ETV Bharat / state

ಬೆಳಗಾವಿಯಲ್ಲಿ‌ 36 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಕೇಂದ್ರ ಸಚಿವರಿಂದ ಚಾಲನೆ: ಗಡ್ಕರಿ ಹಾಡಿ ಹೊಗಳಿದ ಸತೀಶ್ ಜಾರಕಿಹೊಳಿ - ಗ್ರೀನ್ ಕಾರಿಡಾರ್ ಹೆದ್ದಾರಿ

ಬೆಳಗಾವಿಯಲ್ಲಿ‌ 36 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ‌ ಅವರು ಇಂದು ಚಾಲನೆ ನೀಡಿದರು.

ಬೆಳಗಾವಿಯಲ್ಲಿ‌ 36 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ‌ ಚಾಲನೆ

author img

By ETV Bharat Karnataka Team

Published : Feb 22, 2024, 8:27 PM IST

ಬೆಳಗಾವಿ : ದೇಶಾದ್ಯಂತ ಗ್ರೀನ್ ಕಾರಿಡಾರ್ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದೆ. ದೇಶದ ಪ್ರಮುಖ ನಗರಗಳ ಮಧ್ಯೆ ಹೆದ್ದಾರಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪ್ರಯಾಣದ ಅವಧಿಯನ್ನು ಕಡಿಮೆಗೊಳಿಸಿ ಸುಗಮ, ಸುರಕ್ಷಿತ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಕೇಂದ್ರ ರಸ್ತೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಹೇಳಿದರು.

ಬೆಳಗಾವಿ ಜಿಲ್ಲೆಯ 1622 ಕೋಟಿ ವೆಚ್ಚದ ಹೊನಗಾ-ಝಾಡಶಹಾಪುರ ಚತುಷ್ಪಥ ರಿಂಗ್ ರಸ್ತೆ, 941 ಕೋಟಿ ವೆಚ್ಚದ ಚಿಕ್ಕೋಡಿ ಬೈಪಾಸ್​ನಿಂದ-ಗೋಟೂರವರೆಗಿನ ಚತುಷ್ಪಥ ಹಾಗೂ ಶಿರಗುಪ್ಪಿಯಿಂದ ಅಂಕಲವರೆಗಿನ 887 ಕೋಟಿ ವೆಚ್ಚದ ರಸ್ತೆ ಅಗಲೀಕರಣ ಸೇರಿದಂತೆ ಒಟ್ಟಾರೆ 13 ಸಾವಿರ ಕೋಟಿ ಮೌಲ್ಯದ 680 ಕಿ.ಮೀ. ಉದ್ದದ 36 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಗುರುವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರ ಸಮರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಕಳೆದ ಅನೇಕ ವರ್ಷಗಳಿಂದ ಬೆಳಗಾವಿ ರಿಂಗ್ ರಸ್ತೆ ಸಮಸ್ಯೆ ಚರ್ಚೆಯಾಗಿತ್ತು. ಸುರೇಶ್ ಅಂಗಡಿ ಅವರು ಹಾಗೂ ಎಲ್ಲ ಶಾಸಕರು ಪ್ರಸ್ತಾಪಿಸಿದ್ದರು. ಇದೀಗ ಬೆಳಗಾವಿ ರಿಂಗ್ ರಸ್ತೆಗೆ ಕಾಲ ಕೂಡಿಬಂದಿದೆ. ರಾಜ್ಯದಲ್ಲಿ 8200 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಇದೆ. ರಾಜ್ಯದಲ್ಲಿ 3 ಲಕ್ಷ ಕೋಟಿ ರೂಪಾಯಿ ವೆಚ್ಚದ ಕಾಮಗಾರಿ ಕೈಗೊಳ್ಳುವ ಗುರಿ ಇತ್ತು. ಇಂದು ಬಹುತೇಕ ಕಾಮಗಾರಿಗಳಿಗೆ ಚಾಲನೆ ದೊರೆತಿದೆ. ರಸ್ತೆಗಳು ಅಭಿವೃದ್ಧಿಗೆ ಮಾರ್ಗಗಳಾಗಿವೆ. ಬೆಳಗಾವಿ ಬೈಪಾಸ್ 3400 ಕೋಟಿ ವೆಚ್ಚದ ಈ ಕಾಮಗಾರಿಯಿಂದ ಬೆಳಗಾವಿ-ಗೋವಾ ರಾಜ್ಯದ ನಡುವಿನ ಪ್ರಯಾಣದ ಅವಧಿಯನ್ನು ಕಡಿತಗೊಳಿಸಲಿದೆ ಎಂದರು.

