ETV Bharat / state

ಅವಿವಾಹಿತರಿಗೆ ಮದುವೆ ಭಾಗ್ಯ: ಉತ್ತರಕನ್ನಡದಲ್ಲಿ 'ಜೀವನ ಸಂಗಮ' ಪೋರ್ಟಲ್ ಆರಂಭ - Jeevana Sangama Portal

ವಿವಾಹ ಬಯಸುವ ಯುವಕ - ಯುವತಿಯರಿಗೆ ನೆರವಾಗುವ ಉದ್ದೇಶದಿಂದ ಉತ್ತರ ಕನ್ನಡ ಜಿಲ್ಲಾಡಳಿತವು ವಿನೂತನ ವೇದಿಕೆ ಕಲ್ಪಿಸುತ್ತಿದೆ.

author img

By ETV Bharat Karnataka Team

Published : Jul 6, 2024, 6:04 PM IST

portal for marriage
ಸಾಂದರ್ಭಿಕ ಚಿತ್ರ (Etv Bharat)

ಕಾರವಾರ: ಇತ್ತೀಚೆಗೆ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಯುವ ರೈತರೊಬ್ಬರು ತಮಗೆ ಮದುವೆಯಾಗಲು ಕನ್ಯೆ ಹುಡುಕಿಕೊಡುವಂತೆ ಅರ್ಜಿ ಸಲ್ಲಿಸಿರುವ ವಿಷಯ ವ್ಯಾಪಕವಾಗಿ ಸುದ್ದಿಯಾಗಿತ್ತು. ರೈತರು ವಿವಾಹವಾಗಲು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಮಾಜದ ಕಣ್ತೆರೆಸಿತ್ತು. ಇದಕ್ಕೆ ಪರಿಹಾರವೆಂಬಂತೆ ರಾಜ್ಯದಲ್ಲೇ ಪ್ರಥಮ ಬಾರಿಗೆ ಜಿಲ್ಲಾಡಳಿತದ ಮೂಲಕ ರೈತ ಯುವಕರು ಮಾತ್ರವಲ್ಲದೇ, ವಿಕಲಚೇತನರು, ಹೆಚ್​ಐವಿ ಪೀಡಿತರಿಗೆ ವಿವಾಹವಾಗಲು ಸೂಕ್ತ ವೇದಿಕೆ ಒದಗಿಸುವ ವಿನೂತನ ಪ್ರಯತ್ನಕ್ಕೆ ಉತ್ತರ ಕನ್ನಡ ಜಿಲ್ಲಾಡಳಿತ ಮುಂದಾಗಿದೆ.

ಉತ್ತರಕನ್ನಡ ಜಿಲ್ಲಾಡಳಿತದ ವೆಬ್​​ಸೈಟ್ https://uttarakannada.nic.in/ನಲ್ಲಿ 'ಜೀವನ ಸಂಗಮ' ಎಂಬ ಪೋರ್ಟಲ್ ಅನ್ನು ಆರಂಭಿಸಲಾಗಿದೆ. ಜಿಲ್ಲೆಯಲ್ಲಿನ ಯುವ ರೈತರು, ವಿಕಲಚೇತನರು ಹಾಗೂ ವಿಧವೆಯರಿಗೆ ಸೂಕ್ತ ಸಂಗಾತಿಯ ಆಯ್ಕೆಯನ್ನು ಪರಿಚಯಿಸಲು ಹಾಗೂ ಹೆಚ್​ಐವಿ ಪೀಡಿತ ವ್ಯಕ್ತಿಗಳಿಗೆ ಅದೇ ಸಮುದಾಯದ ವ್ಯಕ್ತಿಯ ನಡುವೆ ವೈವಾಹಿಕ ಸಂಬಂಧಗಳನ್ನು ಬೆಸೆದು, ಅವರು ವಿವಾಹವಾಗಲು ವೇದಿಕೆ ಸಿಗಲಿದೆ. ಈ ಮೂಲಕ ಅವರ ಬದುಕಿನಲ್ಲಿ ಸುಗಮ, ಅರ್ಥಪೂರ್ಣ ಸಂಬಂಧಗಳು ಏರ್ಪಡುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತಿದೆ.

