ETV Bharat / state

ಲೋಕಸಭೆ ಚುನಾವಣೆ: ಕರ್ನಾಟಕದಿಂದ ಜೈಶಂಕರ್, ನಿರ್ಮಲಾ ಸೀತಾರಾಮನ್ ಕಣಕ್ಕೆ? - ಲೋಕಸಭೆ ಚುನಾವಣೆ

ಕೇಂದ್ರದ ವಿದೇಶಾಂಗ ಸಚಿವ ಜೈಶಂಕರ್ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆ ಚುನಾವಣೆಗೆ ಕರ್ನಾಟಕದಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ.

lok sabha elections
ಲೋಕಸಭೆ ಚುನಾವಣೆ
author img

By ETV Bharat Karnataka Team

Published : Feb 25, 2024, 7:17 AM IST

ಬೆಂಗಳೂರು: ಕೇಂದ್ರದ ಪ್ರಭಾವಿ ಸಚಿವರಾಗಿರುವ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದ ಬಿಜೆಪಿ ಭದ್ರಕೋಟೆಯ ಕ್ಷೇತ್ರಗಳಿಂದ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವ ಸಾಧ್ಯತೆ ದಟ್ಟವಾಗಿದೆ.

ರಾಜ್ಯಸಭೆ ಸದಸ್ಯರಾಗಿ ಕೇಂದ್ರ ಸಚಿವರಾಗಿರುವ ಈ ಇಬ್ಬರೂ ಸಚಿವರನ್ನು ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಸಿ, ನೇರ ಚುನಾವಣೆ ಮೂಲಕವೇ ಲೋಕಸಭೆಗೆ ಆಯ್ಕೆ ಮಾಡುವ ಬಗ್ಗೆ ಬಿಜೆಪಿ ಹೈಕಮಾಂಡ್ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ. ಈ ಸಂಬಂಧ ಸಮೀಕ್ಷೆ ನಡೆಸಿ ಆಂತರಿಕ ವರದಿ ಪಡೆಯಲಾಗುತ್ತಿದೆ ಎಂದು ತಿಳಿದುಬಂದಿದೆ.

ರಾಜ್ಯದ 28ಕ್ಕೆ 28 ಕ್ಷೇತ್ರಗಳನ್ನೂ ಗೆಲ್ಲಲೇಬೇಕೆಂಬ ಗುರಿ ಇಟ್ಟುಕೊಂಡಿರುವ ಬಿಜೆಪಿ, ಉತ್ತಮ ರಾಜತಾಂತ್ರಿಕರೂ ಆಗಿರುವ ಜೈಶಂಕರ್ ಮತ್ತು ನಿರ್ಮಲಾ ಸೀತಾರಾಮನ್ ಅವರಿಗೆ ರಾಜ್ಯದಿಂದ ಟಿಕೆಟ್ ನೀಡಿ ಲೋಕಸಭೆ ಚುನಾವಣೆಗೆ ರಂಗು ನೀಡಲು ಸಿದ್ಧತೆ ನಡೆಸುತ್ತಿದೆ ಎನ್ನಲಾಗಿದೆ.

