ETV Bharat / state

ಸಿಎಂ ಸಿದ್ದರಾಮಯ್ಯ ಶಿಶುಪಾಲನ ಹಾಗೆ ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದಾರೆ: ಹೆಚ್.​ಡಿ. ಕುಮಾರಸ್ವಾಮಿ - H D Kumaraswamy - H D KUMARASWAMY

ಸಿಎಂ ಸಿದ್ದರಾಮಯ್ಯ, ತಮ್ಮ ಪತ್ನಿ ಮುಡಾಕ್ಕೆ ಬರೆದಿದ್ದ ಪತ್ರದಲ್ಲಿ ವೈಟ್ನರ್‌ ಹಚ್ಚಿದ್ದರ ಹಿಂದೆ ಏನಿದೆ ಎನ್ನುವ ಬಗ್ಗೆ ವಿಡಿಯೋ ಹಂಚಿಕೊಂಡು ಸ್ಪಷ್ಟನೆ ನೀಡಿದ್ದರು. ಇದಕ್ಕೆ ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿ, ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ ಹೇಳಿದ್ದಾರೆ.

ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ (ETV Bharat)
author img

By ETV Bharat Karnataka Team

Published : Aug 26, 2024, 6:39 PM IST

ಬೆಂಗಳೂರು: ಮಾನ್ಯ ಸಿದ್ದರಾಮಯ್ಯ ನವರೇ ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು ಈ ರಾಜ್ಯದ ಘನತೆವೆತ್ತ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ಇದು ಮೂಲ ದಾಖಲೆ, ಮುಡಾದಲ್ಲಿದೆ. ನಿಮ್ಮ ಬಳಿಗೆ ಹೇಗೆ ಬಂತು?. ನಿಮಗೆ ಈ ಮೂಲ‌ ದಾಖಲೆ ತಂದು ಕೊಟ್ಟ ಮಹಾಶಯರು ಯಾರು?. ಇಷ್ಟಕ್ಕೂ ಈ ಮೂಲ ದಾಖಲೆ ಮುಡಾದಲ್ಲಿದೆಯಾ? ಅಥವಾ ನಿಮ್ಮ ಮನೆಯಲ್ಲಿದೆಯಾ?. ಈ ಮೂಲ ದಾಖಲೆಗೆ ಟಾರ್ಚ್ ಹಾಕಿದವರು ಯಾರು? ನೀವಾ? ಅಥವಾ ಇನ್ನಾರಾದರೂ ಇದ್ದಾರಾ? ಎಂದು ಪ್ರಶ್ನಿಸಿದ್ದಾರೆ.

ನನ್ನ ಪ್ರಶ್ನೆ, ಈ ದಾಖಲೆಯನ್ನೇಕೆ ನೀವು ಕೋರ್ಟ್‌ಗೆ ಕೊಟ್ಟಿಲ್ಲ?. ನ್ಯಾಯಾಲಯವನ್ನೂ ದಾರಿ ತಪ್ಪಿಸುತ್ತಿದ್ದೀರಿ. ಜನರನ್ನು ದಿಕ್ಕು ತಪ್ಪಿಸಿದ ಹಾಗೇ ನ್ಯಾಯಾಲಯಕ್ಕೂ ಸುಳ್ಳು ಮಾಹಿತಿ ಕೊಟ್ಟು ಅಲ್ಲಿಯೂ ಟಾರ್ಚ್ ಬಿಟ್ಟು ತೋರಿಸುತ್ತೀರಾ, ಹೇಗೆ?. ಶಿಶುಪಾಲನ ಹಾಗೆ, ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದೀರಿ. ಮಾಡಿದ ತಪ್ಪು ಮುಚ್ಚಿಕೊಳ್ಳಲು ಮತ್ತೆ ಮತ್ತೆ ತಪ್ಪು ಮಾಡುತ್ತಿದ್ದೀರಿ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪತ್ನಿಯ ಅರ್ಜಿಯಲ್ಲಿ ವೈಟ್ನರ್ ಹಿಂದಿರುವ ಅಕ್ಷರಗಳೇನಿದೆ ನೋಡಿ - ಸಿಎಂ: ಇದಕ್ಕೂ ಮುನ್ನ, ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ವಿಡಿಯೋ ಟ್ಯಾಗ್ ಮಾಡಿ, ''ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್‌ ಹಚ್ಚಿರುವುದನ್ನೇ ಮಹಾನ್‌ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ – ಜೆಡಿಎಸ್‌ ನಾಯಕರೇ, ವೈಟ್ನರ್‌ ಹಿಂದಿರುವ ಅಕ್ಷರಗಳೇನು ಎಂಬುದು ಈ ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು.