ನೋಂದಣಿಗೆ ಶುಲ್ಕವಿಲ್ಲ: ಜೀವನ ಸಂಗಮ ಪೋರ್ಟಲ್​ಗೆ ಅರ್ಜಿ ಸಲ್ಲಿಸುವ ಎಲ್ಲ ಅರ್ಹ ಬಳಕೆದಾರರಿಗೆ ಅವರ ವಿವಾಹ ಸಂಬಂಧಗಳಲ್ಲಿ ಸುರಕ್ಷಿತ ಮತ್ತು ಗೌರವಾನ್ವಿತ ವಾತಾವರಣವನ್ನು ಖಾತ್ರಿಪಡಿಸುವ ಜೊತೆಗೆ, ವ್ಯಕ್ತಿಯ ಹಿನ್ನೆಲೆಯನ್ನು ಲೆಕ್ಕಿಸದೆ, ಸಂಬಂಧಗಳನ್ನು ಬಯಸುವ ವ್ಯಕ್ತಿಗಳಿಗೆ ಸೇತುವೆಯಾಗಿ ಕಾರ್ಯನಿರ್ವಹಿಸಲಿದೆ. ಈ ಪೋರ್ಟಲ್ ಸೇವೆ ಪಡೆಯಲು ಬಳಕೆದಾರರು ಯಾವುದೇ ಶುಲ್ಕಗಳಿಲ್ಲದೇ ನೋಂದಾಯಿಸಿಕೊಳ್ಳಬಹುದು. ಆರ್ಥಿಕವಾಗಿ ಹಿಂದುಳಿದ ವರ್ಗದವರೂ ಒಳಗೊಂಡಂತೆ, ಶಿಕ್ಷಣದ ಕೊರತೆ ಮತ್ತು ಯಾವುದೇ ಉದ್ಯೋಗವಿಲ್ಲದ ಕಾರಣ ಸೂಕ್ತ ಜೀವನ ಸಂಗಾತಿ ಸಿಗದ ರೈತ ಯುವಕರಿಗೆ ಉತ್ತಮ ವೇದಿಕೆ ಒದಗಿಸಲಿದೆ.

ಇದು ಎಲ್ಲ ಬಳಕೆದಾರರಿಗೆ ಅತ್ಯಂತ ಸುರಕ್ಷಿತ ಪೋರ್ಟಲ್ ಆಗಿದ್ದು, ಹೊಂದಾಣಿಕೆಯ ಪ್ರಕ್ರಿಯೆಯಲ್ಲಿ ಎಲ್ಲರ ಗೌಪ್ಯತೆ ಮತ್ತು ಘನತೆಗೆ ಆದ್ಯತೆ ನೀಡಲಾಗಿದೆ. ವಿವಾಹ ಹೊಂದಾಣಿಕೆಯ ಉದ್ದೇಶಕ್ಕಾಗಿ ಮಾತ್ರ ಮಾಹಿತಿಯನ್ನು ಬಳಸಲಾಗುತ್ತದೆ. ವಿವಾಹವಾಗಲು ಸಲ್ಲಿಸುವ ಅರ್ಜಿ ಮತ್ತು ಪ್ರೊಫೈಲ್​ಗಳನ್ನು ವ್ಯಕ್ತಿಯು ವಾಸವಾಗಿರುವ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಸೇರಿದಂತೆ ಉತ್ತರ ಕನ್ನಡ ಜಿಲ್ಲಾಡಳಿತದ ವಿವಿಧ ಅಧಿಕಾರಿಗಳು ಪರಿಶೀಲಿಸಲಿದ್ದಾರೆ. ಅರ್ಜಿದಾರರ ಪ್ರೊಫೈಲ್​ಗಳಲ್ಲಿನ ನೈಜತೆ ಮತ್ತು ವಿಶ್ವಾಸಾರ್ಹತೆಯನ್ನು ಅವರು ಖಚಿತಪಡಿಸುತ್ತಾರೆ.

