ETV Bharat / state

ಸರ್ವೇ ಇಲಾಖೆಯಲ್ಲಿ ಸಂಪೂರ್ಣ ತಂತ್ರಜ್ಞಾನ ಬಳಕೆ: ರಾಜ್ಯದ ಎಲ್ಲಾ ಭೂಮಾಪಕರಿಗೂ ರೋವರ್ ನೀಡುವ ಗುರಿ - TECHNOLOGY USE IN SURVEY DEPARTMENT

ಸರ್ವೇ ಕೆಲಸವನ್ನು ತಾಂತ್ರಿಕಗೊಳಿಸದೆ ಕೆಲಸ ಮಾಡೋಕೆ ಜನ ಇದ್ದಾರೆ ಎಂದು ಉಡಾಫೆಯಿಂದ ನೌಕರರ ಮೇಲೆ ಹೊರೆ ಹಾಕುವುದು ಅಮಾನವೀಯ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ ನಡವಳಿಕೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

use of technology in the Survey Department and providing a rover to surveyors
ಭೂಮಾಪಕರಿಗೆ ಆಧುನಿಕ ತಂತ್ರಜ್ಞಾನಾಧಾರಿತ ರೋವರ್ ವಿತರಣೆ ಕಾರ್ಯಕ್ರಮ (ETV Bharat)
author img

By ETV Bharat Karnataka Team

Published : Feb 19, 2025, 9:20 PM IST

ಬೆಂಗಳೂರು: "ಆಧುನಿಕ ಕಂಪ್ಯೂಟರ್ ಜಗತ್ತಿನಲ್ಲೂ ಸಹ ಸರ್ವೇ ಕೆಲಸವನ್ನು ತಾಂತ್ರಿಕಗೊಳಿಸದೆ ಜನರ ಮೇಲೆ ಹೊರೆ ಹಾಕುವುದು ಅಮಾನವೀಯ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ ನಡವಳಿಕೆ" ಎಂದು ಸಚಿವ ಕೃಷ್ಣ ಬೈರೇಗೌಡ ಅಭಿಪ್ರಾಯಪಟ್ಟಿದ್ದಾರೆ.

ಸರ್ವೇ ಆಯುಕ್ತರ ಕಚೇರಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ 465 ಜನ ಭೂಮಾಪಕರಿಗೆ ಆಧುನಿಕ ತಂತ್ರಜ್ಞಾನಾಧಾರಿತ ರೋವರ್ ನೀಡಿ ಅವರು ಮಾತನಾಡಿದರು.

"ಸರ್ವೇ ಕೆಲಸವನ್ನು ಹಿಂದಿನಿಂದಲೂ ಚೈನ್ ಹಿಡಿದೇ ಭೂಮಿಯನ್ನು ಅಳೆಯುವ ಸಂಪ್ರದಾಯ ಚಾಲ್ತಿಯಲ್ಲಿದೆ. ಬಿಸಿಲಿನಲ್ಲಿ ಸರ್ವೇಯರ್ ಜೊತೆಗೆ ಇಬ್ಬರು ಸಹಾಯಕರೂ ಕೆಲಸ ಮಾಡಬೇಕಿತ್ತು. ಸರ್ವೇ ಮಾಡಲು ಕನಿಷ್ಠ 70 ನಿಮಿಷ, ಅದನ್ನು ನಕ್ಷೆ ಮಾಡಲು 3 ಗಂಟೆ ಸಮಯ ವ್ಯರ್ಥವಾಗುತ್ತಿತ್ತು. ಆದರೆ, ಆಧುನಿಕ ತಂತ್ರಜ್ಞಾನ ಆಧಾರಿತ ರೋವರ್ ಈ ಕೆಲಸವನ್ನು ಕೇವಲ 10 ನಿಮಿಷಕ್ಕೆ ಮುಗಿಸಲಿದೆ" ಎಂದರು.

use of technology in the Survey Department and providing a rover to surveyors
ಭೂಮಾಪಕರಿಗೆ ಆಧುನಿಕ ತಂತ್ರಜ್ಞಾನಾಧಾರಿತ ರೋವರ್ ವಿತರಣೆ ಕಾರ್ಯಕ್ರಮ (ETV Bharat)

