ETV Bharat / state

ಕರ್ನಾಟಕದ ವಿಕಾಸಕ್ಕೆ ಆದ್ಯತೆ: ಕೇಂದ್ರದ ಅನುದಾನ ಸದ್ಬಳಕೆಗೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸಲಹೆ - SHIVRAJ SINGH CHOUHAN ADVICE

ಕೇಂದ್ರ ಸರ್ಕಾರ ಈಗಾಗಲೇ ಬಹಳಷ್ಟು ಅನುದಾನ ನೀಡಿದ್ದು, ಕರ್ನಾಟಕವು ಹಲವು ಯೋಜನೆಗಳಲ್ಲಿ ಅನುದಾನ ಖರ್ಚು ಮಾಡಿಲ್ಲ ಎಂದು ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು.

Agriculture Minister Chalurayaswamy submitted a request to Union Minister Shivraj Singh Chouhan
ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಸಲ್ಲಿಸಿದ ಕೃಷಿ ಸಚಿವ ಎನ್​.ಚಲುರಾಯಸ್ವಾಮಿ (ETV Bharat)
author img

By ETV Bharat Karnataka Team

Published : Jan 18, 2025, 4:26 PM IST

ಬೆಂಗಳೂರು: ''ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕರ್ನಾಟಕದ ವಿಕಾಸಕ್ಕೆ ಆದ್ಯತೆ ನೀಡುತ್ತಿದ್ದೇವೆ. ಈಗಾಗಲೇ ಬಿಡುಗಡೆ ಮಾಡಿರುವ ಅನುದಾನದ ಸದ್ಬಳಕೆ ಆಗಬೇಕಿದೆ'' ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

ಬೆಂಗಳೂರಿಗೆ ಬಂದಿರುವ ಕೇಂದ್ರ ಸಚಿವರು ಇಂದು ಕುಮಾರಕೃಪಾ ಅತಿಥಿಗೃಹದಲ್ಲಿ ರಾಜ್ಯದ ಕೃಷಿ, ಗ್ರಾಮೀಣಾಭಿವೃದ್ಧಿ, ಕಂದಾಯ ಸಚಿವರ ಜೊತೆ ಕೇಂದ್ರ ಸರ್ಕಾರದ ಯೋಜನೆಗಳ ಸಾಧನೆಯನ್ನು ಪರಿಶೀಲಿಸಿದರು. ನಂತರ ಮಾತನಾಡಿದ ಅವರು, ''ಅನುದಾನ ಕೇಳದೇ ಇದ್ದರೂ ನಾವೇ ಘೋಷಣೆ ಮಾಡಿದ್ದೇವೆ. ಬಹಳಷ್ಟು ಅನುದಾನವನ್ನು ಈಗಾಗಲೇ ಕೊಟ್ಟಿದ್ದು, ಅದನ್ನು ಇನ್ನೂ ಕರ್ನಾಟಕ ಸರ್ಕಾರ ಖರ್ಚು ಮಾಡಿಲ್ಲ'' ಎಂದರು.

''ಪ್ರತಿ ಬಡವನಿಗೂ ಮನೆ ಸಿಗಬೇಕು ಎಂಬುದು ಮೋದಿಯವರ ಸಂಕಲ್ಪ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕಳೆದ ಸೆಪ್ಟೆಂಬರ್​ನಲ್ಲಿ ಕರ್ನಾಟಕಕ್ಕೆ 2,57,246 ಮನೆಗಳ ನಿರ್ಮಾಣಕ್ಕೆ ಒಪ್ಪಿಗೆ ಕೊಟ್ಟಿದ್ದೆವು. ಅನುದಾನವನ್ನೂ ನೀಡಿದ್ದೆವು. ಇಂದು ಮತ್ತೆ ಕರ್ನಾಟಕದ ಬಡಜನರಿಗೆ ಮನೆ ಕಟ್ಟಲು ಇರುವ ಗುರಿ ಹೆಚ್ಚಿಸಲಾಗಿದೆ. ಇಂದು 4,67,580 ಮನೆಗಳನ್ನು ಕಟ್ಟಲು ಒಪ್ಪಿಗೆ ಕೊಟ್ಟಿದ್ದೇವೆ. ಬಡವರ ಸೇವೆಯೇ ಭಗವಂತನ ಸೇವೆ ಎಂಬ ಚಿಂತನೆ ನಮ್ಮದು. ಎಲ್ಲ ಬಡವರಿಗೆ ಮನೆ ನಿರ್ಮಿಸಿ ಕೊಡುವ ಉದ್ದೇಶ ಈಡೇರಿಸಬೇಕಿದೆ. ಅದಕ್ಕಾಗಿ ಮನೆಗಳ ನಿರ್ಮಾಣ ಕಾರ್ಯಕ್ಕೆ ವೇಗ ಕೊಡಲು ಸೂಚಿಸಲಾಗಿದೆ. ಹಿಂದೆ ನೀಡಿದ್ದ ಅನುದಾನ ಪೂರ್ತಿ ಬಳಕೆ ಮಾಡಲು ತಿಳಿಸಲಾಗಿದೆ'' ಎಂದು ವಿವರಿಸಿದರು.

