ETV Bharat / state

ನನಗೆ ಸಹೋದರಿಯೇ ಇಲ್ಲ, ಗೋಪಾಲ್ ಜೋಶಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ: ಪ್ರಲ್ಹಾದ್​ ಜೋಶಿ - PRALHAD JOSHI

ಬೆಂಗಳೂರಿನಲ್ಲಿ ದಾಖಲಾಗಿರುವ ಎಫ್‌ಐಆರ್‌ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿ, ಗೋಪಾಲ್ ಜೋಶಿ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.

union-minister-pralhad-joshi
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (ETV Bharat)
author img

By ETV Bharat Karnataka Team

Published : Oct 18, 2024, 6:57 PM IST

Updated : Oct 18, 2024, 7:08 PM IST

ನವದೆಹಲಿ/ಹುಬ್ಬಳ್ಳಿ: ನನಗೆ ಸಹೋದರಿಯೇ ಇಲ್ಲ. ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದರು.

ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ, ಬೆಂಗಳೂರಿನಲ್ಲಿ ದಾಖಲಾಗಿರುವ ಬಿಜೆಪಿ ಟಿಕೆಟ್ ವಂಚನೆ ಪ್ರಕರಣದ ಕುರಿತ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ (ETV Bharat)

"ಮೊದಲನೆಯದಾಗಿ ನನಗೆ ಯಾರೂ ಸಹೋದರಿ ಇಲ್ಲ. ನನ್ನ ತಾಯಿಗೆ ಗೋಪಾಲ್ ಜೋಶಿ ಸೇರಿ ನಾಲ್ವರು ಮಕ್ಕಳು. ಆದರೆ, ಗೋಪಾಲ್ ಜೋಶಿ ಅವರೊಂದಿಗೆ ಕಳೆದ 32 ವರ್ಷಗಳಿಂದ ನಮಗೆ ಸಂಪರ್ಕ, ಸಂಬಂಧವಿಲ್ಲ" ಎಂದು ತಿಳಿಸಿದರು.

"ಗೋಪಾಲ್ ಜೋಶಿ ಮಾತ್ರವಲ್ಲ, ಯಾರೇ ಆಗಲಿ. ಅವರು ತಮ್ಮ ಕೆಲಸ, ಕಾರ್ಯಗಳಿಗೆ ನನ್ನ ಹೆಸರು ದುರುಪಯೋಗ ಮಾಡಿಕೊಳ್ಳುತ್ತಿದ್ದರೆ ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ" ಎಂದು ಜೋಶಿ ಹೇಳಿದರು.

"ಯಾರೊಂದಿಗೂ ನನ್ನ ಹೆಸರನ್ನು ಉಲ್ಲೇಖಿಸದಂತೆ 2013ರಲ್ಲೇ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ ತಡೆಯಾಜ್ಞೆ ನೀಡಿದೆ. ನ್ಯಾಯಾಲಯದ ಅಫಿಡವಿಟ್​ನಲ್ಲಿ ಅದರ ವಿವರಗಳಿವೆ" ಎಂದು ದಾಖಲೆ ಒದಗಿಸಿದರು.

"ಬೆಂಗಳೂರಿನಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ವಿಜಯಲಕ್ಷ್ಮಿ ನನ್ನ ಸಹೋದರಿ ಎಂದು ಉಲ್ಲೇಖಿಸಿದ್ದಾರೆ. ವಾಸ್ತವವಾಗಿ ನನಗೆ ಸಹೋದರಿಯೇ ಇಲ್ಲ. ಇದನ್ನೆಲ್ಲ ನೋಡಿದರೆ ಎಲ್ಲವೂ ಬೋಗಸ್ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ" ಎಂದು ಹೇಳಿದರು.

"ಹಾಗಾಗಿ, ಈ ಪ್ರಕರಣದಲ್ಲಿ ನನಗೂ, ನನ್ನ ಕುಟುಂಬಕ್ಕೂ ಹಾಗೂ ಬಿಜೆಪಿಗೂ ಸಂಬಂಧವಿಲ್ಲ. ಗೋಪಾಲ್ ಜೋಶಿ ತಪ್ಪೆಸಗಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ" ಎಂದು ಹೇಳಿದರು.

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಗೋಪಾಲ್ ಜೋಶಿ ಹಣ ಪಡೆದಿದ್ದಾರೋ ಇಲ್ಲವೋ ನನಗೆ ಗೊತ್ತಿಲ್ಲ. ಇದು ತನಿಖೆಯಿಂದ ಸಾಬೀತಾಗಬೇಕು" ಎಂದು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು.

"ಕಳೆದ 25 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ಒಂದು ಕಾಲದಲ್ಲಿ ಕಲ್ಲಿದ್ದಲು ಎಂದರೆ ಭ್ರಷ್ಟಾಚಾರ, ಹಗರಣದ್ದೇ ಸದ್ದಾಗುತ್ತಿತ್ತು. ಇಂಥ ಒಂದು ಖಾತೆ ನಿರ್ವಹಿಸಿದಾಗಲೂ ಯಾವತ್ತೂ ಕೈ ಮಸಿ ಮಾಡಿಕೊಂಡಿಲ್ಲ. ಇಂದಿಗೂ ಶುದ್ಧ ಹಸ್ತನಾಗಿದ್ದೇನೆ" ಎಂದು ಸಚಿವ ಪ್ರಲ್ಹಾದ್ ಜೋಶಿ ಕಾಂಗ್ರೆಸ್ಸಿಗರಿಗೆ ತಿರುಗೇಟು ನೀಡಿದರು.

ಏನಿದು ಪ್ರಕರಣ?: ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೊಡಿಸುವುದಾಗಿ ನಂಬಿಸಿ ಜೆಡಿಎಸ್ ಮಾಜಿ ಶಾಸಕನಿಂದ 2 ಕೋಟಿ‌ ರೂಪಾಯಿ ಪಡೆದು ವಂಚಿಸಲಾಗಿದೆ ಎಂದು ಆರೋಪಿಸಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಬಸವೇಶ್ವರನಗರ ಪೊಲೀಸ್​​ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ತಮ್ಮ ಪತಿ ವಿಜಯಪುರ ನಾಗಠಾಣಾ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ದೇವಾನಂದ್​​ ಪುಲ್ ಸಿಂಗ್ ಚವ್ಹಾಣ್ 2 ಕೋಟಿ ರೂಪಾಯಿ ಹಣ ಕಳೆದುಕೊಂಡಿದ್ದಾರೆ ಎಂದು ಪತ್ನಿ ಸುನಿತಾ ಚವ್ಹಾಣ್ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಬಸವೇಶ್ವರನಗರ ಠಾಣೆ ಪೊಲೀಸರು, ಗೋಪಾಲ್ ಜೋಶಿ ಹಾಗೂ ಅವರ ಪುತ್ರ ಅಜಯ್ ಜೋಶಿ ವಿರುದ್ಧ ವಂಚನೆ ಹಾಗೂ ಜಾತಿ ನಿಂದನೆ ಆರೋಪದಡಿ ಎಫ್‌ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಕೇಂದ್ರ ಸಚಿವ ಪ್ರಹ್ಲಾ​ದ್​​ ಜೋಶಿ ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ಕಾಂಗ್ರೆಸ್​ ಕಾರ್ಯಕರ್ತರ ಪ್ರತಿಭಟನೆ

Last Updated : Oct 18, 2024, 7:08 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.