ETV Bharat / state

ವೈಷ್ಣೋದೇವಿ ದೇವಸ್ಥಾನದ ಧರ್ಮದರ್ಶಿ ದೇವೇಂದ್ರಪ್ಪ ಹತ್ಯೆ ಪ್ರಕರಣ: ಆರೋಪಿ ಬಂಧನ - Hubballi Murder Case - HUBBALLI MURDER CASE

ದೇವಸ್ಥಾನದ ಧರ್ಮದರ್ಶಿಯ ಹತ್ಯೆ ಮಾಡಿರುವ ಆರೋಪಿಯೊಬ್ಬನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

HUBBALLI MURDER CASE
ಬಂಧಿತ ಆರೋಪಿ (ETV Bharat)
author img

By ETV Bharat Karnataka Team

Published : Jul 23, 2024, 8:46 PM IST

ಹು-ಧಾ ಮಹಾನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ (ETV Bharat)

ಹುಬ್ಬಳ್ಳಿ: ನಗರದ ದಕ್ಷಿಣ ವೈಷ್ಣೋದೇವಿ ದೇವಸ್ಥಾನದ ಧರ್ಮದರ್ಶಿ ದೇವೇಂದ್ರಪ್ಪ ವನಹಳ್ಳಿ (ದೇವಪ್ಪಜ್ಜಾ) ಕೊಲೆ ಮಾಡಿರುವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವುದಾಗಿ ಹು-ಧಾ ಮಹಾನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದರು.

ಕಮರಿಪೇಟೆ ನಿವಾಸಿ ಸಂತೋಷ್ ತಿಪ್ಪಣ್ಣಾ ಬೋಜಗಾರ (44) ಬಂಧಿತ ವ್ಯಕ್ತಿಯಾಗಿದ್ದು, ದೂರು ದಾಖಲಾದ 24 ಗಂಟೆಯಲ್ಲಿ ಆರೋಪಿಯನ್ನು ಚೆನ್ನಮ್ಮ ವೃತ್ತದಲ್ಲಿ ಬಂಧಿಸಿರುವುದಾಗಿ ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

ಮಾಟ-ಮಂತ್ರ, ವಶೀಕರಣವೇ ಹತ್ಯೆಗೆ ಕಾರಣ ಎಂಬುವುದು ತನಿಖೆ ವೇಳೆ ತಿಳಿದು ಬಂದಿದೆ. ಈ ಹಿಂದೆಯು ದೇವೇಂದ್ರಪ್ಪನ ಹತ್ಯೆಗೆ ಯತ್ನ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 2022ರಲ್ಲಿ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಕೃತ್ಯವೂ ಸಹ ತಾನೇ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿರುವುದಾಗಿ ಶಶಿಕುಮಾರ್ ತಿಳಿಸಿದರು.‌

ಆರೋಪಿಯ ಕೆಲ ಸಂಬಂಧಿಕರು ಕೊಲೆಯಾದ ವ್ಯಕ್ತಿಯೊಂದಿಗೆ ಸೇರಿಕೊಂಡು ಆರೋಪಿತನಿಗೆ ಹಾಗೂ ಆತನ ಕುಟುಂಬದವರಿಗೆ ಕೆಲವು ಪೂಜೆಗಳನ್ನು ಮಾಡಿಸುವ ಮೂಲಕ ನಮ್ಮ ಕುಟುಂಬಕ್ಕೆ ಹಾನಿ ಉಂಟು ಮಾಡಿದ್ದಾರೆ ಎಂಬುದನ್ನು ಈತ ನಂಬಿದ್ದ. ಹಾಗಾಗಿ ದೇವೇಂದ್ರಪ್ಪನನ್ನು ಕೊಲೆ ಮಾಡಬೇಕೆಂದು ಕಳೆದ ಆರೂವರೆ ವರ್ಷದಿಂದ ಹೊಂಚು ಹಾಕಿಕೊಂಡು ಕೊಲೆ ಮಾಡಿರುವುದಾಗಿ ಆರೋಪಿಯು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ ಎಂದು ಅವರು ತಿಳಿಸಿದರು.

ದೂರು ದಾಖಲಾದ 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಅದಕ್ಕೂ ಮುನ್ನ 180ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾ ಪರಿಶೀಲಿಸಲಾಗಿದೆ. ಆರೋಪಿಯ ಗುರುತು ಪತ್ತೆ ಹಚ್ಚಿ ಸಂಶಯಾಸ್ಪದ ವ್ಯಕ್ತಿಯ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದೆವು. ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಚೆನ್ನಮ್ಮ ಸರ್ಕಲ್ ಸುತ್ತಮುತ್ತಲಿನಲ್ಲಿ ಆರೋಪಿ ಓಡಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಬಂಧಿಸಲಾಗಿದೆ ಶಶಿಕುಮಾರ್ ತಿಳಿಸಿದರು.‌

ಡಿಸಿಪಿ ಮಹಾನಿಂಗ ನಂದಗಾವಿ, ಅಪರಾಧ ವಿಭಾಗದ ಡಿಸಿಪಿ ರವೀಶ್ ಎಸ್, ನವನಗರ ಠಾಣೆಯ ಇನ್ಸ್​ಪೆಕ್ಟರ್​ ಸಮ್ಮಿವುಲ್ಲಾ ಹಾಗೂ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆಯಿಂದ ಪ್ರಕರಣ ಬೇಧಿಸಲಾಗಿದೆ. ತ್ವರಿತ ಕಾರ್ಯವನ್ನು ಪ್ರಶಂಸಿಸಿ 50 ಸಾವಿರ ಬಹುಮಾನ ಘೋಷಣೆ ಮಾಡಲಾಗಿದೆ ಎಂದರು. ಬಂಧನಕೂ‌ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಪಿ, ಕೊಲೆಗೆ ಕಾರಣ ತಿಳಿಸಿದ್ದಾನೆ.

ಇದನ್ನೂ ಓದಿ: ಧಾರವಾಡದಲ್ಲಿ ಟೈಲ್ಸ್ ಕೆಲಸ ಮಾಡುತ್ತಿದ್ದ ಯುವಕನ ಕೊಲೆ: ಆರೋಪಿಗಳು ಪರಾರಿ - MURDER CASE

ETV Bharat Logo

Copyright © 2024 Ushodaya Enterprises Pvt. Ltd., All Rights Reserved.