ETV Bharat / state

ಹೆಚ್​ಎಂಟಿ ಕಂಪನಿಯ ಉನ್ನತ ಅಧಿಕಾರಿಗಳ ಜತೆ ಕೇಂದ್ರ ಸಚಿವರ ಸಭೆ : ಕಂಪನಿ ಪುನಶ್ಚೇತನಕ್ಕೆ ಕ್ರಮ, ವರದಿ ಕೇಳಿದ ಹೆಚ್​ಡಿಕೆ - Action for revival of HMT - ACTION FOR REVIVAL OF HMT

ಹೆಚ್​ಎಂಟಿ ಕಂಪನಿಯ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಕಂಪನಿ ಪುನಶ್ಚೇತನಕ್ಕೆ ಕ್ರಮಕ್ಕೆ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಅವರು ಕಂಪನಿ ಕಾರ್ಯ ಚಟುವಟಿಕೆ ಬಗ್ಗೆ ಪ್ರಾತ್ಯಕ್ಷಿಕೆ ವೀಕ್ಷಿಸಿ ಸಮಗ್ರ ಮಾಹಿತಿ ಪಡೆದುಕೊಂಡರು.

UNION MINISTER HD KUMARASWAMY  HDK MEETING WITH TOP OFFICIALS  HMT COMPANY  BENGALURU
ಕಂಪನಿ ಪುನಶ್ಚೇತನಕ್ಕೆ ಕ್ರಮ, ವರದಿ ಕೇಳಿದ ಹೆಚ್​ಡಿಕೆ (ETV Bharat)
author img

By ETV Bharat Karnataka Team

Published : Jun 22, 2024, 8:17 PM IST

ಬೆಂಗಳೂರು: ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿ ಇಂದು ಸಂಜೆ ಹೆಚ್​ಎಂಟಿ (ಹಿಂದೂಸ್ತಾನ್ ಮಷಿನ್ ಅಂಡ್ ಟೂಲ್ಸ್) ಕಂಪನಿಯ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಕಂಪನಿಯ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕೊಹ್ಲಿ ಸೇರಿ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಸಚಿವರು, ಕಂಪನಿ ಕಾರ್ಯ ಚಟುವಟಿಕೆ ಬಗ್ಗೆ ಪ್ರಾತ್ಯಕ್ಷಿಕೆ ವೀಕ್ಷಿಸಿ ಸಮಗ್ರ ಮಾಹಿತಿ ಪಡೆದುಕೊಂಡರು.

Union Minister HD Kumaraswamy  HDK meeting with top officials  HMT Company  Bengaluru
ಹೆಚ್​ಎಂಟಿ ಕಂಪನಿಯ ಉನ್ನತ ಅಧಿಕಾರಿಗಳ ಜತೆ ಕೇಂದ್ರ ಸಚಿವ ಸಭೆ (ETV Bharat)

ವಹಿವಾಟು, ನಿವ್ವಳ ಲಾಭ ಇತ್ಯಾದಿಗಳ ಬಗ್ಗೆ ಮಾಹಿತಿ ಪಡೆದುಕೊಂಡ ಸಚಿವ ಕುಮಾರಸ್ವಾಮಿ ಅವರು, ಕಂಪನಿಯ ಆರ್ಥಿಕತೆ, ಉತ್ಪಾದನೆ, ಇನ್ನಿತರೆ ಸ್ಥಿತಿಗತಿಗಳ ಬಗ್ಗೆ ಸಚಿವರು ಅಧಿಕಾರಿಗಳ ಜತೆ ಚರ್ಚಿಸಿದರು. ಒಂದು ಕಾಲದಲ್ಲಿ ವೈಭವಯುತವಾಗಿ ಮೆರೆದಿದ್ದ ಕಂಪನಿ ಇವತ್ತು ದುಸ್ಥಿತಿಗೆ ಬಂದಿದೆ. ಕಂಪನಿಯನ್ನು ಮತ್ತಷ್ಟು ಸದೃಢ ಮಾಡಿ. ಅದಕ್ಕೆ ಅಗತ್ಯವಾದ ಉಪ ಕ್ರಮ ಕೈಗೊಳ್ಳಿ. ಅದಕ್ಕೆ ಅಗತ್ಯವಾದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಎಂದು ರಾಜೇಶ್ ಕೊಹ್ಲಿ ಅವರಿಗೆ ಸಚಿವರು ಸೂಚಿಸಿದರು.