ಪ್ರಯಾಣದ ಅವಧಿ ಮೂರುವರೆ ಗಂಟೆ ಮಾತ್ರ: ಬೆಳಗಾವಿ-ಹುನಗುಂದ-ರಾಯಚೂರು ರಾಷ್ಟ್ರೀಯ ಹೆದ್ದಾರಿಯ ನಿರ್ಮಾಣದ 9000 ಕೋಟಿ ರೂ. ವೆಚ್ಚದ ಕಾಮಗಾರಿಯು ಪೂರ್ಣಗೊಂಡ ಬಳಿಕ ಪ್ರಯಾಣದ ಅವಧಿಯು ಮೂರುವರೆ ಗಂಟೆಗೆ ಇಳಿಯಲಿದೆ. ಬೆಳಗಾವಿ-ಸಂಕೇಶ್ವರ ಹೆದ್ದಾರಿ ಅಗಲೀಕರಣ ಕಾಮಗಾರಿಗೆ ಅರಣ್ಯ ಇಲಾಖೆಯ ಅನುಮತಿ ಸಕಾಲದಲ್ಲಿ ದೊರಕದಿರುವುದರಿಂದ ಕಾಮಗಾರಿ ಕುಂಠಿತಗೊಂಡಿದೆ. ಆದ್ದರಿಂದ ರಾಜ್ಯ ಸರ್ಕಾರವು ಅರಣ್ಯ ಇಲಾಖೆಯ ಅನುಮತಿ ದೊರಕಿಸಿಕೊಡುವುದರ ಜತೆಗೆ ಇತರೆ ಅಡ್ಡಿಗಳನ್ನು ನಿವಾರಿಸಿಕೊಟ್ಟರೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅನುಕೂಲವಾಗುತ್ತದೆ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಹೆದ್ದಾರಿ ಜಾಲವನ್ನು ಜೋಡಿಸುವ ಮೂಲಕ ಒಟ್ಟಾರೆ ಪ್ರಯಾಣದ ಅವಧಿಯನ್ನು ಕಡಿಮೆಗೊಳಿಸುವುದರ ಜತೆಗೆ ಅಭಿವೃದ್ಧಿಗೆ ಪೂರಕವಾದ ವಾತಾವರಣ ಲಭಿಸಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಆಶಯ ವ್ಯಕ್ತಪಡಿಸಿದರು.

