ETV Bharat / state

ಹಿಂದೂ ಮಹಾಗಣಪತಿ ನಿಮಜ್ಜನ ಮಹೋತ್ಸವ ಉದ್ಘಾಟಿಸಿದ ಕೇಂದ್ರ ಸಚಿವ ವಿ ಸೋಮಣ್ಣ - Hindu Maha Ganapathi Nimajjana - HINDU MAHA GANAPATHI NIMAJJANA

ತುಮಕೂರು ನಗರದ ಟೌನ್​ಹಾಲ್​​ ವೃತ್ತದಲ್ಲಿ ಆರಂಭವಾದ ಹಿಂದೂ ಮಹಾಗಣಪತಿ ನಿಮಜ್ಜನ ಮಹೋತ್ಸವವನ್ನು ಕೇಂದ್ರ ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಡಮರುಗ ಬಾರಿಸುವ ಮೂಲಕ ಉದ್ಘಾಟಿಸಿದ್ದಾರೆ.

Union Minister V Somanna
ಕೇಂದ್ರ ಸಚಿವ ವಿ ಸೋಮಣ್ಣ (ETV Bharat)
author img

By ETV Bharat Karnataka Team

Published : Sep 21, 2024, 4:56 PM IST

Updated : Sep 21, 2024, 5:53 PM IST

ತುಮಕೂರು : ನಗರದಲ್ಲಿ ನಡೆಯುತ್ತಿರುವ ಹಿಂದೂ ಮಹಾಗಣಪತಿ ನಿಮಜ್ಜನ ಮಹೋತ್ಸವವನ್ನು ಕೇಂದ್ರ ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಂದು ಉದ್ಘಾಟಿಸಿದರು. ನಗರದ ಟೌನ್ ಹಾಲ್ ವೃತ್ತದಲ್ಲಿ ಆರಂಭವಾದ ಮಹೋತ್ಸವವನ್ನು ಸಚಿವ ವಿ ಸೋಮಣ್ಣ ಡಮರುಗ ಬಾರಿಸುವ ಮೂಲಕ ಉದ್ಘಾಟಿಸಿದರು.

ತುಮಕೂರಿನಲ್ಲಿ ಹಿಂದೂ ಮಹಾಗಣಪತಿ ನಿಮಜ್ಜನ ಮೆರವಣಿಗೆಗೆ ಚಾಲನೆ ನೀಡಲಾಗಿದ್ದು, ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ವತಿಯಿಂದ ಗಣಪತಿಯನ್ನ ಪ್ರತಿಷ್ಟಾಪಿಸಲಾಗಿದೆ. ತುಮಕೂರಿನ ಬಿಜಿಎಸ್ ವೃತ್ತದ ನಾಗರಕಟ್ಟೆ ಗಣಪತಿ ದೇವಸ್ಥಾನದಲ್ಲಿ ಪ್ರತಿಷ್ಟಾಪನೆ ಮಾಡಿರುವ ಹಿಂದೂ ಮಹಾಗಣಪತಿಯಾಗಿದೆ.

ಹಿಂದೂ ಮಹಾಗಣಪತಿ ನಿಮಜ್ಜನ ಮಹೋತ್ಸವ ಉದ್ಘಾಟಿಸಿದ ಕೇಂದ್ರ ಸಚಿವ ವಿ ಸೋಮಣ್ಣ (ETV Bharat)

ಬಾಂಬೆ ಡೋಲ್, ಡಿಜೆ ಸೇರಿದಂತೆ ವಿವಿಧ ಕಲಾತಂಡಗಳು ಮೆರವಣಿಗೆಗೆ ಮೆರಗು ನೀಡಿವೆ. ಮೆರವಣಿಗೆಯಲ್ಲಿ ರಾರಾಜಿಸುತ್ತಿರುವ ಶ್ರೀರಾಮ, ಆಂಜನೇಯ, ಭಾರತ ಮಾತೆ, ನಂದಿ ಸೇರಿದಂತೆ ಹಲವು ಕಟೌಟ್​ಗಳನ್ನು ಹಾಕಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಜನರು ಭಾಗಿಯಾಗಿದ್ದಾರೆ.

ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ರಾತ್ರಿ ‌10 ಗಂಟೆವರೆಗೂ ನಡೆಯಲಿರುವ ಮೆರವಣಿಗೆ ಉದ್ಧಕ್ಕೂ ತುಮಕೂರು ಎಸ್​ಪಿ ಅಶೋಕ್ ವೆಂಕಟ್ ನೇತೃತ್ವದಲ್ಲಿ ಭಾರಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಸಾವಿರಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಬಂದೋಬಸ್ತ್ ಹಾಕಲಾಗಿದೆ. ಆಯಕಟ್ಟಿನ ಜಾಗಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗಿದ್ದು, ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ಭಾವೈಕ್ಯತೆ ಮೆರೆದ ಮುಸ್ಲಿಂ ಬಾಂಧವರು : ನಗರದ ಜೋಡಿ ಮಜಾರ್ ಎದುರು ದರ್ಗಾ ಎದುರಿನಿಂದ ಸಾಗುತ್ತಿದ್ದ ಮೆರವಣಿಗೆ ವೇಳೆ ಗಣೇಶನಿಗೆ ಹಾರ ಹಾಕಿ, ವಿಶೇಷ ಪೂಜೆಯನ್ನು ಮುಸ್ಲಿಂ ಬಾಂಧವರು ಸಲ್ಲಿಸಿದರು. ಹಜರತ್ ಹುಸೇನ್ ಭಾಷಾ ಖಾದ್ರಿ ದರ್ಗಾ ಎದುರು ವಿಶೇಷ ಪೂಜೆ ಮಾಡಲಾಯಿತು.

ತುಮಕೂರು ವಿವಿ ವಿದ್ಯಾರ್ಥಿಗಳಿಗೆ ನಿರ್ಬಂಧ: ಇಂದು ತುಮಕೂರು ನಗರದಲ್ಲಿ ಹಿಂದೂ ಮಹಾಗಣಪತಿ ನಿಮಜ್ಜನ ಮಹೋತ್ಸವ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಕೋಮು ಪ್ರಚೋದನೆಯಿಂದ ಗಲಾಟೆ ನಡೆಯುವ ಸಾಧ್ಯತೆಯಿದೆ. ಶಾಲಾ ಕಾಲೇಜಿನ ಮಕ್ಕಳು ಯಾರ ಒತ್ತಡಕ್ಕೂ ಒಳಗಾಗಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತಿಲ್ಲ.‌ ಈ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ವಿವಿಯ ಹೆಚ್ಒಡಿಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ತುಮಕೂರು ವಿವಿ ಕುಲಸಚಿವರು ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಪೊಲೀಸರು ತುಮಕೂರು ವಿವಿಗೆ ಪತ್ರ ಬರೆದಿದ್ದಾರೆ. ತುಮಕೂರು ನಗರ ಠಾಣೆ ಪೊಲೀಸರು ಕುಲ ಸಚಿವರಿಗೆ ಪತ್ರ ಬರೆದಿದ್ದಾರೆ.

ಪೊಲೀಸರಿಂದ ವಿವಿ ಕುಲಸಚಿವರಿಗೆ ಪತ್ರ : ಜೊತೆಗೆ ಶಾಲಾ ಕಾಲೇಜು ಮಕ್ಕಳನ್ನು ಒತ್ತಾಯ ಪೂರ್ವಕವಾಗಿ ಮೆರವಣಿಗೆಗೆ ಕರೆತರುವ ಸಾಧ್ಯತೆಯಿದೆ. ಇದಕ್ಕೆ ಆಸ್ಪದ ಕೊಡದಂತೆ ಎಚ್ಚರಿಕೆ ವಹಿಸುವಂತೆ ವಿವಿ ಕುಲಸಚಿವರಿಗೆ ಪೊಲೀಸರು ಪತ್ರ ಬರೆದಿದ್ದಾರೆ. ಪೊಲೀಸರ ಪತ್ರದ ಆಧಾರದ ಮೇಲೆ ಕುಲಸಚಿವರು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ : ಶಿವಮೊಗ್ಗ: ಹಿಂದೂ ಮಹಾಮಂಡಳ ಗಣಪನ ಅದ್ಧೂರಿ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ - Shimogga ganesh procession

Last Updated : Sep 21, 2024, 5:53 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.