ETV Bharat / state

ಈಗಿರುವುದು ನಕಲಿ ಗಾಂಧಿಗಳ ಕಾಂಗ್ರೆಸ್​: ಕುಮಾರಸ್ವಾಮಿ ಲೇವಡಿ - KUMARASWAMY SLAMS CONGRESS

ಜನರ ತೆರಿಗೆ ದುಡ್ಡಿನಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್​ ನಾಯಕರ ವಿಜೃಂಭಣೆ ನಡೆಯುತ್ತಿದೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

HD KUMARASWAMY SLAMS STATE GOVT
ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ (ETV Bharat)
author img

By ETV Bharat Karnataka Team

Published : Dec 26, 2024, 7:51 PM IST

Updated : Dec 26, 2024, 8:21 PM IST

ಮಂಡ್ಯ: ಬೆಳಗಾವಿಯಲ್ಲಿ ಜನರ ತೆರಿಗೆ ದುಡ್ಡಿನಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್‌. ಡಿ. ಕುಮಾರಸ್ವಾಮಿ ಹರಿಹಾಯ್ದರು.

ನಗರದಲ್ಲಿಂದುನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಕಾಂಗ್ರೆಸ್‌ನಿಂದ ಗಾಂಧಿ ಶತಮಾನೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಮುಂದಿನ ವರ್ಷ ಗಾಂಧಿ ಹೆಸರಲ್ಲಿ ಕಾರ್ಯಕ್ರಮ ಮಾಡಲು ಸರ್ಕಾರ ಹೊರಟಿದೆ. ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಗಾಂಧೀಜಿ ಶತಮಾನೋತ್ಸವ ಕಾರ್ಯಕ್ರಮ ಮಾಡುತ್ತಿದೆ. ಆದರೆ, ಅಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ಕಟೌಟ್‌ಗಳಲ್ಲಿ ಗಾಂಧೀಜಿ ಫೋಟೋ ಬದಲಿಗೆ ನಕಲಿ ಗಾಂಧಿಗಳ ಫೋಟೋಗಳಿರುವ ಕಟೌಟ್‌ಗಳನ್ನು ಆಕಾಶದೆತ್ತರಕ್ಕೆ ಹಾಕಲಾಗಿದೆ ಎಂದು ಅವರು ಕಿಡಿಕಾರಿದರು.

ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ (ETV Bharat)

ಈಗಿರುವುದು ಅಸಲಿ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್. ಬೆಳಗಾವಿಯಲ್ಲಿ ಕಾರ್ಯಕ್ರಮ ಮಾಡುತ್ತಿರುವುದು ಅದೇ ನಕಲಿ ಕಾಂಗ್ರೆಸ್. ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ ಅನ್ನು ವಿಸರ್ಜಿಸುವಂತೆ ಸ್ವತಃ ಗಾಂಧೀಜಿ ಅವರು ಆಗಲೇ ಹೇಳಿದ್ದರು. ಅವರ ಕಾಂಗ್ರೆಸ್ ಈಗಿಲ್ಲ ಎಂದು ಟೀಕಿಸಿದರು.