ಬೆಂಗಳೂರು ಸಂಚಾರ ದಟ್ಟಣೆ ಕಡಿಮೆಗೊಳಿಸಲು 17 ಸಾವಿರ ಕೋಟಿ ವೆಚ್ಚದ ರಿಂಗ್ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ಸಾರಿಗೆ ಸಮಸ್ಯೆ ನಿವಾರಣೆ ಜತೆಗೆ ರಾಜ್ಯದ ಜನರಿಗೆ ಅನುಕೂಲವಾಗಲಿದೆ. ಜನವರಿ 2025 ರ ವೇಳೆಗೆ ಆರು ಪ್ಯಾಕೇಜ್​ಗಳ ರಿಂಗ್ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ಬೆಳಗಾವಿಯಲ್ಲಿ ಕಬ್ಬು ಬೆಳೆ ಜಾಸ್ತಿಯಾಗಿದೆ. ಎಥೆನಾಲ್ ಆರ್ಥಿಕತೆ ತೀವ್ರ ಬೆಳವಣಿಗೆ ಕಂಡಿದೆ. ಪೆಟ್ರೋಲ್ ಬದಲಾಗಿದೆ. ಎಥೆನಾಲ್ ಬಳಕೆಗೆ ಪ್ರೋತ್ಸಾಹ ನೀಡಲು ಎಥೆನಾಲ್ ಪಂಪ್ ಸ್ಥಾಪನೆಗೆ ಅನುಮತಿ ನೀಡಲಾಗುತ್ತಿದೆ. ಬೆಳಗಾವಿಯಲ್ಲಿ ಎಥೆನಾಲ್ ಉತ್ಪಾದನೆ ಹಾಗೂ ಬಳಕೆಗೆ ಹೆಚ್ಚು ಅವಕಾಶಗಳಿವೆ. ರೈತರ ಅಭಿವೃದ್ಧಿ ಮತ್ತು ಪರಿಸರ ದೃಷ್ಟಿಯಿಂದ ಬೆಳಗಾವಿ ಜಿಲ್ಲೆಯಾದ್ಯಂತ ಎಥೆನಾಲ್ ಬಳಕೆಗೆ ರಾಜ್ಯ ಸರ್ಕಾರ ಪ್ರೋತ್ಸಾಹ ನೀಡಬೇಕು ಎಂದು ಸಚಿವ ನಿತಿನ್ ಗಡ್ಕರಿ ಸಲಹೆ ನೀಡಿದರು.

ಗಡ್ಕರಿ ಅಂದ್ರೆ ಸಡಕ್ ಕೆ ಬಾಷಾ ಎಂದ ಸತೀಶ್ ಜಾರಕಿಹೊಳಿ : ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಕೇಂದ್ರ ಸಾರಿಗೆ ಸಚಿವಾಲಯದಿಂದ ರಾಜ್ಯದ ರಸ್ತೆಗಳು ಸುಧಾರಣೆ ಆಗಬೇಕು. ಈ ರಸ್ತೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಆಗಬೇಕು.‌ ಇದರಿಂದ ಅನೇಕ ಉದ್ಯಮಿಗಳು ಬರಬೇಕೆಂಬುದು ಕೇಂದ್ರ ಸರ್ಕಾರದ ಕನಸಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡ್ತಾರೆ. ಕಳೆದ 9 ತಿಂಗಳಲ್ಲಿ 5 ಬಾರಿ ಗಡ್ಕರಿ ಅವರನ್ನು ಭೇಟಿ ಮಾಡಿರುವೆ ಎಂದರು.

ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸೂಚಿಸಿದ್ದರು. ಅದರಲ್ಲಿ ಕೆಲವೊಂದಿಷ್ಟು ಕಾಮಗಾರಿ ಆರಂಭ ಮಾಡಿದ್ದೇವೆ. ನಿತಿನ್ ಗಡ್ಕರಿ ಅವರನ್ನು ನೋಡಿದ್ರೆ ಹೆಮ್ಮೆ ಆಗುತ್ತದೆ. ಕೇಂದ್ರ ರಾಜ್ಯದಲ್ಲಿ ಬೇರೆ ಬೇರೆ ಪಕ್ಷಗಳ ಸರ್ಕಾರ ಇದ್ದಾಗ ದ್ವೇಷದ ಭಾವನೆ ಇರುತ್ತದೆ. ಆದರೆ ನಿತಿನ್ ಗಡ್ಕರಿ ಅವರ ಸಚಿವಾಲಯದಲ್ಲಿ ಹಾಗಾಗಿಲ್ಲ. ಅದು ನಮಗೆ ನಮ್ಮದೇ ಸರ್ಕಾರ ಅನ್ನೋ ಭಾವನೆ ಬರುತ್ತದೆ. ಪಕ್ಷಕ್ಕಿಂತ ರಸ್ತೆ ಅಭಿವೃದ್ಧಿ ಕಾರ್ಯ ಮುಖ್ಯ. ಇದೇ ಕಾರಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಬಿಜೆಪಿ, ಕಾಂಗ್ರೆಸ್ ಶಾಸಕರಿಗೆ ಸಮಾನ ಅನುದಾನ ನೀಡಿದ್ದೇವೆ. ನಿತಿನ್ ಗಡ್ಕರಿ ಅಂದ್ರೆ ಸಡಕ್ ಕೆ ಬಾಷಾ (ರಸ್ತೆ ರಾಜ) ಎಂದು ಹಾಡಿ ಹೊಗಳಿದರು.

