ETV Bharat / state

ಹಾವೇರಿ: ಬಸವರಾಜ ಬೊಮ್ಮಾಯಿ ಎದುರೇ ಬಿಜೆಪಿ ಕಾರ್ಯಕರ್ತರ ನಡುವೆ ಗದ್ದಲ

ಹಾವೇರಿ ಬಿಜೆಪಿ ಕಚೇರಿಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದಂತೆ ಕಾರ್ಯಕರ್ತರ ನಡುವೆ ಗಲಾಟೆ ಭುಗಿಲೆದ್ದ ಘಟನೆ ನಡೆದಿದೆ.

uproar-between-bjp-workers-infront-of-basavaraj-bommai-in-haveri-bjp-office
ಹಾವೇರಿ: ಬಸವರಾಜ ಬೊಮ್ಮಾಯಿ ಎದುರೇ ಬಿಜೆಪಿ ಕಾರ್ಯಕರ್ತರ ನಡುವೆ ಗದ್ದಲ - ಗಲಾಟೆ
author img

By ETV Bharat Karnataka Team

Published : Mar 15, 2024, 8:27 PM IST

Updated : Mar 15, 2024, 11:01 PM IST

ಹಾವೇರಿ: ಬಸವರಾಜ ಬೊಮ್ಮಾಯಿ ಎದುರೇ ಬಿಜೆಪಿ ಕಾರ್ಯಕರ್ತರ ನಡುವೆ ಗದ್ದಲ

ಹಾವೇರಿ: ಲೋಕಸಭಾ ಟಿಕೆಟ್ ಸಿಕ್ಕ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ​ ಹಾವೇರಿ ಜಿಲ್ಲಾ ಬಿಜೆಪಿ ಕಚೇರಿಗೆ ಆಗಮಿಸಿದರು. ಬೊಮ್ಮಾಯಿ ಕಚೇರಿಗೆ ಆಗಮಿಸುತ್ತಿದ್ದಂತೆ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಆಯ್ಕೆ ವಿಚಾರವಾಗಿ ಅಸಮಾಧಾನಗೊಂಡಿದ್ದ
ಕಾರ್ಯಕರ್ತರು ಗದ್ದಲ ಸೃಷ್ಟಿಸಿದ್ದಾರೆ.

ಹಾವೇರಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಅವರ ಶರ್ಟ್​ ಹಿಡಿದು ಎಳದಾಡಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷರನ್ನಾಗಿ ವೆಂಕಟೇಶ್ ನಾರಾಯಣಿ ಅವರನ್ನು ಆಯ್ಕೆ ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿದರು. ನಗರ ಕಾರ್ಯಕರ್ತರನ್ನು ಗ್ರಾಮೀಣ ಭಾಗದ ಅಧ್ಯಕ್ಷರಾಗಿ ಮಾಡಿದ್ದಕ್ಕೆ ಆಕ್ರೋಶ ಹೊರಹಾಕಿದ ಕಾರ್ಯಕರ್ತರು, ಗ್ರಾಮೀಣ ಭಾಗದವರನ್ನೇ ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದರು. ಕಾರ್ಯಕರ್ತರ ಗಲಾಟೆಯಿಂದ ಬೇಸರಗೊಂಡ ಬೊಮ್ಮಾಯಿ ಕಾರ್ಯಕ್ರಮವನ್ನು ಮೊಟಕುಗೊಳಿಸಿ, ಅಲ್ಲಿಂದ ಹೊರಟು ಹೋಗಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಅರುಣ್ ಕುಮಾರ್ ಪುತ್ತಿಲ ಮರಳಿಗೂಡಿಗೆ: ಬಂಡಾಯ ಶಮನ

Last Updated : Mar 15, 2024, 11:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.