ಕರಾವಳಿ ಕ್ಷೇತ್ರದಿಂದ ಸ್ಪರ್ಧೆ?: ನಿರ್ಮಲಾ ಸೀತಾರಾಮನ್ ಅವರನ್ನು ಪಕ್ಷದ ಭದ್ರಕೋಟೆಯಾಗಿರುವ ಕರಾವಳಿಯ ಕ್ಷೇತ್ರಗಳಿಂದ ಕಣಕ್ಕಿಳಿಸಿದರೆ ಹೇಗೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ ಅಥವಾ ಉತ್ತರ ಕನ್ನಡ ಲೋಕಸಭೆ ಕ್ಷೇತ್ರಗಳಿಂದ ಜೈಶಂಕರ್ ಮತ್ತು ನಿರ್ಮಲಾ ಸೀತಾರಾಮನ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ನಿರ್ಮಲಾ ಸೀತಾರಾಮನ್ ಈಗಾಗಲೇ ಕರಾವಳಿ ಭಾಗದ ಉಡುಪಿ ಜೊತೆ ನಿಕಟ ಸಂಪರ್ಕ ಹೊಂದಿದವರಾಗಿದ್ದಾರೆ. ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗುವ ಮೂಲಕ ಬೆಂಗಳೂರಿನೊಂದಿಗೂ ನಂಟು ಹೊಂದಿದ್ದಾರೆ. ಜೈಶಂಕರ್ ಅವರು ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ಅಭ್ಯಸಿಸುವ ಮೂಲಕ ಬೆಂಗಳೂರಿನ ಜೊತೆ ಸಂಪರ್ಕ ಹೊಂದಿದ್ದಾರೆ. ಬೆಂಗಳೂರಿನ ಮೂರು ಲೋಕಸಭೆ ಕ್ಷೇತ್ರಗಳಲ್ಲಿ ಯಾವುದಾದರೂ ಒಂದು ಕಡೆಯಿಂದ ಅವರನ್ನು ಚುನಾವಣೆಗೆ ನಿಲ್ಲಿಸುವ ಕುರಿತು ಪಕ್ಷದ ವೇದಿಕೆಯಲ್ಲಿ ಸಮಾಲೋಚನೆ ನಡೆಯುತ್ತಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ 400ರ ಗುರಿ ಸಾಧಿಸಲು 'ಗ್ಯಾನ್' ನತ್ತ ಬಿಜೆಪಿ ಚಿತ್ತ: ಏನಿದು ’ಗ್ಯಾನ್​ ಮೆಗಾ ಪ್ಲಾನ್​’?

ರಾಜ್ಯಸಭೆ ಸದಸ್ಯರಾಗಿ ಕೇಂದ್ರ ಸಚಿವರಾಗಿರುವವರನ್ನು ಲೋಕಸಭೆಗೆ ಆಯ್ಕೆ ಮಾಡುವ ಉದ್ದೇಶ ಬಿಜೆಪಿ ಹೈಕಮಾಂಡ್‌ಗಿದೆ. ಈ ಕಾರಣದಿಂದಲೇ ಕೇಂದ್ರ ಸಚಿವರಾದ ಉದ್ಯಮಿ ಆರ್.ಸಿ.ಚಂದ್ರಶೇಖರ್ ಅವರನ್ನು ರಾಜ್ಯಸಭೆ ಸದಸ್ಯರನ್ನಾಗಿ ಮರು ಆಯ್ಕೆ ಮಾಡದೇ, ಲೋಕಸಭೆಗೆ ಸ್ಪರ್ಧಿಸಲು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. ಆರ್.ಸಿ.ಚಂದ್ರಶೇಖರ್ ಅವರು ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಕೇರಳದ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆಗಿಳಿಯುವ ಬಗ್ಗೆ ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಧಾರವಾಡ ಲೋಕಸಭೆ ಕ್ಷೇತ್ರ: ಕೈ ಟಿಕೆಟ್​ಗಾಗಿ ಪೈಪೋಟಿ, ಬೆಳೆಯುತ್ತಿದೆ ಆಕಾಂಕ್ಷಿಗಳ ಪಟ್ಟಿ

ಜೈಶಂಕರ್ ಮತ್ತು ನಿರ್ಮಲಾ ಸೀತಾರಾಮನ್ ಅವರು ರಾಜ್ಯದಿಂದಲೇ ಸ್ಪರ್ಧಿಸುವುದು ಅಂತಿಮವಾದರೆ ಬಿಜೆಪಿ ಭದ್ರಕೋಟೆಗಳಿಂದ ಗೆದ್ದು ಹಾಲಿ ಸಂಸದರಾಗಿರುವ ತೇಜಸ್ವಿ ಸೂರ್ಯ, ಪಿ.ಸಿ.ಮೋಹನ್, ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಮಾಜಿ ಸಿಎಂ ಸದಾನಂದ ಗೌಡ ಅವರ ಸ್ಪರ್ಧೆಗೆ ಕುತ್ತು ಬರುವ ಸಂಭವವಿದೆ ಎನ್ನಲಾಗಿದೆ.

ಇದನ್ನೂ ಓದಿ: ಮಂಗಳೂರು ಲೋಕಸಭಾ ಕ್ಷೇತ್ರ: ಸತತ 8 ಬಾರಿ ಸೋಲು, ಈ ಬಾರಿ ಗೆಲುವು ತರುವ ಕಾಂಗ್ರೆಸ್​ ಅಭ್ಯರ್ಥಿ ಯಾರು?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.