ವೈಟ್ನರ್‌ ಹಚ್ಚಿ ಕಪ್ಪು ಚುಕ್ಕೆ ಅಳಿಸಿಕೊಳ್ಳಲು ಸಾಧ್ಯವಿಲ್ಲ, ಸಿಎಂ ಪತ್ನಿ ನಿವೇಶನ ಕೇಳಿದ್ದು ವಿಜಯನಗರದಲ್ಲಿ, ಮುಡಾ ವಿಚಾರ ಚರ್ಚೆಗೆ ಬಂದ ನಂತರ ಸಿದ್ದರಾಮಯ್ಯ ಅವರ ಪರವಾಗಿ ಯಾರೋ ಹೋಗಿ ವೈಟ್ನರ್‌ ಹಚ್ಚಿ ಬಂದಿದ್ದಾರೆಂದು ಬೊಬ್ಬೆ ಹಾಕುತ್ತಿದ್ದ ಸ್ವಯಂ ಘೋಷಿತ ಕಾನೂನು ಪಂಡಿತರು ಈಗೇನು ಹೇಳುತ್ತಾರೆ? ಆತುರದಲ್ಲಿ ಮೂಗು ಕತ್ತರಿಸಿಕೊಂಡು, ರಾತ್ರಿಯೆಲ್ಲ ಕನ್ನಡಿ ಮುಂದೆ ನಿಂತು ಕಣ್ಣೀರು ಹಾಕಿದ್ದರಂತೆ, ಹಾಗಾಯಿತು ಕೆಲವು ಅತಿ ಬುದ್ದಿವಂತರ ಕತೆ'' ಎಂದು ಟೀಕಿಸಿದ್ದರು.

''ಕಪೋಲ ಕಲ್ಪಿತ ಕಟ್ಟುಕತೆಗಳ ಮೂಲಕ ನನ್ನನ್ನು ಹಾಗೂ ನನ್ನ ಕುಟುಂಬವನ್ನು ವಿನಾಃಕಾರಣ ಅಪರಾಧಿಗಳಂತೆ ಬಿಂಬಿಸಿ, ಬಾಯಿಗೆ ಬಂದಂತೆ ಮಾತನಾಡಿರುವ ಬಿಜೆಪಿ – ಜೆಡಿಎಸ್‌ ಪಕ್ಷಗಳ ವಿವೇಕ ಶೂನ್ಯ ನಾಯಕರು ಇಂದು ಜನರೆದುರು ಬೆತ್ತಲಾಗಿದ್ದಾರೆ. ಸತ್ಯ ಹಾಗೆಯೇ, ಅರಿವಿಗೆ ಬರುವುದು ಸ್ವಲ್ಪ ತಡವಾಗಬಹುದು. ಆದರೆ ಅಂತಿಮ ಗೆಲುವು ಸತ್ಯದ್ದೇ ಆಗಿರುತ್ತದೆ'' ಎಂದು ಕಿಡಿಕಾರಿದ್ದರು.

ಇದನ್ನೂ ಓದಿ: ಪರಪ್ಪನ ಅಗ್ರಹಾರದಲ್ಲಿನ ಅವ್ಯವಸ್ಥೆ ಹೊಸದಲ್ಲ, ಹಿಂದಿನಿಂದಲೂ ಇದೆ: ಹೆಚ್.ಡಿ. ಕುಮಾರಸ್ವಾಮಿ - H D Kumaraswamy

ETV Bharat Logo

Copyright © 2024 Ushodaya Enterprises Pvt. Ltd., All Rights Reserved.