಗಾಮಿ ಅಧ್ಯಕ್ಷರು ಎಷ್ಟೆಷ್ಟು ಪರ್ಸೆಂಟೇಜ್ ಎಂದು ಅವರೇ ಪಟ್ಟಿ ಮಾಡಿ ಹೇಳಿದ್ದಾರೆ. ಇದಕ್ಕಿಂತ ದಾಖಲೆ ಬೇಕಾ ಮುಖ್ಯಮಂತ್ರಿಗಳಿಗೆ? ಎಂದು ಕುಮಾರಸ್ವಾಮಿ ಅವರು ಸಿಎಂಗೆ ಟಾಂಗ್ ಕೊಟ್ಟರು.

ಖರ್ಗೆ ಮತ್ತು ಕಿಯೋನಿಕ್ಸ್ ಅಧ್ಯಕ್ಷರಿಗೆ ಹೇಳುವುದು ಇಷ್ಟೇ: ತಪ್ಪು ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳಿ. ತಪ್ಪು ಮಾಡದವರಿಗೆ ಶಿಕ್ಷೆ ಯಾಕೆ? ಅವರ ಹಣ ಪಾವತಿ ಮಾಡಿ. ಜನಪ್ರತಿನಿಧಿಗಳು ಸುಳ್ಳು ವ್ಯವಹಾರ ಮಾಡಿದ್ದರೆ ಅವರ ಮೇಲೂ ಕ್ರಮ ತೆಗೆದುಕೊಳ್ಳಿ. ತನಿಖೆ ನಡೆಸಿ ವಾಸ್ತವಾಂಶ ಹೊರಕ್ಕೆ ತರಲು ಎಷ್ಟು ತಿಂಗಳು ಬೇಕು ನಿಮಗೆ? ಈ ರಾಜ್ಯವನ್ನು ಹಾಳು ಮಾಡುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದರು.

ತೆರಿಗೆ ಸಂಗ್ರಹದಲ್ಲಿ ಸರ್ಕಾರ ಹಿಂದೆ ಬಿದ್ದಿದೆ: ನಾವು ನುಡಿದಂತೆ ನಡೆದಿದ್ದೇವೆ ಎಂದು ಹೇಳುತ್ತೀರಿ. ಗ್ಯಾರಂಟಿ ಕೊಟ್ಟಿದ್ದೇವೆ ಎನ್ನುತ್ತೀರಿ. ನಮ್ಮನ್ನು ಬಿಟ್ಟರೆ ಬೇರೆ ಯಾರೂ ಇಲ್ಲ ಎನ್ನುತ್ತೀರಿ. ನಿಮ್ಮ ಯಾವ ಕೆಲಸದಲ್ಲಿಯೂ ದಕ್ಷತೆ ಕಾಣುತ್ತಿಲ್ಲ. ನಿರೀಕ್ಷೆಗೆ ತಕ್ಕಂತೆ ತೆರಿಗೆ ಸಂಗ್ರಹ ಆಗುತ್ತಿಲ್ಲ. ಬಜೆಟ್ ಮಂಡನೆಗೆ ತಯಾರಿ ಮಾಡುತ್ತಿದ್ದೀರಿ. ಆದರೆ, ತೆರಿಗೆ ಸಂಗ್ರಹದಲ್ಲಿ ಹಿಂದೆ ಬಿದ್ದಿದ್ದೀರಿ. ಎಲ್ಲ ಬಾಬ್ತುಗಳಿಂದ ಸುಮಾರು ₹62,424 ಕೋಟಿಯಷ್ಟು ತೆರಿಗೆ ಸಂಗ್ರಹ ಕಡಿಮೆ ಆಗಿದೆ. ಮೇಲಿಂದ ಮೇಲೆ ಸಾಲ ಮಾಡುತ್ತಿದ್ದೀರಿ. ಪೆಟ್ರೋಲ್, ಡೀಸೆಲ್, ಮುದ್ರಾಂಕ, ಮಾರ್ಗದರ್ಶಿ ಶುಲ್ಕ, ವಿದ್ಯುತ್ ದರ, ಬಸ್ ಪ್ರಯಾಣ ದರ, ಮದ್ಯದ ದರ ಸೇರಿದಂತೆ ಎಲ್ಲವನ್ನೂ ಏರಿಕೆ ಮಾಡಿದ್ದೀರಿ. ಇಷ್ಟೆಲ್ಲ ಮಾಡಿದರೂ ನಿಮ್ಮ ತೆರಿಗೆ ಸಂಗ್ರಹದಲ್ಲಿ ಕೊರತೆ ಆಗಿದೆ. ನಿಮ್ಮ ಆಡಳಿತ ಯಾವ ಮಟ್ಟಕ್ಕೆ ಹೋಗಿದೆ ಎನ್ನುವುದಕ್ಕೆ ಇದೇ ಸಾಕ್ಷಿ ಎಂದು ಕುಮಾರಸ್ವಾಮಿ ಅವರು, ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದರು.