''ಆತ್ಮ ಯೋಜನೆಯಡಿ ಹೆಚ್ಚುವರಿ ಸಿಬ್ಬಂದಿ ನೀಡಲು ಒಪ್ಪಿಗೆ ಕೊಡಲಾಗಿದೆ. ವಿಕಸಿತ ಭಾರತ ನಿರ್ಮಾಣದ ಸಂಕಲ್ಪ ನಮ್ಮದು. ವಿಕಸಿತ ಭಾರತಕ್ಕಾಗಿ ವಿಕಸಿತ ಕರ್ನಾಟಕ ಎಂಬುದು ನಮ್ಮ ಚಿಂತನೆ. ರಾಜ್ಯ ಸರ್ಕಾರವು ಸಕಾಲದಲ್ಲಿ ಅನುದಾನವನ್ನು ಬಳಸಿ, ಬಳಕೆ ಸಂಬಂಧಿತ ದೃಢಪತ್ರ ಕಳಿಸಬೇಕು'' ಎಂದು ಸೂಚಿಸಿದರು.

''ಆರೋಪ, ಪ್ರತ್ಯಾರೋಪದ ರಾಜಕಾರಣ ನಮ್ಮದಲ್ಲ, ನಮ್ಮದು ವಿಕಾಸ, ಅಭಿವೃದ್ಧಿಯ ರಾಜಕಾರಣ'' ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದ ಶಿವರಾಜ್ ಸಿಂಗ್ ಚೌಹಾಣ್, ''ಹಲವು ಯೋಜನೆಗಳಲ್ಲಿ ಕರ್ನಾಟಕವು ಅನುದಾನ ಖರ್ಚು ಮಾಡಿಲ್ಲ'' ಎಂದು ತಿಳಿಸಿದರು.

ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಮನವಿ, ಕೇಂದ್ರದ ಸಮ್ಮತಿ: ಇದೇ ವೇಳೆ, ರಾಜ್ಯದ ಕೃಷಿ ಕ್ಷೇತ್ರದ ಬಲವರ್ಧನೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಪೂರಕವಾಗಿ ಬೇಕಾಗಿರುವ ವಿವಿಧ ಸಹಾಯ ಮತ್ತು ಆರ್ಥಿಕ ಸಹಕಾರವನ್ನು ಶೀಘ್ರ ಒದಗಿಸುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಕೇಂದ್ರದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ನೆರವಿನ ಭರವಸೆಯನ್ನೂ ಸಹ ಪಡೆದಿದ್ದಾರೆ.

