ETV Bharat / state

ಪ್ರಜ್ವಲ್​ ರೇವಣ್ಣ ದೇಶ ಬಿಟ್ಟು ಹೋಗಿರುವುದರ ಹಿಂದೆ ಸಿದ್ದರಾಮಯ್ಯ ಕೈವಾಡ: ಪ್ರಹ್ಲಾದ್​ ಜೋಶಿ - Hassan Pendrive Case - HASSAN PENDRIVE CASE

ಹಾಸನ ಪೆನ್​ ಡ್ರೈವ್​ ಕೇಸ್​ ಕುರಿತಾಗಿ ರಾಜ್ಯ ಕಾಂಗ್ರೆಸ್​ ನಾಯಕರ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ
ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ (Etv Bharat)
author img

By ETV Bharat Karnataka Team

Published : May 3, 2024, 4:17 PM IST

Updated : May 3, 2024, 4:50 PM IST

ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ (Etv Bharat)

ಹುಬ್ಬಳ್ಳಿ: ಜನರು ಬಡಿದೆಬ್ಬಿಸಿದ ನಂತರ ಈಗ ಪ್ರಜ್ವಲ್​ ರೇವಣ್ಣಗೆ ಲುಕ್​ಔಟ್​ ನೋಟಿಸ್​ ಕೊಟ್ಟಿದ್ದಾರೆ. ಈ ಮೊದಲೇ ಎಫ್​ಐಆರ್​ ಮಾಡಿದ್ದರೆ ಅವರ ಬಂಧನವಾಗುತ್ತಿತ್ತು. ಅವರಿಗೆ ಜಪಾನ್​, ಜರ್ಮನಿಗೆ ಹೋಗೋಕೆ ಆಗುತ್ತಿರಲಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಸನ ಪೆನ್‌ಡ್ರೈವ್​ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸುತ್ತಾ, ಪ್ರಜ್ವಲ್​ ರೇವಣ್ಣರನ್ನು ಬಿಟ್ಟಿದ್ದು ನೀವೇ. ಇದರಲ್ಲಿ ಸಿಎಂ ಸಿದ್ದರಾಮಯ್ಯನವರ ಕೈವಾಡವಿದೆ. 21ನೇ ತಾರೀಖು ಪ್ರಕರಣ ಬೆಳಕಿಗೆ ಬಂದಿದ್ದರೂ ಸಿದ್ದರಾಮಯ್ಯನವರು ಬೇಕಂತಲೇ ಎಫ್‌ಐಆರ್​ ಮಾಡಿಸಲಿಲ್ಲ ಎಂದು ದೂರಿದರು.

ಸಿದ್ದರಾಮಯ್ಯ ಮತ್ತು ರೇವಣ್ಣ ನಡುವೆ ಹೊಂದಾಣಿಕೆ ಇದೆ. ಪ್ರಜ್ವಲ್ ಸಹೋದರ ಪೆನ್‌ಡ್ರೈವ್​ಗೆ ಸಂಬಂಧಿಸಿದಂತೆ ನನ್ನನ್ನು ಭೇಟಿ ಮಾಡಿದ್ದಾರೆ ಎಂದು ಅವರೇ ಹೇಳಿಕೊಂಡಿದ್ದಾರೆ. ಆಗ ಯಾಕೆ ತಕ್ಷಣ ಕ್ರಮ ಕೈಗೊಳ್ಳಲಿಲ್ಲ?. ಈ ಪ್ರಕರಣ ಗಂಭೀರ ಸ್ವರೂಪದ್ದು ಎಂದು ಗೊತ್ತಿದ್ದರೂ ಆರಾಮವಾಗಿ ಮಲಗಿ ಈಗ ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದೀರಾ?. ವೀಸಾ, ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌(ರಾಜತಾಂತ್ರಿಕ ಪಾಸ್‌ಪೋರ್ಟ್‌) ಕೊಟ್ಟಿದ್ದೀರಾ ಎಂದು ಹೇಳುತ್ತಿದ್ದೀರಾ. ನಾಚಿಕೆ, ಮಾನ-ಮರ್ಯಾದೆ ಇದ್ದವರು ಈ ರೀತಿ ಮಾತನಾಡುವುದಿಲ್ಲ. ಯಾಕೆಂದರೆ ಯಾರೇ ಒಬ್ಬ ವ್ಯಕ್ತಿ ಸಂಸದನಾಗಿ ಆಯ್ಕೆಯಾದ ಮೇಲೆ ಮೂರ್ನಾಲ್ಕು ದಿನಗಳಲ್ಲಿ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಸಿಗುತ್ತದೆ ಎಂದು ತಿಳಿಸಿದರು.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ತೆಗೆದುಕೊಂಡರೆ ಹಲವಾರು ದೇಶಗಳಿಗೆ ವೀಸಾ ಇಲ್ಲದೇ ಹೋಗಬಹುದು. ಇಷ್ಟು ಗೊತ್ತಿಲ್ವಾ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​ ಮತ್ತು ಇತರೆ ಕಾಂಗ್ರೆಸ್​ ನಾಯಕರಿಗೆ?. ಏನು ಮಾತನಾಡುತ್ತಿದ್ದೀರಿ ನೀವು?. ಎಲ್ಲವನ್ನೂ ಕೇಂದ್ರದ ಮೇಲೆ ಹಾಕಬೇಕೆಂಬುದು ಇವರ ಪ್ರವೃತ್ತಿ ಎಂದು ವಾಗ್ದಾಳಿ ನಡೆಸಿದರು.

