ETV Bharat / state

ವಿದೇಶದಲ್ಲಿ ರಾಹುಲ್ ಗಾಂಧಿ ಅಪ್ರಬುದ್ಧ ಹೇಳಿಕೆ: ಕೇಂದ್ರ ಸಚಿವ ಜೋಶಿ - Pralhad Joshi

ರಾಹುಲ್ ಗಾಂಧಿ ವಿದೇಶದಲ್ಲಿ ಅಪ್ರಬುದ್ಧ ಹೇಳಿಕೆ ನೀಡುವ ಮೂಲಕ ದೇಶಕ್ಕೆ ಅಪಮಾನ ಮಾಡಿದ್ದಾರೆ. ಈ ಹೇಳಿಕೆಯನ್ನು ತಿರಸ್ಕರಿಸುತ್ತೇವೆ ಮತ್ತು ಖಂಡಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (ETV Bharat)
author img

By ETV Bharat Karnataka Team

Published : Sep 12, 2024, 11:03 AM IST

ಹುಬ್ಬಳ್ಳಿ: ವಿದೇಶದಲ್ಲಿ ರಾಹುಲ್ ಗಾಂಧಿ ಅಪ್ರಬುದ್ಧ ಹೇಳಿಕೆ ನೀಡುವ ಮೂಲಕ ರಾಹುಲ್ ಗಾಂಧಿ ಭಾರತದ ಮಾನ ಹರಾಜು ಹಾಕುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿ ಕಾರಿದರು.

ನಗರದ ವಿಮಾನ ನಿಲ್ದಾಣದಲ್ಲಿ ಬುಧವಾರ ರಾತ್ರಿ ಮಾತನಾಡಿದ ಅವರು, ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಕೈಯಲ್ಲಿ ಸಂವಿಧಾನ ಪುಸ್ತಕ ಹಿಡೀತಾರೆ, ಮನಸ್ಸಿನಲ್ಲಿ ಸಂವಿಧಾನ, ಮೀಸಲಾತಿ ವಿರೋಧಿ ನಿಲುವು ಇಟ್ಟುಕೊಂಡಿದ್ದಾರೆ. ವಿದೇಶದಲ್ಲಿ ನೀಡಿದ ಹೇಳಿಕೆಯೇ ಇದಕ್ಕೆ ಸಾಕ್ಷಿ ಎಂದರು.

ಕಾಂಗ್ರೆಸ್ ನಾಯಕರು ಎಂದೆಂದಿಗೂ ಮೀಸಲಾತಿ ವಿರೋಧಿಗಳು. ರಾಹುಲ್ ಗಾಂಧಿ ಅವರು ಸಿಖ್ಖ​ರ ಪೇಟಾದ ಬಗ್ಗೆ ಮಾತನಾಡಿದ್ದಾರೆ. ಬಿಜೆಪಿ ಸಿಖ್ಖ​ರನ್ನು ಅತ್ಯಂತ ಗೌರವದಿಂದ ಕಾಣುತ್ತಿದೆ. ವಿದೇಶದಲ್ಲಿ ಹೋಗಿ ಈ ರೀತಿ ಮಾತನಾಡೋದು ಸರಿಯಲ್ಲ. ಚುನಾವಣೆ ಬಗ್ಗೆಯೂ ರಾಹುಲ್ ಮಾತನಾಡಿದ್ದಾರೆ. ಕರ್ನಾಟಕ ಸೇರಿ ವಿರುದ್ಧ ರಾಜ್ಯಗಳಲ್ಲಿ ಕಾಂಗ್ರೆಸ್ ಗೆದ್ದಾಗ ಚುನಾವಣಾ ಆಯೋಗದ ಬಗ್ಗೆ ಏನೂ ಅನಿಸಲೇ ಇಲ್ಲ. ಇಷ್ಟು ಪಾರದರ್ಶಕವಾಗಿ ಎಲ್ಲಿಯೂ ಚುನಾವಣೆ ನಡೆಯಲ್ಲ. ರಾಜಕೀಯ ಟೀಕೆ ಮಾಡುವ ಭರದಲ್ಲಿ ಈ ರೀತಿಯ ಮಾತು ಸರಿಯಲ್ಲ ಎಂದು ಹೇಳಿದರು.