ಮೋದಿ ಅವರ ಆತ್ಮನಿರ್ಭರ ಪರಿಕಲ್ಪನೆಯಂತೆ ಹೆಚ್​ಎಂಟಿ ಪುನಶ್ಚೇತನ : ಪ್ರಧಾನಿ ನರೇಂದ್ರ ಮೋದಿ ಅವರು ಕೈಗಾರಿಕೆ ಅಭಿವೃದ್ಧಿ ಬಗ್ಗೆ ದೊಡ್ಡ ಕನಸುಗಳನ್ನು ಕಟ್ಟಿಕೊಂಡಿದ್ದಾರೆ. ಅವರ ಆತ್ಮನಿರ್ಭರ ಪರಿಕಲ್ಪನೆಯ ಮೂಲಕ ಹೆಚ್​ಎಂಟಿ ಕಂಪನಿಯನ್ನು ಪುನರುಜ್ಜೀವನಗೊಳಿಸಬಹುದು. ಪ್ರಧಾನಿಯವರ ಆಲೋಚನೆಯಂತೆ ಚಿಂತಿಸಿ ಕಂಪನಿಯ ಚೇತರಿಕೆಗೆ ಮುಂದಾಗಿ. ಅದಕ್ಕೆ ಅಗತ್ಯವಾದ ನೆರವನ್ನು ಕೇಂದ್ರ ಸರ್ಕಾರ ಒದಗಿಸುತ್ತದೆ ಎಂದು ಹೆಚ್​ಡಿಕೆ ಹೇಳಿದರು.

ನೀವು ರಕ್ಷಣಾ ಇಲಾಖೆಗೆ, ಬಾಹ್ಯಾಕಾಶ ಯೋಜನೆಗಳಿಗೆ ಪರಿಕರಗಳನ್ನು ತಯಾರಿಸಿ ಕೊಡುತ್ತೀರಿ. ದೇಶದ ಉದ್ದಗಲಕ್ಕೂ ಕಂಪನಿಯ ಉತ್ಪಾದನಾ ಘಟಕಗಳು ಇವೆ. ಹೀಗಾಗಿ ಕಂಪನಿಯ ಕ್ಷಮತೆಯನ್ನು ಹೆಚ್ಚಿಸಬೇಕು ಎಂದು ಸಲಹೆ ನೀಡಿದರು. ಕಂಪನಿಯು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಇದೇ ವೇಳೆ ಕಂಪನಿಯ ಅಧ್ಯಕ್ಷ ರಾಜೇಶ್ ಕೊಹ್ಲಿ, ನಷ್ಟದ ಜತೆಗೆ ಆರ್ಥಿಕ ಬಿಕ್ಕಟ್ಟು, ನ್ಯಾಯಾಲಯಗಳಲ್ಲಿ ಮೊಕದ್ದಮೆ ಇತ್ಯಾದಿ ಸಂಕಷ್ಟಗಳನ್ನು ಎದುರಿಸುತ್ತಿದೆ. ಇದಕ್ಕೆ ಕೇಂದ್ರದ ನೆರವು ಬೇಕಿದೆ ಎಂದು ಸಚಿವರಿಗೆ ಮನವಿ ಮಾಡಿದ್ದರು.

ಇದಕ್ಕೆ ಸ್ಪಂದಿಸಿದ ಕುಮಾರಸ್ವಾಮಿ ಅವರು, ಈ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು. ಕೋಲಾರ ಸಂಸದ ಮಲ್ಲೇಶ್ ಬಾಬು, ಕಂಪನಿಯ ನಿರ್ದೇಶಕಿ ಸಮೀನಾ ಕೊಹ್ಲಿ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ಓದಿ: ITI, Diploma ಪೂರ್ಣಗೊಳಿಸಿದವರಿಗೆ ವಿದೇಶದಲ್ಲಿ ಉದ್ಯೋಗ: ರಾಜ್ಯ ಕೌಶಾಲ್ಯಾಭಿವೃದ್ಧಿ ನಿಗಮದಿಂದ ಹೊಸ ಮುನ್ನುಡಿ - Overseas job opportunity

ETV Bharat Logo

Copyright © 2024 Ushodaya Enterprises Pvt. Ltd., All Rights Reserved.