ಗಾಂಧೀಜಿ ಅವರ ಹೆಸರಲ್ಲಿ ಕಾರ್ಯಕ್ರಮ ಮಾಡಲು ನನ್ನ ತಕರಾರಿಲ್ಲ. ಸಂಘಟಿತ ಹೋರಾಟದ ಮೂಲಕ ಹೋರಾಟ ನಡೆಸಿ ಸ್ವಾತಂತ್ರ್ಯ ತಂದುಕೊಟ್ಟರು ಅವರು. ಗಾಂಧೀಜಿ ಅವರ ರಾಮರಾಜ್ಯದ ಪರಿಕಲ್ಪನೆ ಇವತ್ತು ರಾಜ್ಯದಲ್ಲಿ ಸಾಕಾರ ಆಗಿದೆಯಾ? ಅವರ ಗ್ರಾಮ ಸ್ವರಾಜ್ಯದ ಕನಸು ಈಡೇರಿದೆಯಾ? 15ನೇ ಹಣಕಾಸು ಆಯೋಗದ ಅನುದಾನದ ಮೂಲಕ ಗ್ರಾಮಗಳ ಅಭಿವೃದ್ಧಿಗಾಗಿ ಪಂಚಾಯಿತಿಗಳಿಗೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ₹448.29 ಕೋಟಿ ಬಳಕೆ ಮಾಡಿಲ್ಲ. ಈ ಹಣ ಬಿಡುಗಡೆಯಾಗಿ ಹಲವಾರು ತಿಂಗಳೇ ಕಳೆದಿದ್ದರೂ ಇನ್ನೂ ಪಂಚಾಯತಿಗಳಿಗೆ ಆ ಹಣ ಹೋಗಿಲ್ಲ ಎಂದು ಕೇಂದ್ರ ಸಚಿವರು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಪರಿಸ್ಥಿತಿ ದಯನೀಯವಾಗಿದೆ. ಗುಣಮಟ್ಟದ ಚಿಕಿತ್ಸೆ ದೊರೆಯದೆ ಬಾಣಂತಿಯರು, ಮಕ್ಕಳ ಸರಣಿ ಸಾವುಗಳು ಸಂಭವಿಸುತ್ತಿವೆ. ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳಿಲ್ಲ. 2 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಬಿದ್ದಿವೆ. ಹೀಗಿದ್ದ ಮೇಲೆ ಆಡಳಿತ ಹೇಗೆ ಉತ್ತಮವಾಗಿರಲು ಸಾಧ್ಯ ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.

ಸರ್ಕಾರ ಪ್ರತಿದಿನವೂ ಗ್ಯಾರಂಟಿ ಗ್ಯಾರಂಟಿ ಎನ್ನುತ್ತಿದೆ. ಜನರಿಗೆ ಇನ್ನೂ ಎರಡು ಸಾವಿರ ರೂಪಾಯಿ ಕೊಡಲಿ, ನಮ್ಮ ಅಭ್ಯಂತವಿಲ್ಲ. ಆದರೆ, ಮಿತಿ ಮೀರಿದ ತೆರಿಗೆ ಹೇರಿಕೆ ಮಾಡುತ್ತಿದ್ದಾರೆ. ಎರಡು ಲಕ್ಷ ಕೋಟಿ ರೂಪಾಯಿ ಸಾಲ ಮಾಡಿ ಎರಡು ಸಾವಿರ ರೂಪಾಯಿ ಕೊಡಲಿಕ್ಕೆ ಇವರೇ ಬೇಕಾ? ಬೇಕಾಬಿಟ್ಟಿಯಾಗಿ ಆ ಸಾಲ ತೀರಿಸುವವರು ಯಾರು? ಜನ ಸಾಮಾನ್ಯರೇ ಆ ಸಾಲ ತೀರಿಸಬೇಕಲ್ವಾ? ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸೇನಾ ವಾಹನ ಪ್ರಪಾತಕ್ಕೆ ಉರುಳಿ ರಾಜ್ಯದ ಮೂವರು ಯೋಧರು ಹುತಾತ್ಮರಾಗಿವುದಕ್ಕೆ ಕಂಬಿನಿ ಮಿಡಿದ ಕೇಂದ್ರ ಸಚಿವರು, ಅಪಘಾತದಲ್ಲಿ ಯೋಧರು ಹುತಾತ್ಮರಾದ ವಿಚಾರ ತಿಳಿದು ನನಗೆ ಬಹಳ ದುಃಖವಾಯಿತು. ಮೃತ ಯೋಧರಲ್ಲಿ ಮೂವರು ಕನ್ನಡಿಗರು ಇದ್ದಾರೆ. ಅವರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಆ ಅನಾಹುತ ಕರುಣಾಜನಕ ಘಟನೆ. ಕೇಂದ್ರ ಸರ್ಕಾರ ಆ ಕುಟುಂಬಗಳ ನೆರವಿಗೆ ನಿಲ್ಲಲಿದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ: ಬೆಳಗಾವಿ ಕಾಂಗ್ರೆಸ್‌ ಸಮಾವೇಶಕ್ಕೆ ವಿರೋಧ: ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ನಾಳೆ ಬಿಜೆಪಿ ಪ್ರತಿಭಟನೆ - BELAGAVI CONGRESS SAMAVESH

Last Updated : Dec 26, 2024, 8:21 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.