ವಿದೇಶದಲ್ಲಿ ಇಡೀ ದೇಶವನ್ನು ಅಪಮಾನ ಮಾಡ್ತಿದ್ದಾರೆ. ದೇಶದ ಪ್ರತಿಷ್ಠೆಗೆ ಮಸಿ ಬಳಿಯುತ್ತಿದ್ದಾರೆ. ಅವರು ಏನೇ ಹೇಳಲಿ, ಮೀಸಲಾತಿ ಮತ್ತು ಸಾಮಾಜಿಕ ನ್ಯಾಯಕ್ಕೆ ಬಿಜೆಪಿ ಬದ್ಧ.
ರಾಹುಲ್ ಗಾಂಧಿ ಅಪ್ರಬುದ್ಧ ಹೇಳಿಕೆಯನ್ನು ಖಂಡಿಸುತ್ತೇನೆ. ಕಾಂಗ್ರೆಸ್ ಎಂದೆಂದಿಗೂ ಮೀಸಲಾತಿ, ಸಾಮಾಜಿಕ ನ್ಯಾಯದ ವಿರೋಧಿ. ನೆಹರೂ, ಇಂದಿರಾ, ರಾಜೀವ್ ಗಾಂಧಿ ಹೇಳಿಕೆ ಗಮನಿಸಿದರೆ ಇದು ಗೊತ್ತಾಗುತ್ತದೆ. ಕಾಂಗ್ರೆಸ್​ನವರು ಅಂಬೇಡ್ಕರ್ ಅವರಿಗೆ ಘೋರ ಅಪಮಾನ ಮಾಡಿದವರು, ಜಗಜೀವನ ರಾಮ್​ ಅವರಿಗೆ ಅನ್ಯಾಯ ಮಾಡಿದರು. ದಲಿತರು ಮತ್ತು ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಕೇವಲ ಮತ ಬ್ಯಾಂಕ್ ಆಗಿ ಬಳಸಿಕೊಂಡಿದೆ ಎಂದು ದೂರಿದ್ದಾರೆ.

ಫ್ಲೈಓವರ್ ಕಾಮಗಾರಿ ವೇಳೆ ಅವಘಡ ನೋವುಂಟು ಮಾಡಿದೆ: ಫ್ಲೈಓವರ್ ಕಾಮಗಾರಿ ವೇಳೆ ನಡೆದಿರುವ ಅವಘಡ ಸಾಕಷ್ಟು ನೋವನ್ನುಂಟು ಮಾಡಿದೆ. ಕಾಮಗಾರಿ ವೇಳೆಯಲ್ಲಿ ಸಾಕಷ್ಟು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಈ ಬಗ್ಗೆ ರಾಜ್ಯ ಸರ್ಕಾರ ವಿಶೇಷ ಗಮನ ಹರಿಸುವ ಮೂಲಕ ಕಾರ್ಯವನ್ನು ಚುರುಕುಗೊಳಿಸಬೇಕು ಎಂದರು.

ಇಲ್ಲಿನ ಜನರ ಆಶೀರ್ವಾದದಿಂದ ಕೇಂದ್ರ ಸಚಿವನಾಗಿದ್ದು, ಕೇಂದ್ರದಿಂದ ಸಾಕಷ್ಟು ಅನುದಾನವನ್ನು ಮಹಾನಗರ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡಕ್ಕೆ ಕೊಟ್ಟಿದ್ದೇವೆ. ಪ್ಲೈಓವರ್ ಕಾಮಗಾರಿಗೂ ಸಾಕಷ್ಟು ಅನುದಾನ ಕೊಟ್ಟಿದ್ದೇವೆ. ಸರಿಯಾಗಿ ಅನುಷ್ಠಾನ ಮಾಡುವ ಹಾಗೂ ಕಾಮಗಾರಿ ಬಗ್ಗೆ ನಿಗಾ ವಹಿಸುವ ಜವಾಬ್ದಾರಿ ರಾಜ್ಯ ಸರ್ಕಾರದ್ದು. ಈ ಬಗ್ಗೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಜಾಗ್ರತಿ ವಹಿಸಬೇಕಿದೆ ಎಂದು ತಿಳಿಸಿದರು.

ಇನ್ನು ಬಿಜೆಪಿ ಕಚೇರಿ ಸ್ಫೋಟಿಸುವ ಸಂಚಿನ ಕುರಿತು ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವರು, ಭಯೋತ್ಪಾದಕರನ್ನು ಕಾಂಗ್ರೆಸ್ ನಾಯಕರು ಬೆಂಬಲಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: ಕೆಲವು ಧರ್ಮ, ಭಾಷೆಗಳು ಕೀಳೆಂಬ ಭಾವನೆ ಆರ್​ಎಸ್​ಎಸ್​ಗಿದೆ: ರಾಹುಲ್​ ಗಾಂಧಿ - Rahul Gandhi Criticizes RSS

ETV Bharat Logo

Copyright © 2024 Ushodaya Enterprises Pvt. Ltd., All Rights Reserved.