ETV Bharat / state

ತಿರುಪತಿ ಲಡ್ಡುವಿನಲ್ಲಿ ಮಾಂಸದ ಕೊಬ್ಬು: ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು - ಪ್ರಲ್ಹಾದ್ ಜೋಶಿ - Union minister pralhad joshi

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ತಿರುಪತಿ ಲಡ್ಡುವಿನಲ್ಲಿ ಮಾಂಸದ ಕೊಬ್ಬು ಪತ್ತೆಯಾಗಿರುವ ಬಗ್ಗೆ ಮಾತನಾಡಿದ್ದಾರೆ. ಇದರಲ್ಲಿ ತಪ್ಪು ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

union-minister-pralhad-joshi
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (ETV Bharat)
author img

By ETV Bharat Karnataka Team

Published : Sep 21, 2024, 7:52 PM IST

ಹುಬ್ಬಳ್ಳಿ : ಹಿಂದಿನ ಆಂಧ್ರಪ್ರದೇಶ ಸರ್ಕಾರ ಹಾಗೂ ಕಾಂಗ್ರೆಸ್​​ನವರ ಹಿಂದೂ ವಿರೋಧಿ ನೀತಿಯಿಂದಾಗಿ ತಿರುಪತಿ ಲಡ್ಡುವಿನಲ್ಲಿ ಮಾಂಸದ ಕೊಬ್ಬು ಹಾಗೂ ಇತ್ಯಾದಿ ವಸ್ತುಗಳು ಪತ್ತೆಯಾಗಿರುವುದನ್ನು ಲ್ಯಾಬ್ ವರದಿ ವಿವರಿಸಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹಿಸಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂದಿನಿ ತುಪ್ಪ ಬಂದ್ ಮಾಡಿಸಿದ ನಂತರ ಈ ತರಹದ ವಸ್ತುಗಳನ್ನು ಖರೀದಿ ಮಾಡಿ ಲಡ್ಡು ತಯಾರಿಸಲಾಗಿದೆ ಎಂದು ಗಂಭೀರವಾಗಿ ಆರೋಪಿಸಿದರು. ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ಕೂಡ ಹೇಳಿದ್ದರಲ್ಲಿ ಸತ್ಯವಿದೆ. ಹೀಗಾಗಿ ಇದರಲ್ಲಿ ತಪ್ಪು ಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (ETV Bharat)

ಪ್ರಸಾದ ವಿತರಣೆಯಲ್ಲಿ ಆಯಾ ಸರ್ಕಾರಗಳು ಮೂಗು ತೂರಿಸದೇ ದೇವಸ್ಥಾನ ಆಡಳಿತ ಮಂಡಳಿಯವರು ನಿರ್ಧಾರ ಮಾಡಬೇಕು ಮತ್ತು ಪರಿಶೀಲನೆ ಮಾಡಬೇಕು. ದೇಶದ ನಂಬಿಕೆ, ಸಂಸ್ಕೃತಿ, ಶ್ರದ್ಧೆ ಹಾಳು ಮಾಡಬಾರದು ಎಂದು ಹೇಳಿದರು.

ಸರಿಯಾದ ತನಿಖೆ ಮಾಡಿ ತಪ್ಪಿತಸ್ಧರಿಗೆ ಶಿಕ್ಷೆಯಾಗಬೇಕು: ಮುನಿರತ್ನ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಮುನಿರತ್ನ ಮೇಲೆ ಆರೋಪಗಳಿವೆ. ಸರಿಯಾಗಿ ತನಿಖೆ ಮಾಡಬೇಕು. ಯಾರೇ ತಪ್ಪು ಮಾಡಿದ್ದರೂ ಸಹ ಶಿಕ್ಷೆಯಾಗಲಿ. ಆದರೆ 2020ರ ಪ್ರಕರಣ ಈಗ ಮುನ್ನೆಲೆಗೆ ಬಂದಿದ್ದು ಏಕೆ? ರಾಜ್ಯ ಸರ್ಕಾರದ ಗೊಡ್ಡು ಬೆದರಿಕೆಗಳಿಗೆ ನಾವು ಹೆದರೋಲ್ಲ ಎಂದರು.

ಗಣೇಶನ ಮೆರವಣಿಗೆ ಮಾಡಿದವರ ಮೇಲೆ ಎಫ್.ಐ.ಆರ್ ಹಾಕಲಾಗುತ್ತಿದೆ. ನೋಡಲು ಹೋದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರ ಮೇಲೂ ಎಫ್​ಐಆರ್ ದಾಖಲಾಗಿದೆ. ಮಸೀದಿಗೆ ಬಂದರೆ ಗಣೇಶ ಹಾಡು ಬಂದ್ ಮಾಡಬೇಕಂತೆ. ಹಾಗಾದರೆ ಗಣೇಶ ಹೋದರೆ ಮುಸ್ಲಿಮರು ನಮಾಜ್ ಬಂದ್ ಮಾಡುತ್ತಾರೆಯೇ? ಎಂದ ಅವರು, ಈ ಮೂಲಕ ರಾಜ್ಯ ಸರ್ಕಾರ ತುಷ್ಟಿಕರಣ ಹಾಗೂ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ದೂರಿದರು.

ಹುಬ್ಬಳ್ಳಿ ಮಂಟೂರ ರಸ್ತೆಯ ಸ್ಮಶಾನ ಭೂಮಿಯಲ್ಲಿ ಇಂದಿರಾ ಕ್ಯಾಂಟಿನ್ ವಿಚಾರವಾಗಿ ಉತ್ತರಿಸಿದ ಅವರು, ಸ್ಮಶಾನ ಭೂಮಿ ಆಗಿದ್ದರೆ ಇಂದಿರಾ ಕ್ಯಾಂಟಿನ್ ಬೇರೆ ಕಡೆ ಮಾಡಬೇಕು. ಸೌಹಾರ್ದತೆಯಿಂದ ಶಾಸಕರು ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ಬಗೆಹರಿಸಬೇಕು ಎಂದು ಹೇಳಿದರು.

ಇದನ್ನೂ ಓದಿ : ತಿರುಪತಿ ಲಡ್ಡು ಕಲಬೆರಕೆ ವಿವಾದ: ದೇಶಾದ್ಯಂತ ಆಕ್ರೋಶ, ಕೇಂದ್ರ ಸಚಿವರ ಕಿಡಿ - Tirupati Laddu Row

ETV Bharat Logo

Copyright © 2024 Ushodaya Enterprises Pvt. Ltd., All Rights Reserved.