ಪ್ರಜ್ವಲ್​ ರೇವಣ್ಣ ಪ್ರಕರಣ ಬಿಜೆಪಿ ನಾಯಕರಿಗೆ ಮೊದಲೇ ಗೊತ್ತಿತ್ತು ಎಂಬ ಕಾಂಗ್ರೆಸ್​ ನಾಯಕರ ಆರೋಪಕ್ಕೆ, ಈ ಬಗ್ಗೆ ಪತ್ರ ಬಂದಿತ್ತು ಎಂದು ಹೇಳುತ್ತಿದ್ದಾರೆ. ಆದರೆ ಇದರ ಸತ್ಯಾಸತ್ಯತೆ ಏನು ಎಂದು ತಿಳಿದುಬಂದಿಲ್ಲ. ನಮಗೆ ಈ ಬಗ್ಗೆ ಏನೂ ಗೊತ್ತಿರಲಿಲ್ಲ, ಈ ವಿಚಾರವಾಗಿ ತೀರ್ಮಾನವನ್ನು ಜೆಡಿಎಸ್ ಮಾಡಬೇಕಿತ್ತು. ಅವರ ನಮ್ಮ ಮೈತ್ರಿ ಪಕ್ಷವಷ್ಟೇ, ಆ ಪಕ್ಷವನ್ನು ನಾವು ನಡೆಸುತ್ತಿಲ್ಲ. ಬಿಜೆಪಿಯಲ್ಲಿ ನಡೆದಿದ್ದರೆ ನಾವು ಜವಾಬ್ದಾರರಾಗುತ್ತಿದ್ದೆವು ಎಂದು ಹೇಳಿದರು.

ದಿನೇಶ್‌ ಗುಂಡೂರಾವ್ ಅವರು ರಾಹುಲ್ ಗಾಂಧಿಯಂತೆ ಮಾತನಾಡಬಾರದು: ಈ ಪ್ರಕರಣದ ಬಗ್ಗೆ ಜೋಶಿಯವರಿಗೆ ಎಲ್ಲವೂ ಗೊತ್ತಿತ್ತು, ಅದರೂ ಅವರು ಯಾಕೆ ಮುಚ್ಚಿಟ್ಟರು ಎಂಬ ಸಚಿವ ದಿನೇಶ್​ ಗುಂಡೂರಾವ್​ ಆರೋಪಕ್ಕೆ ಪ್ರತಿಕ್ರಿಯಿಸಿ, ದಿನೇಶ್ ಗುಂಡೂರಾವ್ ಅವರಿಗೆ ಜೋಶಿಯವರಿಗೆ ಎಲ್ಲವೂ ಗೊತ್ತಿತ್ತೆಂದು ಕನಸು ಬಿದ್ದಿತ್ತಾ?. ಗುಂಡೂರಾವ್​ ಬೆಂಗಳೂರಿನಲ್ಲಿರುವವರು, ನಾನು ಹುಬ್ಬಳ್ಳಿಯಲ್ಲಿರುವವನು. ಗುಂಡೂರಾವ್​ ಮಂತ್ರಿಯಾಗಿದ್ದಾರೆ, ಅವರಿಗೇ ಗೊತ್ತಿಲ್ಲ ಎಂದರೆ ನನಗೆ ಗೊತ್ತಿರುತ್ತಾ?. ಗುಂಡೂರಾವ್ ಸೆನ್ಸಿಟಿವ್ ರಾಜಕಾರಣಿ ಎಂದು ನಾನಂದುಕೊಂಡಿದ್ದೇನೆ. ರಾಹುಲ್​ ಗಾಂಧಿಯವರಂತೆ ಮಾತನಾಡಬೇಡಿ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ: ಹಾಸನ ಪೆನ್​ ಡ್ರೈವ್​ ಕೇಸ್: ಮ್ಯಾಜಿಸ್ಟ್ರೇಟ್ ಮುಂದೆ ಸಂತ್ರಸ್ತೆಯ ಹೇಳಿಕೆ ದಾಖಲು- ಸಚಿವ ಜಿ.ಪರಮೇಶ್ವರ್ - Hassan Pendrive Case

Last Updated : May 3, 2024, 4:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.