ಸಂಸದೆ ಮಂಗಲ ಅಂಗಡಿ ಮಾತನಾಡಿ, ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗಿ ಸಾವಿರಾರು ಕೋಟಿ ರೂಪಾಯಿ ಮೊತ್ತದ ಕಾಮಗಾರಿಗಳನ್ನು ಮಂಜೂರು ಮಾಡಿದ ಪ್ರಧಾನಮಂತ್ರಿಗಳು ಹಾಗೂ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ ಅವರು, ಬೆಳಗಾವಿ ರಿಂಗ್ ರಸ್ತೆ ಮಾಜಿ ಕೇಂದ್ರ ಸಚಿವರಾದ ಸುರೇಶ್ ಅಂಗಡಿ ಅವರ ಕನಸಾಗಿತ್ತು. ಧಾರವಾಡ-ಸವದತ್ತಿ-ಯರಗಟ್ಟಿ-ಮುಧೋಳ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಬೇಕು ಎಂದು ಮನವಿ ಮಾಡಿಕೊಂಡರು.

ಕೇಬಲ್ ಕಾರ್ ಸೌಕರ್ಯ ಕಲ್ಪಿಸಬೇಕು : ಕೇವಲ ಬೆಳಗಾವಿ ಜಿಲ್ಲೆಯೊಂದರಲ್ಲೇ 4237 ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ. ಜತ್ ಜಾಂಬೋಟಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಬೇಕು; ರಾಜಹಂಸಗಡ ಕೋಟೆಯನ್ನು ಪ್ರವಾಸಿತಾಣವಾಗಿ ಅಭಿವೃದ್ಧಿಪಡಿಸಲು ಅನುಕೂಲವಾಗುವಂತೆ ಕೇಬಲ್ ಕಾರ್ ಸೌಕರ್ಯ ಕಲ್ಪಿಸಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ಪಿ. ಸಿ ಗದ್ದಿಗೌಡರ, ಸಂಗಣ್ಣ ಕರಡಿ, ರಾಜಾ ಅಮರೇಶ್ವರ ನಾಯಕ, ಶಾಸಕರಾದ ಅಭಯ್ ಪಾಟೀಲ, ವಿಠ್ಠಲ ಹಲಗೇಕರ, ವಿಧಾನ ಪರಿಷತ್​ ಸದಸ್ಯ ಪ್ರಕಾಶ್ ಹುಕ್ಕೇರಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ನಗರ ಪೊಲೀಸ್ ಆಯುಕ್ತ ಎಸ್. ಎನ್ ಸಿದ್ದರಾಮಪ್ಪ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೇರಿ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : 'ರಸ್ತೆ ಅಪಘಾತಗಳಿಂದ ಜಿಡಿಪಿಗೆ ಶೇ 3 ರಷ್ಟು ಸಾಮಾಜಿಕ - ಆರ್ಥಿಕ ನಷ್ಟ'

ETV Bharat Logo

Copyright © 2025 Ushodaya Enterprises Pvt. Ltd., All Rights Reserved.