ಕುಮಾರಕೃಪಾ ಅತಿಥಿಗೃಹದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ ಚಲುವರಾಯಸ್ವಾಮಿ, ರಾಜ್ಯದ ಬೇಡಿಕೆಗಳನ್ನು ಮಂಡಿಸಿದರು. ರಾಜ್ಯದಲ್ಲಿ ಕೃಷಿ ಇಲಾಖೆ ಶೇ.99ರಷ್ಟು ಆರ್ಥಿಕ ಹಾಗೂ ಭೌತಿಕ ಗುರಿ ಸಾಧನೆ ಮಾಡಿದ್ದು, ಕೇಂದ್ರ ಪುರಸ್ಕೃತ ಯೋಜನೆಗಳಲ್ಲೂ ಶೇ.124ರಷ್ಟು ಅನುದಾನ ಬಳಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯೂ ಇದೇ ರೀತಿ ಹಣಕಾಸಿನ ನೆರವು ಒದಗಿಸಬೇಕು ಎಂದು ಸಚಿವರು ಕೋರಿದರು. ಕೇಂದ್ರ ಕೃಷಿ ಸಚಿವರು ಇದಕ್ಕೆ ಮುಕ್ತ ಮನಸ್ಸಿನ ಸಮ್ಮತಿ ಸೂಚಿಸಿದರು.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಿಂದ ರೈತರಿಗೆ ಕೃಷಿ ಯಾಂತ್ರಿಕರಣಕ್ಕೆ ಹೆಚ್ಚಿನ ಅನುಕೂಲವಾಗುತ್ತಿದ್ದು, ಈ ಬಾರಿ ಇನ್ನಷ್ಟು ಅಧಿಕ ಆರ್ಥಿಕ ನೆರವು ಒದಗಿಸುವಂತೆ ಮನವಿ ಮಾಡಿದ ಅವರು ಆನೇಕಲ್ ತಾಲೂಕಿನ, ಕಾಚನಾಯಕನಹಳ್ಳಿ ಗ್ರಾಮದಲ್ಲಿ ಗುರುತಿಸಲಾಗಿರುವ 20 ಎಕರೆ ಪ್ರದೇಶದಲ್ಲಿ ಪೆಸ್ಟಿಸೈಡ್ಸ್ ಫಾರ್ಮುಲೇಷನ್ ಟೆಕ್ನಾಲಜಿ ಸಂಸ್ಥೆ ಪ್ರಾರಂಭಕ್ಕೆ ಅನುಮೋದನೆ ಒದಗಿಸುವಂತೆ ಕೋರಿದರು.

ಸಾವಯವ, ಸಿರಿಧಾನ್ಯ ಉತ್ಪಾದನೆ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿ ಮತ್ತು ಮಾರಾಟದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು ಇದನ್ನು ಇನ್ನಷ್ಟು ಉತ್ತಮಪಡಿಸಲು ಕೇಂದ್ರ ಸರ್ಕಾರದ ನೆರವು ಮತ್ತು ಪ್ರೋತ್ಸಾಹದ ಅಗತ್ಯವಿದೆ ಎಂದಿರುವ ಚಲುವರಾಯಸ್ವಾಮಿ, ಜ.23ರಿಂದ ಜ.25ರ ವರೆಗೆ ನಗರದ ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಸಾವಯವ ಸಿರಿಧಾನ್ಯ ಮೇಳದಲ್ಲಿ ಭಾಗವಹಿಸುವಂತೆ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಇದೇ ವೇಳೆ ಅಹ್ವಾನಿಸಿದರು.

ಹಿಂಗಾರು ಜೋಳಕ್ಕೆ ನೀಡಲಾಗುತ್ತಿರುವ ಬೆಂಬಲ ಬೆಲೆ ಸೌಲಭ್ಯವನ್ನು ಮುಂಗಾರಿನಿಂದಲೇ ಅನುಷ್ಠಾನಗೊಳಿಸಲು ನಿರ್ದೇಶನ ನೀಡಬೇಕು. ರಾಗಿ, ಜೋಳಗಳಂತೆ ಇತರೆ ಸಿರಿಧಾನ್ಯಗಳನ್ನು (ತೃಣ ಧಾನ್ಯಗಳು) ಕನಿಷ್ಠ ಬೆಂಬಲ ಬೆಲೆ ಯೋಜನೆ ವ್ಯಾಪ್ತಿಗೆ ಸೇರ್ಪಡೆಗೊಳಿಸಬೇಕೆಂದು ಚಲುವರಾಯಸ್ವಾಮಿ ಕೇಂದ್ರ ಕೃಷಿ ಸಚಿವರಿಗೆ ಮನವಿ ಮಾಡಿದರು.

