ETV Bharat / state

ವಾಲ್ಮೀಕಿ ನಿಗಮ ಹಗರಣ: ಇಡಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ಪ್ರಶ್ನಿಸಿ ಹೈಕೋರ್ಟ್​​ಗೆ ಅರ್ಜಿ - Valmiki Corporation Scam - VALMIKI CORPORATION SCAM

ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಎಫ್​​​ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದಾರೆ.

High Court
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Jul 23, 2024, 2:15 PM IST

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮದ ತನಿಖೆಯ ವೇಳೆ ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳುವಂತೆ ಒತ್ತಡ ಹೇರಿರುವ ಆರೋಪದ ಮೇಲೆ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ತಮ್ಮ ವಿರುದ್ಧ ಎಫ್​​​ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯದ (ಇಡಿ) ಇಬ್ಬರು ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದಾರೆ.

ಮಾಜಿ ಸಚಿವ ಬಿ.ನಾಗೇಂದ್ರ ಒತ್ತಡದಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದಾಗಿ ಒಪ್ಪಿಕೊಳ್ಳುವಂತೆ ತಮ್ಮ ಮೇಲೆ ಇಡಿ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಹಾಗೂ, ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಕಲ್ಲೇಶ್.ಬಿ ದೂರು ನೀಡಿದ್ದರು.

ಸೋಮವಾರವಷ್ಟೇ (ಜುಲೈ 22ರಂದು) ನಗರದ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯ ಪೊಲೀಸರು, ಕಣ್ಣನ್ ಹಾಗೂ ಮಿತ್ತಲ್ ಎಂಬ ಇಡಿ ಅಧಿಕಾರಿಗಳ ವಿರುದ್ಧ ಎಫ್​ಐಆರ್ ದಾಖಲಿಸಿದ್ದರು. ಈ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಈ ಅಧಿಕಾರಿಗಳು ಮಂಗಳವಾರ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ.

ಇಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠದೆದುರು ಇಡಿ ಅಧಿಕಾರಿಗಳ ಪರ ಹಾಜರಾದ ಹಿರಿಯ ವಕೀಲ ಮಧುಕರ್ ದೇಶಪಾಂಡೆ, ಅರ್ಜಿದಾರರು ಇಡಿ ಅಧಿಕಾರಿಗಳಾಗಿದ್ದಾರೆ, ಅವರು ತಮ್ಮ ಅಧಿಕೃತ ಕರ್ತವ್ಯವನ್ನಷ್ಟೇ ನಿರ್ವಹಿಸಿದ್ದಾರೆ. ಹೀಗಿದ್ದರೂ ಇಡಿ ವಿಚಾರಣೆಗೆ ಹಾಜರಾಗಿದ್ದ ದೂರುದಾರರು, ವಿಚಾರಣೆ ಮುಗಿದ ಬಳಿಕ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಇ.ಡಿ. ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಇಡಿ ಅಧಿಕಾರಿಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಲು ಹಾಗೂ ಯಾವುದೇ ಪ್ರಾಥಮಿಕ ವಿಚಾರಣೆ ನಡೆಸದೇ ಇ.ಡಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಹಾಗಾಗಿ, ಅರ್ಜಿಯನ್ನು ಕೂಡಲೇ ವಿಚಾರಣೆಗೆ ಪರಿಗಣಿಸಬೇಕು ಎಂದು ಕೋರಿದರು.

ಇದನ್ನೂ ಓದಿ: ತನಿಖೆ ವೇಳೆ ನಾಗೇಂದ್ರ ಹೆಸರು ಹೇಳುವಂತೆ ಒತ್ತಡದ ಆರೋಪ; ಇಬ್ಬರು ED ಅಧಿಕಾರಿಗಳ ವಿರುದ್ಧವೇ ಎಫ್ಐಆರ್ - FIR against two ED officers

ಅದಕ್ಕೆ ಒಪ್ಪಿದ ನ್ಯಾಯಪೀಠ, ಮಧ್ಯಾಹ್ನ 2.30ಕ್ಕೆ ಅರ್ಜಿ ವಿಚಾರಣೆ ನಡೆಸಲಾಗುವುದು. ಅರ್ಜಿಯ ಪ್ರತಿಯನ್ನು ರಾಜ್ಯ ಸರ್ಕಾರದ ಪರ ವಕೀಲರಿಗೆ ಒದಗಿಸುವಂತೆ ಸೂಚಿಸಿತು. ಇಡಿ ಅಧಿಕಾರಿಗಳ ವಿರುದ್ಧ ಆರೋಪಿಸಿರುವ ಕಲ್ಲೇಶ್ ಮೊದಲು ಶೇಷಾದ್ರಿಪುರಂ ಠಾಣೆಗೆ ದೂರು ನೀಡಿದ್ದರು. ಆ ಬಳಿಕ, ಸ್ಥಳದ ಆಧಾರದಲ್ಲಿ ದೂರನ್ನು ವರ್ಗಾವಣೆ ಪಡೆದಿರುವ ವಿಲ್ಸನ್ ಗಾರ್ಡನ್ ಠಾಣಾ ಪೊಲೀಸರು ಇಡಿ ಅಧಿಕಾರಿಗಳಿಬ್ಬರ ವಿರುದ್ಧ ಎಫ್.ಐ.ಆರ್ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಬಾರದೆಂದು ಕೇಂದ್ರ ವಾಮಮಾರ್ಗ ಅನುಸರಿಸುತ್ತಿದೆ: ಸಿಎಂ ಸಿದ್ದರಾಮಯ್ಯ - CM Siddaramaiah

ETV Bharat Logo

Copyright © 2025 Ushodaya Enterprises Pvt. Ltd., All Rights Reserved.