"ರಾಜ್ಯದಲ್ಲಿ 1830ರಿಂದ 1870ರವರೆಗೆ ಮಾತ್ರ ಸರ್ವೇ ಕೆಲಸವಾಗಿದೆ. 1967ರಲ್ಲಿ ಅಲ್ಪ-ಸಲ್ಪ ರೀ ಸರ್ವೇ ಆಗಿದೆಂಬುದನ್ನ ಬಿಟ್ಟರೆ ಉಳಿದಂತೆ ಸರ್ವೇ ಆಗಿಲ್ಲ. ಆದರೆ, ಪ್ರಸ್ತುತ ರೈತರ ನಾನಾ ಸಮಸ್ಯೆಗಳಿಗೆ ಸರ್ವೇ ಹಾಗೂ ರೀ ಸರ್ವೇ ಕೆಲಸಗಳಿಗೆ ವೇಗ ತುಂಬುವ ಅಗತ್ಯವಿದೆ. ಆದರೆ, ಬಹುಶಃ ಕ್ರಿ.ಶ.1806ರಿಂದಲೂ ಸರ್ವೇ ಕೆಲಸಗಳಿಗೆ ಬಳಸಿದ ಚೈನ್ ವ್ಯವಸ್ಥೆ ಈಗಲೂ ಮುಂದುವರೆಯುತ್ತಿರುವುದು ಆಘಾತಕಾರಿ" ಎಂದು ಕಳವಳ ವ್ಯಕ್ತಪಡಿಸಿದರು.

"ಕಳೆದ 200 ವರ್ಷದಲ್ಲಿ ಪ್ರಪಂಚ ಇಷ್ಟು ಬದಲಾದರೂ ನಮ್ಮ ವಿಧಿ-ವಿಧಾನ ಹಾಗೆ ಇದೆ. ಪ್ರಪಂಚದ ಮುಖ ಅಂತರಾಳ ಬದಲಾದರೂ, ಇಲಾಖೆ ಕೆಲಸ ಮಾಡುವ ರೀತಿ ನೀತಿ ಮಾತ್ರ ಬದಲಾಗಿಲ್ಲ. ಆದರೆ, ಸರ್ವೇ ಕೆಲಸವನ್ನು ತಾಂತ್ರಿಕಗೊಳಿಸದೆ ಕೆಲಸ ಮಾಡೋಕೆ ಜನ ಇದ್ದಾರೆ ಎಂದು ಉಡಾಫೆಯಿಂದ ನೌಕರರ ಮೇಲೆ ಹೊರೆ ಹಾಕುವುದು ಅಮಾನವೀಯ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ ನಡವಳಿಕೆ" ಎಂದು ಅಭಿಪ್ರಾಯಪಟ್ಟರು.

"ಚೈನ್ ಸರ್ವೇ ಕೆಲಸದಲ್ಲಿ ಕೆಲವರು ತಮ್ಮ ಹಿತಾಸಕ್ತಿಗೆ ಅನುಗುಣವಾಗಿ ಸರ್ವೇಯಲ್ಲಿ ಬದಲಾವಣೆ ಮಾಡಬಹುದು. ಇದರಿಂದ ಹಲವರು ಇಂದಿಗೂ ಕೋರ್ಟ್​, ಕಚೇರಿಗೆ ಅಲೆಯುವಂತಾಗಿದೆ. ಆದರೆ, ರೋವರ್ ಸರ್ವೇಯಲ್ಲಿ ಇಂತಹ ಅಕ್ರಮಗಳಿಗೆ ಆಸ್ಪದ ಇರುವುದಿಲ್ಲ. ಹೀಗಾಗಿ ಇಲಾಖೆಯಲ್ಲಿ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಜನರಿಗೆ ತ್ವರಿತ ಸರ್ವೇ ಮಾಡಿಕೊಡುವುದು ಹಾಗೂ ಅಧಿಕಾರಿಗಳಿಗೆ ಕೆಲಸದ ಒತ್ತಡ ಕಡಿಮೆ ಮಾಡುವುದು ನಮ್ಮ ಉದ್ದೇಶವಾಗಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ಭೂ ಮಾಪಕರಿಗೂ ಒಂದು ರೋವರ್ ನೀಡುವುದು ನಮ್ಮ ಗುರಿ" ಎಂದು ತಿಳಿಸಿದರು.

ಇದನ್ನೂ ಓದಿ: ಸರ್ಕಾರಿ ಜಮೀನು ಕಬಳಿಸಿರುವ ಆರೋಪ : ಕೇಂದ್ರ ಸಚಿವ ಹೆಚ್​​​.ಡಿ. ಕುಮಾರಸ್ವಾಮಿ ಜಮೀನು ಸರ್ವೇ ಕಾರ್ಯ

ಇದನ್ನೂ ಓದಿ: ನನ್ನನ್ನು ಟಾರ್ಗೆಟ್ ಮಾಡಿ ಸರ್ವೇ ಮಾಡಿಸುತ್ತಿದ್ದಾರೆ; ಇದರಲ್ಲಿ ಸಂಶಯವೇ ಬೇಡ, ಯಾವುದೇ ತನಿಖೆಗೂ ರೆಡಿ: ಕುಮಾರಸ್ವಾಮಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.