ವಿವಾಹವಾಗಲು ಅರ್ಜಿ ಸಲ್ಲಿಸುವ ವ್ಯಕ್ತಿಯ ಹಿನ್ನೆಲೆ, ವಾಸಸ್ಥಳ, ಉದ್ಯೋಗ, ಕೌಟುಂಬಿಕ ಪರಿಸ್ಥಿತಿ, ಆತನ ಆದಾಯ, ಮಾನಸಿಕ ಮತ್ತು ದೈಹಿಕ ಆರೋಗ್ಯ ಸ್ಥಿತಿಗತಿ ಬಗ್ಗೆ ಜಿಲ್ಲೆಯ ವಿವಿಧ ಅಧಿಕಾರಿಗಳು ಖುದ್ದು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಲಿದ್ದಾರೆ. ಅರ್ಹ ವ್ಯಕ್ತಿಗಳಿಗೆ ಮಾತ್ರ ಹೊಂದಾಣಿಕೆಯ ಮುಂದಿನ ಪ್ರಕ್ರಿಯೆಯಲ್ಲಿ ಮುಂದುವರೆಯಲು ಅವಕಾಶ ನೀಡಲಾಗುತ್ತದೆ.

ಉತ್ತರ ಕನ್ನಡದವರಿಗೆ ಮಾತ್ರ: ಈ ಸೇವೆಯು ಎಲ್ಲ ಧರ್ಮದವರಿಗೂ ಮುಕ್ತವಾಗಿದ್ದು, ಸಾರ್ವಜನಿಕರು ತಮ್ಮ ಧಾರ್ಮಿಕ ಅದ್ಯತೆಗಳನ್ನು ಮ್ಯಾಚ್ ಮೇಕಿಂಗ್‌ಗೆ ನಿರ್ದಿಷ್ಟಪಡಿಸಲು ಅವಕಾಶ ನೀಡುವುದರ ಜೊತೆಗೆ, ತಮ್ಮದೇ ಆದ ಜಾತಿಯೊಳಗೆ ಹೊಂದಾಣಿಕೆಗಳನ್ನು ಆಯ್ಕೆ ಮಾಡಬಹುದು. ಜೊತೆಗೆ, ಅಂತರ್ಜಾತಿ ಆಯ್ಕೆಗಳಿಗೂ ಅವಕಾಶವಿದ್ದು, ವೈಯಕ್ತಿಕ ಆದ್ಯತೆಗಳ ಆಧಾರದ ಮೇಲೆ ತಮಗೆ ಇಚ್ಚಿಸುವ ಹೊಂದಾಣಿಕೆಯನ್ನು ಆಯ್ಕೆ ಮಾಡಬಹುದು. ಉತ್ತರ ಕನ್ನಡ ಜಿಲ್ಲೆಯ ಸ್ಥಳೀಯ ಅರ್ಹ ಯುವಕ - ಯುವತಿಯರಿಗೆ ಮಾತ್ರ ಈ ವಿವಾಹ ಹೊಂದಾಣಿಕೆಗೆ ಅವಕಾಶವಿದೆ.

ಅಂತರ್ಜಾತಿ ಮತ್ತು ವಿಕಲಚೇತನರನ್ನು ವಿವಾಹವಾಗುವವರಿಗೆ ಸರ್ಕಾರದಿಂದ ದೊರೆಯುವ ಪ್ರೋತ್ಸಾಹ ಧನ ಸೇರಿದಂತೆ ಎಲ್ಲ ರೀತಿಯ ನೆರವು ಒದಗಿಸಲಾಗುವುದು. 10ಕ್ಕಿಂತ ಹೆಚ್ಚು ಜೋಡಿಗಳು ಒಪ್ಪಿಗೆ ನೀಡಿದಲ್ಲಿ ವಿವಿಧ ಸಂಘ - ಸಂಸ್ಥೆಗಳ ನೆರವಿನಿಂದ ಸಾಮೂಹಿಕ ವಿವಾಹ ಏರ್ಪಡಿಸುವ ಚಿಂತನೆ ಇದೆ. ಜಿಲ್ಲೆಯ ಅನಾಥಾಶ್ರಮಗಳಲ್ಲಿನ ಯುವತಿಯರಿಗೂ ಸಹ ಈ ಪೋರ್ಟಲ್ ಮೂಲಕ ಸೂಕ್ತ ಜೀವನ ಸಂಗಾತಿ ಒದಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಹೊಸ ಕಾನೂನುಗಳ ಬಗ್ಗೆ ಮಾಹಿತಿ ನೀಡುವ 'ಸಂಚಯ' ಮೊಬೈಲ್ ಆ್ಯಪ್ ಬಿಡುಗಡೆ - Sanchaya Mobile App

ETV Bharat Logo

Copyright © 2024 Ushodaya Enterprises Pvt. Ltd., All Rights Reserved.