ಸಿಎಂ ಒಕ್ಕಲಿಗ, ಲಿಂಗಾಯತರನ್ನು ಡಿ-ಗ್ರೇಡ್ ಮಾಡುತ್ತಿದ್ದಾರೆ: ಜಾತಿ ಗಣತಿ ವರದಿ ಇಟ್ಟುಕೊಂಡು ಒಕ್ಕಲಿಗ, ಲಿಂಗಾಯತರನ್ನು ಡಿ-ಗ್ರೇಡ್ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಟಿದ್ದಾರೆ ಎಂದು ಕುಮಾರಸ್ವಾಮಿ ಅವರು ಇದೇ ವೇಳೆ ಆರೋಪಿಸಿದರು.

ಜಾತಿ ಜನಗಣತಿ ವರದಿಯನ್ನು ಸಂಪುಟದಲ್ಲಿ ಚರ್ಚೆ ಮಾಡುತ್ತಾರಂತೆ. ಇದು ಕೇವಲ ಎರಡು ಸಮುದಾಯಗಳ ಪ್ರಶ್ನೆ ಅಲ್ಲ. ಇಷ್ಟು ದಿನ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ಅವರು ಶೋಷಿತ ಸಮುದಾಯಗಳಿಗೆ ಏನು ಮಾಡಿದ್ದಾರೆ ಏನುವುದನ್ನು ಹೇಳಬೇಕು ಎಂದು ಆಗ್ರಹಿಸಿದರು.

ಯಾವ ಯಾವ ಜಾತಿಯಲ್ಲಿ ಎಷ್ಟು ಜನ ಇದ್ದಾರೆ ಎನುವುದಕ್ಕಿಂತ ಎಷ್ಟು ಜನ ಬಡವರು ಇದ್ದಾರೆ ಎಂಬುದನ್ನು ಗಮನಿಸಬೇಕು. ಇಷ್ಟು ದಿನ ಸರ್ಕಾರದ ಸೌಲಭ್ಯಗಳು ಯಾರಿಗೆ ಸಿಕ್ಕಿವೆ, ಯಾರಿಗೆ ಸಿಕ್ಕಿಲ್ಲ ಎಂಬುದರ ಮೇಲೆ ಸರ್ಕಾರ ಬೆಳಕು ಚೆಲ್ಲಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ನಾವಿದ್ದರೆ ತಾನೇ ಪಕ್ಷ, ಜನಸಮುದಾಯ ಇದ್ದರೆ ತಾನೇ ಪಾರ್ಟಿ ಇರೋದು: ಸಚಿವ ಪರಮೇಶ್ವರ್ - HOME MIINSTER PARAMESHWAR

ETV Bharat Logo

Copyright © 2025 Ushodaya Enterprises Pvt. Ltd., All Rights Reserved.