ಈ ಹಿಂದೆ ಜಾರಿಗೆ ಬಂದ ಆತ್ಮ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದೆ. ಆದರೆ ರಾಜ್ಯದಲ್ಲಿ ನಂತರ ಹೆಚ್ಚುವರಿಯಾಗಿ 59 ತಾಲೂಕುಗಳು ರಚನೆಯಾಗಿರುವುದರಿಂದ ಹೊಸದಾಗಿ 177 ಸಹಾಯಕ ತಾಂತ್ರಿಕ ನಿರ್ವಾಹಕರು ಅಗತ್ಯವಿದ್ದು, ಅದಕ್ಕೆ ಮಂಜೂರಾತಿಯೊಂದಿಗೆ ಅನುದಾನ ಒದಗಿಸುವಂತೆ ಕೋರಿದರು.

ಗುಣಮಟ್ಟ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹಾಲಿ ಇರುವ ವಿವಿಧ ಕಾಯ್ದೆಗಳಿಗೆ ತಿದ್ದುಪಡಿ ತರುವುದು, ಬೀಜ ಕಾಯ್ದೆಯಡಿ ದಂಡ ಮತ್ತು ಪರವಾನಿಗೆ ಶುಲ್ಕ ಹೆಚ್ಚಳ ಕುರಿತು ರಾಷ್ಟ್ರೀಯ ಆಹಾರ ಸುರಕ್ಷತಾ ಕಾಯ್ದೆ ಪಿ.ಎಂ.ಕೆ.ಎಸ್.ವೈ – ಪಿ.ಡಿ.ಎಂ.ಸಿ ವ್ಯವಸ್ಥೆಗಳ ಸುಧಾರಣೆಗಳ ಬಗ್ಗೆ ಗಮನ ಸೆಳೆದರು.

ಅಲ್ಲದೇ ಜಲಾನಯನ ಅಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಈಗಾಗಲೇ ವಿಶ್ವ ಬ್ಯಾಂಕ್ ನೆರವಿನೊಂದಿಗೆ 567.98 ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆ ಜಾರಿಗೊಳಿಸಿದೆ. ರಾಜ್ಯದಲ್ಲಿ ಇನ್ನೂ 59.69 ಹೆಕ್ಟೇರ್ ಪ್ರದೇಶವನ್ನು ಜಲಾನಯನ ಅಭಿವೃದ್ಧಿ ಯೋಜನೆಯ ವ್ಯಾಪ್ತಿಗೆ ಸೇರಿಸಬೇಕಾಗಿದ್ದು, ಹೊಸದಾಗಿ 92 ಯೋಜನೆಗಳ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಿದ್ದು, ಅನುಮೋದನೆ ಮತ್ತು ಅನುದಾನ ಒದಗಿಸುವಂತೆ ಸಚಿವರು ಮನವಿ ಮಾಡಿದರು.

ಕರ್ನಾಟಕದ ಕೃಷಿ ಸಚಿವರು, ಕಂದಾಯ ಸಚಿವರು ಮತ್ತು ಗ್ರಾಮೀಣಾಭಿವೃದ್ಧಿ ಸಚಿವರ ಅಭಿಪ್ರಾಯ, ಮನವಿಗಳನ್ನು ಸ್ವೀಕರಿಸಿ ಚರ್ಚೆ ನಡೆಸಿದ ನಂತರ ಮಾತನಾಡಿದ ಕೇಂದ್ರ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್​, ''ರಾಜ್ಯದ ಅಭಿವೃಧ್ಧಿಯ ದೃಷ್ಟಿಯಿಂದ ಒಟ್ಟಾಗಿ ಕಾರ್ಯ ನಿರ್ವಹಿಸೋಣ, ರಾಜ್ಯಕ್ಕೆ ಬೇಕಾದ ಎಲ್ಲಾ ರೀತಿಯ ನೆರವನ್ನು ಒದಗಿಸಲು ಕೇಂದ್ರ ಸರ್ಕಾರ ಸಿದ್ಧವಿದೆ'' ಎಂದು ತಿಳಿಸಿದರು.

ಸಚಿವರಾದ ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೂ ಸಹ ಈ ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಶೀಘ್ರವೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆ: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.